ಕೊಳ್ಳೇಗಾಲ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ಕು ಮನೆ ಗಳು ಸಂಪೂರ್ಣ ಜಖಂಗೊಂಡಿದ್ದು, ಮನೆ ಯಲ್ಲಿದ್ದ ಲಕ್ಷಾಂತರ ಮೌಲ್ಯದ ಸಾಮಗ್ರಿ ಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮ ವಾಗಿರುವ ದುರ್ಘಟನೆ ಬುಧವಾರ ರಾತ್ರಿ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಾಳ್ಯ ಗ್ರಾಮದ ವೆಂಕಟನಾಯಕ, ನಾಗ ಮಣಿ, ವೆಂಕಟಮ್ಮ ಹಾಗೂ ಪುಟ್ಟಮಾದಮ್ಮ ಎಂಬುವರಿಗೆ ಸೇರಿದ ಮನೆಗಳು ಸಿಲಿಂಡರ್ ಸ್ಫೋಟದಿಂದಾಗಿ ಜಖಂಗೊಂಡಿವೆÉ. ಮನೆಗ ಳಿಗೆ ಬೆಂಕಿ ವ್ಯಾಪಿಸಿದ್ದನ್ನು ಕಂಡ ಅಕ್ಕಪ ಕ್ಕದ ನಿವಾಸಿಗಳು ಸಹಾ ಜಾಗೃತರಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಜೊತೆ…
ನಾಳೆ ಫ್ರೌಢಶಾಲೆ ನೂತನ ಕೊಠಡಿ, ವಿದ್ಯಾರ್ಥಿನಿಲಯ ಉದ್ಘಾಟನೆ
February 7, 2019ಚಾಮರಾಜನಗರ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವತಿಯಿಂದ ನಿರ್ಮಾಣ ಗೊಂಡಿರುವ ಯಳಂದೂರು ತಾಲೂಕಿನ ಕೆಸ್ತೂರು ಸರ್ಕಾರಿ ಫ್ರೌಢಶಾಲೆಯ ಹೆಚ್ಚುವರಿ ನೂತನ ಕೊಠಡಿ ಹಾಗೂ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯಗಳ ಉದ್ಘಾಟನೆ ಕಾರ್ಯ ಕ್ರಮವನ್ನು ಫೆಬ್ರವರಿ 9 ರಂದು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವರು. ಸಂಸದ ಆರ್.ದ್ರುವನಾರಾಯಣ ಉದ್ಘಾಟನೆ ನೆರವೇರಿಸುವರು. ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಶಾಸಕರಾದ ಮರಿತಿಬ್ಬೇ ಗೌಡ, ಆರ್.ಧರ್ಮಸೇನ, ಸಂದೇಶ್…
ಫೆ.15, ಚಾಮರಾಜನಗರದಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಕಾರ್ಯಾರಂಭ
February 7, 2019ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಇದೇ ತಿಂಗಳ 15 ರಿಂದ ಪಾಸ್‍ಪೋರ್ಟ್ ಸೇವಾ ಕೇಂದ್ರ ಕಾರ್ಯಾ ರಂಭವಾಗಲಿದೆ. ಈ ಮೂಲಕ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಲಿದೆ. ಚಾಮರಾಜನಗರ ಸಂತೇಮರಹಳ್ಳಿ ವೃತ್ತದ ಬಳಿ ಇರುವ ಮುಖ್ಯ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭವಾಗಲಿದ್ದು ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ತೆರೆಯಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಂಸದ ಆರ್.ಧ್ರುವನಾರಾ ಯಣ್ ಕಳೆದ…
ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ದಸಂಸ ಪ್ರತಿಭಟನೆ
February 7, 2019ಯಳಂದೂರು: ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ದಸಂಸನ ಜಿಲ್ಲಾ ಸಂಚಾಲಕ ಸಿ. ರಾಜಣ್ಣ ಮಾತನಾಡಿ, ಯಳಂದೂರು ತಾಲೂಕು ಕೇಂದ್ರವಾಗಿದೆ. ಇಲ್ಲಿ 30 ಹಾಸಿಗೆಗಳ ಆಸ್ಪತ್ರೆ ಮಾತ್ರ ಇದೆ. ಆದರೆ ಒಳ ಹಾಗೂ ಹೊರ ರೋಗಿಗಳ ಸಂಖ್ಯೆ ಅಧಿಕವಾಗಿದೆ. ಮೂಲ ಸೌಕರ್ಯಗಳಿಲ್ಲದೆ ವೈದ್ಯರು ಹಾಗೂ ಶುಶ್ರೂಶಕರಿಗೆ ಸಮಸ್ಯೆಯಾಗಿದೆ. ಕೊಠಡಿ ಹಾಗೂ ಹಾಸಿಗೆ ಕೊರತೆಯಿಂದ ದೂರದ ಚಾಮರಾಜನಗರ, ಕೊಳ್ಳೇಗಾಲ, ಮೈಸೂರಿನ ಆಸ್ಪತ್ರೆಗೆ…
ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ
February 7, 2019ಗುಂಡ್ಲುಪೇಟೆ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಎಸ್ಸಿ ಮತ್ತು ಎಸ್ಟಿ ಬಡಾವಣೆಯ ರಸ್ತೆಗಳನ್ನು ಉತ್ತಮವಾಗಿ ಕಾಂಕ್ರೀಟಿಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್ ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಪರಿ ಶಿಷ್ಠ ಜಾತಿ ಮತ್ತು ಪಂಗಡಗಳ ಬಡಾವಣೆಯ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಗ್ರಾಮೀಣ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರ ಬಡಾವಣೆಗಳ ರಸ್ತೆಗಳನ್ನೂ ಕಾಂಕ್ರೀ ಟಿಕರಣ ಮಾಡಲಾಗುವುದು…
ಬೆಂಗಳೂರಿನಲ್ಲಿರುವ ಸ್ವೀಕಾರ ಕೇಂದ್ರದ ವಿರುದ್ಧ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ಪ್ರತಿಭಟನೆ
