ಚಾಮರಾಜನಗರ: ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು. ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಹನ ಸವಾರರು ಪ್ರಾದೇಶಿಕ ಸಾರಿಗೆ ಇಲಾಖೆ ನಿಯಮಗಳನ್ನು ಪಾಲಿಸಬೇಕು. ಆಗ ಮಾತ್ರ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು. ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿ ರಸ್ತೆಯನ್ನು ಬಳಕೆ ಮಾಡುತ್ತಾರೆ. ಇದರಿಂದ ವಾಹನ ಚಾಲಕರಲ್ಲದೆ, ಸಾರ್ವಜನಿಕರು ಸಹ ಸಂಚಾರಿ ನಿಯಮಗಳನ್ನು ಪಾಲಿಸÀ…
ಚಿರತೆ ದಾಳಿಗೆ ಕರು ಬಲಿ; ಜನತೆಯಲ್ಲಿ ಆತಂಕ
February 5, 2019ಗುಂಡ್ಲುಪೇಟೆ: ಪಟ್ಟಣದ ಜನನಿಬಿಡ ಬಡಾವಣೆಯಲ್ಲಿ ಚಿರತೆಯೊಂದು ಕರುವನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಪಟ್ಟಣದ ಜೆಎಸ್‍ಎಸ್ ಕಾಲೇಜು ಪಕ್ಕದ ಅಶ್ವಿನಿ ಬಡಾವಣೆ ಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ಸೋಮವಾರ ಬೆಳಿಗ್ಗೆ ಕರುವಿನ ಕಳೇಬರ ನೋಡಿ ಬಡಾವಣೆ ನಿವಾಸಿ ಗಳು ಭಯಬೀತರಾಗಿದ್ದಾರೆ. ಬಡಾವಣೆಯಲ್ಲಿರುವ ಬಸವಣ್ಣ ಎಂಬುವರ ಮನೆಯ ಸಮೀಪ ಅರೆಬರೆ ತಿಂದು ಹಾಕಿದ್ದ ಕರುವಿನ ಕಳೇಬರ ಪತ್ತೆಯಾಗಿದ್ದು, ಅದರ ಪಕ್ಕದಲ್ಲಿ ಚಿರತೆಯ ಹೆಜ್ಜೆ ಗುರುತು ಕಂಡು ಬಂದಿದೆ. ಇದರಿಂದ ಆತಂಕಕ್ಕೊಳಗಾದ ನಿವಾಸಿಗಳು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು….
ಚಾಮರಾಜನಗರದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ನಮನ
February 2, 2019ಚಾಮರಾಜನಗರ: ಲಿಂಗೈಕ್ಯ ರಾದ ತುಮಕೂರು ಶ್ರೀಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮಿಗಳು ಇಡೀ ವಿಶ್ವಕ್ಕೆ ಪ್ರಸಿದ್ಧವಾದ ದಾಸೋಹ ಮಾಡಿದ್ದಾರೆ. ಬಡಮಕ್ಕಳಿಗೆ ಆಶ್ರಯ ಕೊಟ್ಟ ಹೆಗ್ಗಳಿಕೆ ಶ್ರೀಗಳಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ನ್ಯಾಯಾಲಯ ರಸ್ತೆಯಲ್ಲಿ ರುವ ವಿಶ್ವಹಿಂದು ಪರಿಷತ್ ಶಾಲೆಯ ಸಮೀಪದ ಮೈದಾನದಲ್ಲಿ ಡಾ. ವಿಷ್ಣು ವರ್ಧನ್ ಅಭಿಮಾನಿಗಳ ಸ್ನೇಹ ಬಳಗದ ವತಿಯಿಂದ ನಡೆದ ಡಾ. ಶ್ರೀ ಶಿವಕುಮಾರ ಸ್ವಾಮಿಗಳವರ ಗುರುನಮನ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬುದನ್ನು ಡಾ….
ಚಲಿಸುತ್ತಿದ್ದ ರೈಲು ಹತ್ತಲು ಹೋದ ವ್ಯಕ್ತಿಯ ಕಾಲು ತುಂಡು
February 2, 2019ಚಾಮರಾಜನಗರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೊಬ್ಬ ಕಾಲು ಕಳೆದುಕೊಂಡಿರುವ ಘಟನೆ ನಗರದ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದ ಕೆಂಪರಾಜು (40) ಕಾಲು ಕಳೆದುಕೊಂಡವರು. ವಿವರ: ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ 10.40ಕ್ಕೆ ಪ್ಯಾಸೆಂಜರ್ ರೈಲು ಹೊರಟಿತ್ತು. ರೈಲು ವೇಳೆಗೆ ಸರಿಯಾಗಿ ಚಾಲನೆ ಆಗುತ್ತಿತ್ತು. ಈ ವೇಳೆ ಕೆಂಪರಾಜು ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಕ್ಕೆ ಬಿದ್ದ ಎನ್ನಲಾಗಿದೆ. ಈತನ ಎಡಗಾಲಿನ ಮೇಲೆ ರೈಲಿನ ಚಕ್ರ ಹರಿಯಿತು….
ಹುಲಿಯನ್ನು ಗ್ರಾಮದಿಂದ ಕಾಡಿಗಟ್ಟಿದ ಅರಣ್ಯ ಸಿಬ್ಬಂದಿ
February 2, 2019ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಉದ್ಯಾನವನದ ವ್ಯಾಪ್ತಿಯ ಹಂಗಳ ಗ್ರಾಮದ ಸಮೀಪದ ಕಲಿಗೌಡನಹಳ್ಳಿ ಬಳಿ ಪ್ರತ್ಯಕ್ಷಗೊಂಡಿದ್ದ ಹುಲಿಯನ್ನು ಮರಳಿ ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡಂಚಿನ ಗ್ರಾಮವಾದ ಹಂಗಳ ಸಮೀಪದಲ್ಲಿ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಕಾರ್ಯಾಚರಣೆ ಮಾಡಲು ಮುಂದಾದ ಅರಣ್ಯ ಇಲಾಖೆಯ ವಾಚರ್ ರಾಮು ಅವರ ಕೈಯನ್ನು ಕಚ್ಚಿ ಗಾಯಗೊಳಿಸಿ ಪರಾರಿಯಾಗಿದ್ದ ಹುಲಿಯು ಶನಿವಾರ ಬೆಳಗ್ಗೆ ಹಂಗಳ ಸಮೀಪದಲ್ಲಿರುವ ಕಲಿಗೌಡನ ಹಳ್ಳಿಯ ಮಾದೇಗೌಡ ಎಂಬುವವರ ಟೊಮೋಟೊ ಹೊಲದಲ್ಲಿ ಅವಿತುಕೊಂಡಿತ್ತು. ನಂತರ…
ಕೇಂದ್ರ ಬಜೆಟ್ ಪರ ಬಿಜೆಪಿ, ವಿರುದ್ಧ ರೈತ ಸಂಘ ಪ್ರತಿಭಟನೆ
February 2, 2019ಚಾಮರಾಜನಗರ: ಕೇಂದ್ರ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್ ಜನಪರವಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ದರೆ. ಈ ಬಜೆಟ್ ರೈತ ವಿರೋಧಿ ಬಜೆಟ್ ಆಗಿದೆ ಎಂದು ಆರೋಪಿಸಿ ರೈತರು ನಗರ ದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ಸಂಭ್ರಮ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾ ರದ ಬಜೆಟ್ ಜನಪರವಾಗಿದೆ. ರೈತರು ಹಾಗೂ ಬಡವರ ಪರವಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರು ಸಂಭ್ರಮಾಚರಣೆ ಮಾಡಿದರು. ಇಲ್ಲಿನ…
ಜಿಲ್ಲೆಯನ್ನು ಮತ್ತೇ ವಶಕ್ಕೆ ಪಡೆಯಲು ಶ್ರಮಿಸಿ: ಆರ್.ಧ್ರುವನಾರಾಯಣ್
