Tag: Chamarajanagar

ನ್ಯಾಯ ನೀಡುವಲ್ಲಿ ವಕೀಲರ ಸಹಕಾರ ಅಗತ್ಯ
ಚಾಮರಾಜನಗರ

ನ್ಯಾಯ ನೀಡುವಲ್ಲಿ ವಕೀಲರ ಸಹಕಾರ ಅಗತ್ಯ

May 30, 2018

ಚಾಮರಾಜನಗರ: ಕಕ್ಷಿದಾರರಿಗೆ ನ್ಯಾಯ ಒದಗಿ ಸುವಲ್ಲಿ ವಕೀಲರ ಸಹಕಾರ ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜು ತಿಳಿಸಿದರು. ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಏರ್ಪಡಿಸಿದ್ದ ನೂತನ ನ್ಯಾಯಾಧೀಶರಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದಿನ ನ್ಯಾಯಾಧೀಶರುಗಳಿಗೆ ಸಹಕಾರವನ್ನು ನೀಡಿದಂತೆ ನೂತನ ನ್ಯಾಯಾಧೀಶರುಗಳಿಗೂ ಸಹಕಾರ ನೀಡಿದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದಾಗಿದೆ ಎಂದರು. ನೂತನವಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ಸಿವಿಲ್ ನ್ಯಾಯಾ ಧೀಶರುಗಳಾದÀ ರಮೇಶ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿಶಾಲಾಕ್ಷಿ…

ತಾಲೂಕಿನ ವಿವಿಧೆಡೆ ಉತ್ತಮ ಮಳೆ
ಚಾಮರಾಜನಗರ

ತಾಲೂಕಿನ ವಿವಿಧೆಡೆ ಉತ್ತಮ ಮಳೆ

May 29, 2018

ಚಾಮರಾಜನಗರ:  ಚಾಮರಾಜನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಸೋಮವಾರ ಉತ್ತಮ ಮಳೆ ಯಾಯಿತು. ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೆ ಸುರಿದ ಧಾರಾಕಾರ ಮಳೆ ಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದ ರೈತರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಸಂತಸ ಮೂಡಿಸಿದರೆ, ಇನ್ನೊಂದೆಡೆ ವಾಹನ ಸವಾರರು ಹಾಗೂ ನಗರದ ಜನರಿಗೆ ಕಿರಿಕಿರಿ ಉಂಟಾಯಿತು. ನಗರದ ಬಹುತೇಕ ಎಲ್ಲ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿದೆ. ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದ ಮಳೆ ನೀರು ರಸ್ತೆ ತುಂಬೆಲ್ಲ ತುಂಬಿ ರಸ್ತೆಗಳು ಸಂಪೂರ್ಣ ಜಲಾವೃತ…

ಜಿಲ್ಲಾ ಕೇಂದ್ರಕ್ಕೆ ಹೆಚ್‍ಡಿಕೆ ಭೇಟಿ ನೀಡುವರೇ?
ಚಾಮರಾಜನಗರ

ಜಿಲ್ಲಾ ಕೇಂದ್ರಕ್ಕೆ ಹೆಚ್‍ಡಿಕೆ ಭೇಟಿ ನೀಡುವರೇ?

May 28, 2018

ಚಾಮರಾಜನಗರ:  ಜಿಲ್ಲಾ ಕೇಂದ್ರವಾದ ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಆರು ತಿಂಗ ಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿಯನ್ನು ಮೆಟ್ಟಿನಿಂತರವರು ಎಚ್.ಡಿ.ಕುಮಾರಸ್ವಾಮಿ. ಈಗ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿರುವ ಕಾರಣ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಯಾವಾಗ ಭೇಟಿ ನೀಡುತ್ತಾರೆ? ಶ್ರೀಚಾಮ ರಾಜೇಶ್ವರ ಸ್ವಾಮಿಯ ದರ್ಶನವನ್ನು ಯಾವಾಗ ಪಡೆಯುತ್ತಾರೆ? ಎಂಬ ಪ್ರಶ್ನೆ ಜಿಲ್ಲೆಯ ಜನರಲ್ಲಿ ಮೂಡಿದೆ. ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿಗಳು ಆರು ತಿಂಗಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿ ಇತ್ತು. ಇದಕ್ಕೆ ಪೂರಕವಾಗಿ ಎಸ್.ಆರ್. ಬೊಮ್ಮಾಯಿ,…

ಉತ್ತಮ ಬಾಂಧವ್ಯದಿಂದ ನ್ಯಾಯ ವಿತರಣೆ ಸುಲಭ
ಚಾಮರಾಜನಗರ

ಉತ್ತಮ ಬಾಂಧವ್ಯದಿಂದ ನ್ಯಾಯ ವಿತರಣೆ ಸುಲಭ

May 28, 2018

ಚಾಮರಾಜನಗರ:  ‘ನ್ಯಾಯಾ ಧೀಶರು ಹಾಗೂ ವಕೀಲರ ಬಾಂಧವ್ಯ ಉತ್ತಮ ವಾಗಿದ್ದರೆ ನ್ಯಾಯ ವಿತರಣೆ ಸುಲಭವಾಗ ಲಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜು ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯ ಆವರಣ ದಲ್ಲಿರುವ ಜಿಲ್ಲಾ ವಕೀಲರ ಸಂಘದ ಕಚೇರಿ ಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮ ದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಲ್.ಜೆ. ಭವಾನಿ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶ ಸಂದೇಶ್ ವಿ.ಭಂಡಾರಿ ಅವರಿಗೆ ಬೀಳ್ಕೊ ಡುಗೆ ನೀಡಿ ಅವರು ಮಾತನಾಡಿದರು. ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲ…