February 6, 2019ಚಾಮರಾಜನಗರ: ಬೆಂಗಳೂರಿನಲ್ಲಿನ ಸ್ವೀಕಾರ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳು ವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಮಹಿಳಾ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಪಕ್ಷದ ಮಹಿಳಾ ಮೋರ್ಚಾ ಆಶ್ರಯ ದಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಸಾಗಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಬೆಂಗಳೂರು ನಗರದಲ್ಲಿನ ನಿಮ್ಹಾನ್ಸ್ ಕೇಂದ್ರದಲ್ಲಿನ ಸ್ವೀಕಾರ ಕೇಂದ್ರವು ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
February 6, 2019ಸಂತೇಮರಹಳ್ಳಿ: ಸಂತೇಮರ ಹಳ್ಳಿ ಭಾಗದ ಹಲವು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಗುದ್ದಲಿ ಪೂಜೆ ನೆರವೇರಿಸಿದರು. ಸಮೀಪದ ಕೆಂಪನಪುರ ಗ್ರಾಮದ ಎಸ್.ಸಿ ಬಡಾವಣೆಯಲ್ಲಿ 15 ಲಕ್ಷದ ರೂ. ವೆಚ್ಚ ದಲ್ಲಿ ಕಾಂಕ್ರಿಟ್ ಮತ್ತು ಚರಂಡಿ ಕಾಮಗಾ ರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಬಜೆಟ್ ಹತ್ತಿರವಿರುವುದರಿಂದ ತುರ್ತಾಗಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು, ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರು ಶೀಘ್ರವಾಗಿ ಕಾಮಗಾರಿ ಪೂರ್ಣ ಗೊಳಿ ಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ…
ಗುಣಾತ್ಮಕ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ; ಸಚಿವ ಸಿ.ಪುಟ್ಟರಂಗ ಶೆಟ್ಟಿ
February 6, 2019ಚಾಮರಾಜನಗರ: ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಕಿವಿಮಾತು ಹೇಳಿದರು. ನಗರದ ಉಪ್ಪಾರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಬೈಸಿಕಲ್‍ಗಳನ್ನು ವಿತರಿಸಿ ಅವರು ಮಾತನಾಡಿದರು. ಶಿಕ್ಷಣ ಬಹಳ ಮಹತ್ವವಾದದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಶಿಕ್ಷಣ ಪಡೆಯ ಬೇಕು. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳಿಗಾಗಿ ಆಸ್ತಿ ಮಾಡುವುದನ್ನು ಬಿಟ್ಟು, ಮಕ್ಕಳನ್ನೇ ಆಸ್ತಿಯಾಗಿ ಮಾಡಿ ಎಂದು ಪೋಷಕರಿಗೆ ಸಲಹೆ…
ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಸಂಘಟನೆಗಳ ಭಾರೀ ಪ್ರತಿಭಟನೆ
February 5, 2019ಹನೂರು: ಮಲೆಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳ ಜನತೆಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾ ಯಿಸಿ ಕರವೇ ಸ್ವಾಭಿಮಾನಿ ಬಣ ಹಾಗೂ ಕೊಳ್ಳೇಗಾಲ ತಾಲೂಕು ಜಯ ಕರ್ನಾಟಕ ಸಂಘಟನೆಗಳು ಹನೂರು ಪಟ್ಟಣ ದಲ್ಲಿಂದು ಭಾರೀ ಪ್ರತಿಭಟನೆ ನಡೆಸಿದರು. ಹನೂರು ಪಟ್ಟಣದ ಟಿ.ಕೆ.ಎನ್ ಪೆಟ್ರೋಲ್ ಬಂಕ್‍ನಿಂದ ಹೊರಟ ಮೆರ ವಣಿಗೆ ಪ್ರತಿಭಟನಾಕಾರರು, ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ಅಂಬೇ ಡ್ಕರ್ ವೃತ್ತದಿಂದ ಸಾಗಿ ಹನೂರು ವಿಶೇಷ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿ ಧರಣಿ ನಡೆಸಿದರು….
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
February 5, 2019ಗುಂಡ್ಲುಪೇಟೆ: ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮೀಣ ಪ್ರದೇಶದ ರಸ್ತೆಗಳ ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ತಾಲೂಕಿನ ಕುರುಬರಹುಂಡಿ ಸಮೀಪದ ನಾಗರತ್ನಮ್ಮ ಕಾಲೋನಿಯಲ್ಲಿ 10 ಲಕ್ಷ ರೂ.ಗಳ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯಂತೆ ಗ್ರಾಮಾಂತರ ಪ್ರದೇಶದಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದ ಹತ್ತು ಹಲವು ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ…