ಚಾಮರಾಜನಗರ: ಜಿಲ್ಲಾ ಕೆಂದ್ರ ದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬುಧವಾರ 5.5 ಕೋಟಿ ರೂ. ವೆಚ್ಚದಡಿ ನೂತನವಾಗಿ ನಿರ್ಮಾಣ ವಾಗಿರುವ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್‍ನ್ನು ಲೋಕಾರ್ಪಣೆ ಹಾಗೂ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ಕಾರ್ಯಕ್ರಮವನ್ನು ಸಂಸದ ಆರ್.ಧ್ರುವನಾರಾಯಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಿಂಥೆ ಟಿಕ್ ಟ್ರ್ಯಾಕ್‍ನ್ನು ನಿರ್ವಹಣೆ ಮಾಡುವ ಜವಾಬ್ದಾರಿ ಸಮರ್ಪಕವಾಗಿ ಕೈಗೊಳ್ಳ ಬೇಕಿದೆ. ಜಿಲ್ಲೆಯಲ್ಲಿ ಒಳ್ಳೆಯ ಕ್ರಿಡಾಪಟು ಗಳು ಇದ್ದಾರೆ. ಕ್ರೀಡೆಗೆ ಉತ್ತೇಜನ ನೀಡಲು ಹೆಚ್ಚಿನ ಅನುದಾನ ಬಿಡುಗಡೆಯಾಗುತ್ತಿದೆ. ಇದನ್ನು ಕ್ರೀಡಾ ಬೆಳವಣಿಗೆಗೆ…
ಬಿಳಿಗಿರಿ ರಂಗನಾಥ ಸನ್ನಿಧಿಯಲ್ಲಿ ಸಂಕ್ರಾಂತಿ ಆಚರಣೆ
January 17, 2019ಯಳಂದೂರು:ತಾಲೂಕಿನ ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟದಲ್ಲಿ ಸಂಕ್ರಾಂತಿ ಚಿಕ್ಕ ರಥೋ ತ್ಸವ ಇಲ್ಲದ ಕಾರಣ ಭಕ್ತರು ಕಾಶಿ ಗುರುಗಳ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ಮತ್ತು ಅಲಮೇಲು ರಂಗ ನಾಯಕಿ ಅಮ್ಮನವರಿಗೆ ಪೂಜೆ ಸಲ್ಲಿಸಿದರು. ಬುಧವಾರ ಬೆಳಿಗ್ಗೆಯಿಂದಲ್ಲೆ ದೇವಾಲ ಯದಲ್ಲಿ ಬಿಳಿಗಿರಿ ರಂಗಸ್ವಾಮಿ ಮತ್ತು ಅಲ ಮೇಲು ರಂಗನಾಯಕಿ ಅಮ್ಮನವರಿಗೆ ವಿಶೇಷ ಪೂಜಾ ಕೈಂಕಾರ್ಯ ನೇರವೇರಿಸಿದ ಬಳಿಕ, ದೇವರ ದರ್ಶನಕ್ಕೆ ಅನುವು ಮಾಡಿಕೊಡ ಲಾಯಿತು. ಸರತಿ ಸಾಲಿನಲ್ಲಿ ಸಾವಿರಾರು ಭಕ್ತರು ನಿಂತು ದೇವರ ದರ್ಶನ ಪಡೆದರು. ಗ್ರಾಮೀಣ…
ಕೊಳ್ಳೇಗಾಲ: ಕಿಚ್ಚು ಹಾಯಿಸಿ ಸಂಕ್ರಾಂತಿ ಆಚರಣೆ
January 17, 2019ಕೊಳ್ಳೇಗಾಲ: ಇಲ್ಲಿನ ಆದರ್ಶ ಬಡಾವಣೆಯ ನಿವಾಸಿಗಳು ಎತ್ತುಗಳಿಗೆ ಕಿಚ್ಚು ಹಾಯಿಸುವ ಮೂಲಕ ವಿಜೃಂಭಣೆಯಿಂದ ಸಂಕ್ರಾಂತಿ ಆಚರಿಸಿದರು. ಮಂಗಳವಾರ ಸಂಜೆ ಎತ್ತುಗಳಿಗೆ ಅಲಂಕಾರ ಮಾಡಿ, ಎತ್ತುಗಳನ್ನು ಕಿಚ್ಚು ಹಾಯಿಸುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಂಜು, ನಂಜುಂಡೇಗೌಡ, ರಮೇಶ್, ಪರಶಿವ, ಮುಫೀಜ್, ರಫೀಕ್, ದೊಳ್ಳಯ್ಯ ಇನ್ನಿತರರು ಇದ್ದರು.