January 30, 2019ಗುಂಡ್ಲುಪೇಟೆ: ಕಾಂಗ್ರೆಸ್ ಭದ್ರಕೋಟೆಯಾಗಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಕೈ ವಶ ಮಾಡಿಕೊಳ್ಳಲು ಇಂದಿನಿಂದಲೇ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ಕರೆ ನೀಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮುಂಬ ರುವ ಲೋಕಸಭೆ ಮತ್ತು ಪುರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಚಾಮರಾಜನಗರ ಜಿಲ್ಲೆಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮುಂದಿನ ಲೋಕ ಸಭಾ ಚುನಾವಣೆಯಲ್ಲಿಯೂ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮುಖೇನ ಈ…
ದೋಷರಹಿತ ಪಟ್ಟಿ ತಯಾರಿಕೆಗೆ ಸಹಕರಿಸಲು ಮನವಿ: ಡಿಸಿ ಬಿ.ಬಿ.ಕಾವೇರಿ
January 30, 2019ಚಾಮರಾಜನಗರ: ಜಿಲ್ಲೆಯಲ್ಲಿ ಶೇ.100ರಷ್ಟು ದೋಷರಹಿತ ಮತ ದಾರರ ಪಟ್ಟಿ ತಯಾರಿಕೆಗೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮನವಿ ಮಾಡಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ಅಂತಿಮ ಮತದಾರರ ಪಟ್ಟಿ ಪ್ರಚಾರ ಹಾಗೂ ನಿರಂತರ ಪರಿಷ್ಕರಣೆ ಸಂಬಂಧ ನಡೆದ ವಿವಿಧ ಪಕ್ಷದ ಪ್ರತಿನಿಧಿಗಳ ಸಭೆಯ ಅಧ್ಯ ಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜ.1 ರಂದು ಅರ್ಹತಾ ದಿನಾಂಕ ನಿಗದಿಪಡಿಸಿ ತಯಾರಿಸಿರುವ ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು ಜ.16ರಂದು ಜಿಲ್ಲೆಯ…
ಸುಳವಾಡಿ ವಿಷ ಪ್ರಸಾದ ಪ್ರಕರಣ; ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
January 29, 2019ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳಿಗೆ ಫೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಮೈಸೂರಿನ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ನ್ಯಾಯಾಂಗ ಬಂಧನದ ಅವಧಿ ಮಂಗಳವಾರಕ್ಕೆ ಮುಕ್ತಾಯವಾದ ಹಿನ್ನೆಲೆ ಪೊಲೀಸರು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಳಿಗ್ಗೆ 11.30ಕ್ಕೆ ನಗರದ ಜಿಲ್ಲಾ ಪ್ರಧಾನ ಮತ್ತು ಸೆÉಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಸವರಾಜ ಎದುರು ಹಾಜರುಪಡಿಸಿದರು. ಈ ವೇಳೆ ವಿಚಾರಣೆ…
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ
January 29, 2019ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆ ಜೊತೆ ಅನಾಗರೀಕರಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿದ್ದ ರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರುಣಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಕುಂದುಕೊರತೆ ಸಭೆಯೊಂದರಲ್ಲಿ ತಮ್ಮನ್ನು ಪ್ರಶ್ನಿಸಿದ ಮಹಿಳೆ ಜೊತೆ ಸಿದ್ದರಾಮಯ್ಯ ಅವರು ಅಸಭ್ಯವಾಗಿ ಹಾಗೂ ಅನಾಗರೀಕರಾಗಿ ವರ್ತಿಸಿದ್ದಾರೆ. ಆಕೆಯ ಕೈಯಿಂದ ಮೈಕ್…