ಗುಂಡ್ಲುಪೇಟೆ: ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳು ಇನ್ನೂ ಸಹ ದುಸ್ಥಿತಿಯಲ್ಲಿದ್ದು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬಡಾವಣೆ ಗಳಲ್ಲಿನ ಕಾಂಕ್ರಿಟ್ ರಸ್ತೆ ಕಾಮಗಾರಿ ಹಾಗೂ ಬಾಚಹಳ್ಳಿ, ಬಂಡೀಪುರ, ಬಾಚ ಹಳ್ಳಿ ಹುಲ್ಲಾಪುರ-ಕಡಬೂರು ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ,…
ಪ್ರತ್ಯೇಕ ಪ್ರತಿಭಟನೆ; ಬಿಜೆಪಿ ವಿರುದ್ಧ `ಕೈ’ ಆಕ್ರೋಶ, ಶಿಕ್ಷಣ ಸಚಿವರ ನೇಮಕಕ್ಕೆ ಸಂಘಟನೆ ಆಗ್ರಹ
February 10, 2019ಚಾಮರಾಜನಗರ: ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಆಪರೇಷನ್ ಕಮಲ ನಡೆಸುತ್ತಿರುವುದಾಗಿ ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹಾಗೂ ಶಿಕ್ಷಣ ಸಚಿವರನ್ನು ನೇಮಿಸದೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳ ನಡೆ ಖಂಡಿಸಿ ನಗರದಲ್ಲಿಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯ ಕರ್ತರು ಪ್ರತ್ಯೇಕವಾಗಿ ಪ್ರತಿಭಟಿಸಿದರು. ಕಾಂಗ್ರೆಸ್ ಆಕ್ರೋಶ: ರಾಜ್ಯದಲ್ಲಿ ಆಡ ಳಿತದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಆಪರೇಷನ್ ಕಮಲ ನಡೆಸಿ ಪತನಗೊಳಿಸುವ ಹುನ್ನಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯ ಕರ್ತರು ಆರೋಪಿಸಿದರು. ನಗರದ ಸತ್ತಿ ರಸ್ತೆಯಲ್ಲಿ ಇರುವ ಪಕ್ಷದ…
ವಕೀಲನ ಮೇಲೆ ದೌರ್ಜನ್ಯ ಆರೋಪ ತಪ್ಪೆಸಗಿರುವ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ 2 ದಿನ ಗಡುವು
February 10, 2019ಚಾಮರಾಜನಗರ: ಜಿಲ್ಲಾ ವಕೀಲರ ಸಂಘದ ಸದಸ್ಯ ಹಾಗೂ ಗುಂಡ್ಲುಪೇಟೆ ವಕೀಲ ರವಿ ಅವರನ್ನು ವಿನಾಕಾರಣ ಬಂಧಿಸಿದ ಗುಂಡ್ಲುಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ಬಾಲಕೃಷ್ಣೇಗೌಡ, ಸಬ್‍ಇನ್ಸ್ ಪೆಕ್ಟರ್ ಲತೇಶ್ ಕುಮಾರ್‍ರನ್ನು ಇನ್ನೆರೆಡು ದಿನದಲ್ಲಿ ಅಮಾನತ್ತುಗೊಳಿಸದಿದ್ದರೆ, ರಾಜ್ಯಾದ್ಯಂತ ಹೋರಾಟ ವಿಸ್ತರಿಸುವುದಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರ ಇಂದುಶೇಖರ್ ಎಚ್ಚರಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕೀಲ ರವಿ ಅವರ ಮೇಲೆ ಎಫ್‍ಐಆರ್ ದಾಖಲಾಗಿರಲಿಲ್ಲ. ಅರೆಸ್ಟ್ ವಾರೆಂಟ್ ಸಹ ಜಾರಿ ಆಗಿರಲಿಲ್ಲ. ಅಲ್ಲದೆ ರವಿ ಅವರಿಗೆ…
