ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾ ಗೃಹ ಸಂಯುಕ್ತ ಆಶ್ರಯದಲ್ಲಿ ಅಕ್ಟೋ ಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾ ರಣಾಧೀನ ಖೈದಿಗಳಿಗೆ ಕಾನೂನು ಸೇವೆ ಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಜಿ. ಬಸವರಾಜ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ…
ಕಾಡು ಹಂದಿ ದಾಳಿ; ರಾಗಿ ಬೆಳೆ ನಾಶ
October 27, 2018ಚಾಮರಾಜನಗರ: ತಾಲೂಕಿನ ಅರಕಲವಾಡಿ ಗ್ರಾಮದಲ್ಲಿ ಕಾಡು ಹಂದಿಗಳು ಜಮೀನಿಗೆ ದಾಳಿ ಮಾಡಿ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ರಾಗಿ ಬೆಳೆ ನಾಶಪಡಿಸಿವೆ. ಗ್ರಾಮದ ದೊಡ್ಡಮ್ಮ ಬಿನ್ ವೆಂಕಟಯ್ಯ ಎಂಬುವರಿಗೆ ಸೇರಿದ 3 ಎಕರೆ ಜಮೀನಿನಲ್ಲಿ ರಾಗಿ ಬೆಳೆಯಲಾಗಿತ್ತು. ರಾತ್ರಿ ವೇಳೆ ಜಮೀನಿಗೆ ಲಗ್ಗೆ ಇಟ್ಟ ಕಾಡು ಹಂದಿಗಳುರಾಗಿ ಬೆಳೆಯನ್ನು ತಿಂದು, ತುಳಿದು ನಾಶ ಪಡಿಸಿವೆ. ಇದರಿಂದ ಸಾವಿರಾರು ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ನಷ್ಟಕ್ಕೆ ಒಳಗಾಗಿರುವ ದೊಡ್ಡಮ್ಮ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು…
ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹ: ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ
October 26, 2018ಚಾಮರಾಜನಗರ: ತಮಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ನಗರದಲ್ಲಿ ಗುರುವಾರ ಬೃಹತ್ ಪ್ರತಿ ಭಟನೆ ನಡೆಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ಇಲ್ಲಿನ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲೆಯಲ್ಲಿ ಒಳ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರು ಜಮಾಯಿಸಿದರು. ಅಲ್ಲಿಂದ ಭಿತ್ತಿಪತ್ರ ಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ…
ಶ್ರೀ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಗೆ
October 25, 2018ಚಾಮರಾಜನಗರ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಶ್ರೀ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಪ್ರವಾಸಿ ಮಂದಿರದಿಂದ ಆರಂಭವಾದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಮೆರವಣಿಗೆಯು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತದ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು. ಗಾಡಿಗೊಂಬೆ, ಡೊಳ್ಳುಕುಣಿತ, ವೀರಗಾಸೆ, ಗೊರವರಕುಣಿತ,…
ತೆರಕಣಾಂಬಿ ತಾಪಂ ಉಪ ಚುನಾವಣೆ `ಕೈ’ ಅಭ್ಯರ್ಥಿ ಪರ ಬಿರುಸಿನ ಪ್ರಚಾರ
October 24, 2018ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ನಾಯ್ಕ ಪರ ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಬಿರುಸಿನ ಪ್ರಚಾರ ನಡೆಸಿದರು. ತೆರಕಣಾಂಬಿ ಮತ್ತು ತೆರಕಣಾಂಬಿಹುಂಡಿ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ ಗಣೇಶ್ ಪ್ರಸಾದ್ ತಮ್ಮ ತಂದೆ ಮಾಜಿ ಸಚಿವ ದಿ.ಮಹದೇವಪ್ರಸಾದ್ ಮತ್ತು ತಾಯಿ ಡಾ.ಮೋಹನಕುಮಾರಿ ಅವಧಿಯಲ್ಲಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಿದ್ದು, ನೂತನ ಬಸ್ ನಿಲ್ದಾಣ, ಎಪಿಎಂಸಿ ಪ್ರಾಂಗಣ ನಿರ್ಮಾಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಐಟಿಐ ಕಾಲೇಜುಗಳ ನಿರ್ಮಾಣ…
ಬಸವಣ್ಣರ ಅನುಭವ ಮಂಟಪದಿಂದ ಮಾದರಿ ಆಡಳಿತ