ಕಾಡಾನೆ ದಾಳಿ: ಬಾಳೆ ಬೆಳೆ ನಾಶ
January 17, 2019ಬೇಗೂರು: ಬಾಳೆ ತೋಟಕ್ಕೆ ಕಾಡಾನೆ ಹಿಂಡು ದಾಳಿ ನಡೆಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಗಿಡಗಳನ್ನು ತುಳಿದು ನಾಶಪಡಿ ಸಿರುವ ಘಟನೆ ಸಮೀಪದ ಹೊರೆ ಯಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಕೇಶ್ ಎಂಬುವವರಿಗೆ ಸೇರಿದ ಜಮೀನಿಗೆ 8 ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆ ಬೆಳೆ ನಾಶಪಡಿಸಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 15 ದಿನಗಳ ಹಿಂದೆ ಇದೇ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು…
ಹೆಚ್‍ಎಸ್‍ಎಂ ಸೇವೆ ಅಮೂಲ್ಯ: ಸುತ್ತೂರು ಶ್ರೀ
January 17, 2019ಗುಂಡ್ಲುಪೇಟೆ: ಕ್ಷೇತ್ರ ಮತ್ತು ರಾಜ್ಯಮಟ್ಟ ದಲ್ಲಿ ಮಾಜಿ ಸಚಿವ ದಿ.ಹೆಚ್.ಎಸ್.ಮಹದೇವಪ್ರಸಾದ್ ಅವರ ಸೇವೆ ಅಮೂಲ್ಯವಾದುದು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಪಟ್ಟಣದ ಜೆಎಸ್‍ಎಸ್ ಅನುಭವಮಂಟಪದಲ್ಲಿ ದಿ.ಮಹದೇವ ಪ್ರಸಾದ್ ಅವರ ಅಭಿಮಾನಿಗಳ ಸಂಘದಿಂದ ಆಯೋಜಿಸಿದ್ದ ಹೆಚ್.ಎಸ್.ಮಹದೇವಪ್ರಸಾದ್ ಅವರ ಎರಡನೇ ವರ್ಷದ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಮಾಣಿಕ ಮತ್ತು ಕರ್ತವ್ಯ ನಿಷ್ಠೆಯಿಂದ ಕ್ಷೇತ್ರದ ಹಾಗೂ ರಾಜ್ಯದ ಅಭಿವೃದ್ಧಿಗೆ ತನ್ನದೇಯಾದ ಕೊಡುಗೆಯನ್ನು ಮಹದೇವ ಪ್ರಸಾದ್ ನೀಡಿದ್ದಾರೆ. ಈ ಮೂಲಕ ಜನಮಾನಸದಲ್ಲಿ ಶಾಶ್ವತ ವಾಗಿ ಉಳಿದಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ…
ಚಾಮರಾಜನಗರದಲ್ಲಿ ಶೀಘ್ರದಲ್ಲೇ ಪಾಸ್‍ಪೋರ್ಟ್ ಸೇವೆ ಸುದ್ದಿಗೋಷ್ಠಿಯಲ್ಲಿ ಸಂಸದ ಆರ್. ಧ್ರುವನಾರಾಯಣ್ ಭರವಸೆ
January 15, 2019ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಈ ತಿಂಗಳ ಅಂತ್ಯದಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭವಾಗಲಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಸೋಮ ವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಇರಲಿಲ್ಲ. ಇದರಿಂದ ನಾಗರಿಕರಿಗೆ ಬಹಳ ತೊಂದರೆ ಆಗುತ್ತಿತ್ತು. ಈ ತೊಂದರೆ ಯನ್ನು ತಪ್ಪಿಸುವಂತೆ ಅನೇಕರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಪಾಸ್‍ಪೋರ್ಟ್ ಕೇಂದ್ರ ಸ್ಥಾಪನೆ ಗಾಗಿ ಸರ್ಕಾರದ ಮೇಲೆ ಒತ್ತಡ ತಂದಿದ್ದೆ. ಇದಕ್ಕೆ…
ಸುಳವಾಡಿ ಪ್ರಸಾದಕ್ಕೆ ವಿಷ ಹಾಕಿದ ಪ್ರಕರಣ ಆರೋಪಿಗಳಿಗೆ ಮರಣದಂಡನೆಗೆ ಆಗ್ರಹಿಸಿ ಪ್ರತಿಭಟನೆ
January 15, 2019ಕೊಳ್ಳೇಗಾಲ: ಹನೂರು ಕ್ಷೇತ್ರ ವ್ಯಾಪ್ತಿಯ ಸುಳ್ವಾಡಿ ದೇಗುಲದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯಾಗ ಬೇಕು, ಕೊಳ್ಳೇಗಾಲದಲ್ಲಿ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತಾಲೂಕಿನ ನಾಲ್ಕು ಸಾವಿರಕ್ಕೂ ಅಧಿಕ ಮಂದಿಯ ಸಹಿ ಸಂಗ್ರಹಿಸಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಉಪವಿಭಾಗಾಧಿ ಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿದರು. ಸೋಮವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಎಂಜಿ ಎಸ್‍ವಿ ಕಾಲೇಜಿನಿಂದ ಮೆರವಣಿಗೆ ತೆರಳಿದ…
ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ
January 15, 2019ಕೊಳ್ಳೇಗಾಲ: ಕಬಡ್ಡಿ ಒಂದು ಅತ್ಯುತ್ತಮ ಕ್ರೀಡೆ ಯಾಗಿದ್ದು, ಈ ಹಿನ್ನೆಲೆ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ಅಗತ್ಯವಿದೆ ಎಂದು ಸಂಸದ ಧ್ರುವನಾರಾಯಣ್ ಹೇಳಿದರು. ಅವರು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆಯುವ ರಾಜ್ಯಮಟ್ಟದ ಜ್ಯೂನಿಯರ್ ಚಾಂಪಿಯನ್ ಶಿಪ್ ಕಬಡ್ಡಿ ಪಂದ್ಯಾವಳಿಗೆ ಚಾಮರಾಜನಗರ ಜಿಲ್ಲೆಯಿಂದ ತೆರಳಲಿರುವ ತಂಡದ ಆಟಗಾರರು ಹಾಗೂ ತರಬೇತುದಾರರಿಗೆ ಪಟ್ಟಣದ ಲಯನ್ಸ್ ಶಾಲಾ ಆವರಣದಲ್ಲಿ ಬೀಳ್ಕೊಟ್ಟು ಮಾತನಾಡಿದರು. ಶಾಸಕ ಎನ್.ಮಹೇಶ್ ಮಾತನಾಡಿ, ನಾನು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪೆÇ್ರೀತ್ಸಾಹ ನೀಡುತ್ತೇನೆ. ಅದರಲ್ಲೂ ವಿಶೇಷವಾಗಿ ಕಬಡ್ಡಿಗೆ ಹೆಚ್ಚು…
ಹೆದ್ದಾರಿಗಾಗಿ ಮನೆ ತೆರವುಗೊಳಿಸಿದ ಪರಿಹಾರಕ್ಕೆ ಆಗ್ರಹಿಸಿ ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ
January 15, 2019ಚಾಮರಾಜನಗರ: ರಸ್ತೆ ಅಗಲೀಕರಣ ವೇಳೆ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಟ್ಟಿಲ್ಲ ಮತ್ತು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ನಗರದ ಡಿವಿಯೇಷನ್ ರಸ್ತೆ ಬದಿಯ ನಿವಾಸಿಗಳು ವೃದ್ಧೆಯೊಬ್ಬರ ಶವವನ್ನು ರಸ್ತೆಯಲ್ಲಿ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು. ಡಿವಿಯೇಷನ್ ರಸ್ತೆ ಬದಿಯಲ್ಲಿ ವಾಸವಿದ್ದ ಪುಟ್ಟಸಿದ್ದಮ್ಮ (75) ಸೋಮವಾರ ಬೆಳಗಿನ ಜಾವ ನಿಧನರಾಗಿದ್ದರು. ಇವರ ಶವವನ್ನು ನಗರದ ಸಂತೇಮರಹಳ್ಳಿ ವೃತ್ತದ ಬಳಿಯ ರಸ್ತೆಯಲ್ಲಿ ಇಟ್ಟು ಕುಟುಂಬಸ್ಥರು, ನಿವಾಸಿಗಳು ಹಾಗೂ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ, ನಗರಸಭೆ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು…
ಮಲೆಮಹದೇಶ್ವರಬೆಟ್ಟ ಇನ್ನು ಮುಂದೆ ಹುಲಿ ಸಂರಕ್ಷಣಾ ವಲಯ
January 11, 2019ಚಾಮರಾಜನಗರ: ಹುಲಿ ಸಂರಕ್ಷಿತ ಮೀಸಲು ಅರಣ್ಯವಾಗಿ ಜಿಲ್ಲೆಯ ಪ್ರಸಿದ್ಧ ವನ್ಯಧಾಮ ಮಹದೇಶ್ವರ ಬೆಟ್ಟವನ್ನು ಘೋಷಿಸಲಾಗಿದೆ. ಈ ಪ್ರಸ್ತಾಪಕ್ಕೆ ಕೇಂದ್ರ ಅನುಮೋದನೆ ನೀಡಿದರೆ ಜಿಲ್ಲೆಯು ಮೂರು ಹುಲಿ ರಕ್ಷಿತಾರಣ್ಯ ವನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದರೊಂದಿಗೆ ರಾಜ್ಯದಲ್ಲಿ 6 ಹುಲಿ ಸಂರಕ್ಷಿತ ಅಭಯಾರಣ್ಯಗಳಿವೆ. 960 ಚ.ಕಿ.ಮೀ. ವ್ಯಾಪ್ತಿಯ ಮಲೆಮಹದೇಶ್ವರ ವನ್ಯಧಾಮವನ್ನು ಹುಲಿ ಮೀಸಲು ಅರಣ್ಯ ಎಂದು ಘೋಷಿಸಬೇಕು ಎಂದು ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಈ ನಿರ್ಣಯವನ್ನು ಕೇಂದ್ರ…