ಬಜೆಟ್‍ನಲ್ಲಿ ಚಾಮರಾಜನಗರ ಜಿಲ್ಲೆಗೆ ದಕ್ಕಿದ್ದು 8.5 ಕೋಟಿ ರೂ. ಮಾತ್ರ
February 9, 2019ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ 2,34,153 ಕೋಟಿ ರೂ. ಬಜೆಟ್‍ನಲ್ಲಿ ಜಿಲ್ಲೆಗೆ ನಿಗದಿಪಡಿಸಿ ನೀಡಿರುವುದು ಕೇವಲ 8.5 ಕೋಟಿ ಮಾತ್ರ. ಇದು ಜಿಲ್ಲೆಯ ಜನರಲ್ಲಿ ನಿರಾಶೆ ಮೂಡಿಸಿದೆ. ಜಿಲ್ಲಾ ಕೇಂದ್ರವಾದ ಚಾಮರಾಜನಗರ ದಲ್ಲಿ ಈಗಾಗಲೇ ಮುಚ್ಚಿ ಹೋಗಿರುವ ರೇಷ್ಮೆ ಕಾರ್ಖಾನೆಯ ಪುನಶ್ಚೇತನಕ್ಕಾಗಿ 5 ಕೋಟಿ ರೂ. ಮತ್ತು ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣ ಹಾಗೂ ಯುವಕರಿಗೆ ತರಬೇತಿ ನೀಡಲು 2 ಕೋಟಿ ರೂ.ಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಲಾಗಿದೆ. ಇದಲ್ಲದೇ ಚಾಮ ರಾಜನಗರ ಜಿಲ್ಲೆ ಸೇರಿದಂತೆ 10…
ವಕೀಲನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಮೂರನೇ ದಿನಕ್ಕೆ ಕಾಲಿಟ್ಟ ವಕೀಲರ ಪ್ರತಿಭಟನೆ
February 9, 2019ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ವಕೀಲ ರವಿ ಮೇಲೆ ಯಾವುದೇ ಸಕಾರಣವಿಲ್ಲದೆ ಗುಂಡ್ಲುಪೇಟೆ ವೃತ್ತ ನಿರೀ ಕ್ಷಕ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ವನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘ ನ್ಯಾಯಾಲಯ ಕಲಾಪಗಳಿಂದ ಹೊರಗುಳಿದು ಕಳೆದ ಮೂರು ದಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಚಾಮರಾಜನಗರದ ಜಿಲ್ಲಾ ನ್ಯಾಯಾಲ ಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಮುಂದೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅವರ ನೇತೃತ್ವದಲ್ಲಿ ಇಂದು ಕೂಡ ಪ್ರತಿಭಟನೆ ನಡೆಸಿದರು. ವಕೀಲ ರವಿ ಮೇಲೆ ಹಲ್ಲೆ ಮಾಡಿ…
ರಾಜ್ಯ ಬಜೆಟ್‍ನಿಂದ ರೈತರಿಗೆ ಏನೇನೂ ಉಪಯೋಗ ಇಲ್ಲ
February 9, 2019ಚಾಮರಾಜನಗರ: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿ ಸಿದ ರಾಜ್ಯ ಬಜೆಟ್ ಚುನಾವಣಾ ದೃಷ್ಟಿಯಿಂದ ಕೂಡಿದೆ. ರೈತರ ಓಟು ಪಡೆಯಲು ರೈತರ ಬಜೆಟ್ ಎಂದು ಬಿಂಬಿಸುವ ಸಲುವಾಗಿ ಹಲವಾರು ಬಾರಿ ರೈತರ ಹೆಸರನ್ನು ಬಳಸಲಾಗಿದೆ. ಈ ಬಜೆಟ್‍ನಿಂದ ರೈತ ಸಮುದಾಯಕ್ಕೆ ಏನೇನೂ ಉಪಯೋಗ ಇಲ್ಲ ಎಂದು ರೈತ ಸಂಘದ ನೂತನ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ಗಾತ್ರ ದೊಡ್ಡದು….