October 23, 2018ಚಾಮರಾಜನಗರ: 12ನೇ ಶತಮಾನದ ಶ್ರೀ ಬಸವಣ್ಣ ಅವರ ಅನುಭವ ಮಂಟಪದ ಆಡಳಿತ ದೇಶಕ್ಕೆ ಮಾದರಿ ಆಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಶ್ರಯದಲ್ಲಿ ನಗರದ ಸರ್ಕಾರಿ ಪೇಟೆ ಶಾಲೆ ಆವರಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಬಸವಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಮೌಢ್ಯತೆ, ಅಸಮಾನತೆ, ಕಂದಾ ಚಾರದ ವಿರುದ್ಧ ಹೋರಾಟ ನಡೆಸಿದ್ದರು. ಸಮಾನತೆಗಾಗಿ ಹೋರಾಟ…
ಚಾಮರಾಜನಗರದಲ್ಲಿ ಡಾ.ಅಂಬೇಡ್ಕರ್ 127ನೇ ಜನ್ಮದಿನಾಚರಣೆ
October 22, 2018ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಜನರಲ್ಲಿರುವ ದೃಷ್ಠಿಕೋನ ಬದಲಾಯಿಸಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 127ನೇ ಜನ್ಮ ದಿನಾಚರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರನ್ನು (ಗಾಂಧೀಜಿ) ಯಾವ ಜಾತಿ ಎಂದು…
ಅರ್ಥಪೂರ್ಣವಾಗಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ
October 22, 2018ಚಾಮರಾಜನಗರ: ದೇಶದ ಭದ್ರತೆ, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಗಾಗಿ ಜೀವದ ಹಂಗು ತೊರೆದು ಹೋರಾಡಿ ವೀರ ಮರಣವನ್ನಪ್ಪಿದ ಪೊಲೀ ಸರಿಗೆ ಗೌರವ ನಮನ ಸಲ್ಲಿಸುವ ಸಲು ವಾಗಿ ನಡೆದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮ ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆಯಿತು. ಜಿಲ್ಲಾ ಪೊಲೀಸ್ ಕವಾಯಿತು ಮೈದಾನ ದಲ್ಲಿ 60ನೇ ವರ್ಷದ ಪೊಲೀಸ್ ಹುತಾ ತ್ಮರ ದಿನದ ಸ್ಮರಣೆ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾ ಗಿದ್ದ ಗೌರವ ವಂದನೆ ಕಾರ್ಯಕ್ರಮವು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೌರವಾನ್ವಿತ ಜಿಲ್ಲಾ ಮತ್ತು…
ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸಹಕರಿಸಲು ಮನವಿ
October 22, 2018ಚಾಮರಾಜನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ದೋಷರಹಿತ ವಾಗಿ ತಯಾರಿಸುವ ನಿಟ್ಟಿನಲ್ಲಿ ಕೈಗೊಂಡಿ ರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ರಾಜ ಕೀಯ ಪಕ್ಷಗಳು ಸಹಕಾರ ನೀಡಬೇ ಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಸಂಬಂಧ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ದಿನಾಂಕ 01.01.2019 ಕ್ಕೆ ಅರ್ಹತಾ ದಿನಾಂಕವೆಂದು ನಿಗದಿಪಡಿಸಿ, ವಿಧಾನಸಭಾ…
ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ
October 21, 2018ಹೂವಿನ ಅಲಂಕಾರಿಕ ಪ್ರತಿ ಕೃತಿ ನಿರ್ಮಾಣ, ಯುವಜನರ ಸೆಳೆಯುತ್ತಿರುವ ಸೆಲ್ಫಿ ಪಾಯಿಂಟ್, ಮಕ್ಕಳಿಗಾಗಿ ಕಾರಂಜಿ ನಿರ್ಮಾಣ ಚಾಮರಾಜನಗರ: ತೋಟ ಗಾರಿಕೆ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆರಂಭಗೊಂಡಿರುವ ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿದೆ. ಅ. 22ರವರೆಗೆ ನಡೆಯಲಿರುವ ಫಲ ಪುಷ್ಪ ಪ್ರದರ್ಶನವು ಮೊದಲ ದಿನವೇ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿ ಯಾಗಿದೆ. ಉದ್ಘಾಟನೆಗೊಂಡ ಕೂಡಲೇ ಜಿಲ್ಲೆಯ ಜನರು ಆಕರ್ಷಕ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಮುಗಿಬಿದ್ದರು. ಈ ಸಾಲಿನ ಫಲಪುಷ್ಪ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿ ಹೂವಿನ…