ಸಫಾಯಿ ಕರ್ಮಚಾರಿಗಳಿಗೆ ಸಮರ್ಪಕವಾಗಿ ಸೌಲಭ್ಯ ತಲುಪಿಸಿ
February 7, 2019ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ತಾಕೀತು ಚಾಮರಾಜನಗರ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲ ಯೋಜನೆಗಳು ಹಾಗೂ ಮೂಲ ಸೌಲಭ್ಯಗಳನ್ನು ಅಧಿಕಾರಿಗಳು ಸಮರ್ಪಕ ವಾಗಿ ತಲುಪಿಸಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮಣಿ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಇಂದು ಸಫಾಯಿ ಕರ್ಮಚಾರಿ ಗಳ ಕುಂದು ಕೊರತೆ ಹಾಗೂ ಸಫಾಯಿ ಕರ್ಮಚಾರಿಗಳ ಸೌಲಭ್ಯಗಳ ಕಾರ್ಯ ಕ್ರಮ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಸಫಾಯಿ ಕರ್ಮಚಾರಿಗಳ…
ಖಾಸಗಿ ಬಸ್-ಪಿಕಪ್ ವಾಹನ ಮುಖಾಮುಖಿ ಡಿಕ್ಕಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
February 7, 2019ಚಾಮರಾಜನಗರ: ಖಾಸಗಿ ಬಸ್ ಮತ್ತು ಪಿಕಪ್ ವಾಹನ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಹೊಂಗನೂರು ಗ್ರಾಮ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ. ಚಾಮರಾಜನಗರದಿಂದ ಕಾಗಲವಾಡಿ, ಹೊಂಗನೂರು, ಇರಸವಾಡಿ ಮಾರ್ಗವಾಗಿ ಯಳಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ವಿರುದ್ಧ ದಿಕ್ಕಿನಲ್ಲಿ ಬಾಳೆಕಾಯಿ ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಎರಡೂ ವಾಹನಗಳೂ ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಬದಿ ಜಮೀನಿಗೆ ನುಗ್ಗಿ ನಿಂತಿದ್ದವು. ಅಪಘಾತದಲ್ಲಿ ಬಸ್‍ನಲ್ಲಿದ್ದ…
ಹಳ್ಳಕ್ಕೆ ಬೈಕ್ ಉರುಳಿ ಸವಾರ ಸಾವು
February 7, 2019ಗುಂಡ್ಲುಪೇಟೆ: ನಿಯಂತ್ರಣ ತಪ್ಪಿದ ಬೈಕ್ ಹಳ್ಳಕ್ಕೆ ಉರುಳಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ, ಹಿಂಬದಿ ಸವಾರ ಗಾಯ ಗೊಂಡ ಘಟನೆ ಇಂದು ಗುಂಡ್ಲುಪೇಟೆ-ಬೇಗೂರು ರಸ್ತೆಯ ಹಿರಿಕಾಟಿ ಗೇಟ್ ಬಳಿ ಸಂಭವಿಸಿದೆ. ಚಾಮರಾಜನಗರದ ದಿನಸಿ ವ್ಯಾಪಾರಿ ಶ್ರೀನಿವಾಸ್ (54) ಅಪ ಘಾತದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರ ಆರೀಫ್ ಗಾಯ ಗೊಂಡಿದ್ದಾರೆ. ಶ್ರೀನಿವಾಸ್ ಅವರು ತಮ್ಮ ಸ್ನೇಹಿತ ಆರೀಫ್ ಅವ ರೊಂದಿಗೆ ಬೇಗೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದಾಗ ಅವರ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿ ಹಳ್ಳಕ್ಕೆ ಉರುಳಿದೆ…
ಸಲಗ ಹತ್ಯೆ; ದಂತ ಅಪಹರಣ
February 7, 2019ಹನೂರು: ಕಾವೇರಿ ವನ್ಯಧಾಮದ ಕೊತ್ತನೂರು ಅರಣ್ಯ ಪ್ರದೇಶದಲ್ಲಿ ಒಂಟಿ ಸಲಗವೊಂದನ್ನು ನಾಡ ಬಂದೂಕಿನಿಂದ ಹತ್ಯೆ ಮಾಡಿ ದಂತ ಕಳವು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವಿವರ : ರಾಜ್ಯದ ಪ್ರಸಿದ್ದ ಚಿಕ್ಕಲ್ಲೂರು ಜಾತ್ರೆಯ ಸಂದರ್ಭದಲ್ಲಿ ಸುಮಾರು 50 ವರ್ಷದ ಗಂಡಾನೆಯೊಂದನ್ನು ಬೇಟೆಗಾರರು ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಿ, ಆಸ್ಯಿಡ್ ಬಳಸಿ ಆನೆಯ ದಂತಗಳನ್ನು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಭಾನುವಾರ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಆನೆಯ ಕಳೆಬರಹ ಪತ್ತೆಯಾಗಿದ್ದು, ಮಾಹಿತಿಯನ್ನು ಹಿರಿಯ…