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

May 28, 2018

 ಗುಂಡ್ಲುಪೇಟೆಯಲ್ಲಿ ಉತ್ತಮ  ಉಳಿದೆಡೆ ಪ್ರತಿಭಟನೆಗೆ ಮಾತ್ರ ಸೀಮಿತ  ಎಂದಿನಂತೆ ಸಂಚರಿಸಿದ ವಾಹನಗಳು   ಸಾಲ ಮನ್ನಾಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ ಚಾಮರಾಜನಗರ: ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜ ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿ ಭಟನಾ ಮೆರವಣ ಗೆ ನಡೆಸಿದರು. ಕೊಳ್ಳೇಗಾಲದಲ್ಲಿ ಬೈಕ್ ರ್ಯಾಲಿ ನಡೆಸಲಾ ಯಿತು. ಹನೂರಿನಲ್ಲಿ ಪರಿಮಳಾ ನಾಗಪ್ಪ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಗುಂಡ್ಲುಪೇಟೆಯಲ್ಲಿ ಬಂದ್‍ಗೆ…

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ
ಚಾಮರಾಜನಗರ

ಸೋಲಿನ ಹೊಣೆ ನನ್ನದೇ: ಪ್ರೊ.ಕೆ ಆರ್ ಎಂ

May 27, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾನು ಸೋಲುನುಭವಿಸಿದ್ದೇನೆ. ಈ ಸೋಲಿಗೆ ಯಾರನ್ನು ದೂಷಿಸುವುದಿಲ್ಲ. ಸೋಲಿನ ಹೊಣೆಯನ್ನು ನಾನೇ ಹೊತ್ತೊ ಕೊಳ್ಳುತ್ತೇನೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಹೇಳಿದರು. ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಅವರು ಮಾತನಾಡಿದರು. ನನ್ನ ಸೋಲಿಗೆ ನಾನು ಯಾರನ್ನು ಹೊಣೆಗಾರರನ್ನಾಗಿ ಮಾಡು ವುದಿಲ್ಲ. ಕಾಲವಕಾಶ ಕಡಿಮೆ ಇದ್ದ ಕಾರಣ ಪ್ರಚಾರದಲ್ಲಿ ಸ್ವಲ್ಪ ಹಿನ್ನಡೆಯಾಯಿತು. ಆದರೂ…

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ
ಚಾಮರಾಜನಗರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ

May 27, 2018

ಚಾಮರಾಜನಗರ:  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಜಿಲ್ಲೆಯಲ್ಲಿ 5 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಹಾಗೂ ಸಹಾಯಕ ಚುನಾವ ಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಮತಗಟ್ಟೆ ಕುರಿತು ಚರ್ಚಿಸಲು ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ…

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು
ಚಾಮರಾಜನಗರ

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು

May 27, 2018

ಚಾಮರಾಜನಗರ:  ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ 32 ದೂರು ದಾಖಲಾದವು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದÀರ್ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವು ಭಾಗಗಳಿಂದ ನಾಗರಿಕರು ಸಮಸ್ಯೆ, ದೂರುಗಳನ್ನು ದೂರವಾಣ ಮೂಲಕ ಗಮನಕ್ಕೆ ತಂದರು. ಯಳಂದೂರು ಪಟ್ಟಣದಲ್ಲಿ ಕಸ ವಿಲೇವಾರಿಯಾಗುತ್ತಿಲ್ಲ. ತ್ಯಾಜ್ಯ…

ಜನಸ್ಪಂದನ ಸಭೆ
ಚಾಮರಾಜನಗರ

ಜನಸ್ಪಂದನ ಸಭೆ

May 27, 2018

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋ ಜಿಸಲಾಗುತ್ತದೆ. ಜಿಲ್ಲಾ ಪಂಚಾಯತ್‍ನ ಹಿರಿಯ ಅಧಿ ಕಾರಿಗಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮ ದಲ್ಲಿ ಹಾಜರಿರುತ್ತಾರೆ. ಜಿಲ್ಲಾ ಪಂಚಾ ಯತ್ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಸಂಬಂಧಿಸಿದ ದೂರು ಅರ್ಜಿಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿ ಸಲಾಗುತ್ತದೆ ಎಂದು ಜಿಲ್ಲಾ…

ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಸಾವು ಹಲವು ಮನೆಗಳ ಗೋಡೆ ಕುಸಿತ, ಫಸಲು ನಷ್ಟ
ಚಾಮರಾಜನಗರ

ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಸಾವು ಹಲವು ಮನೆಗಳ ಗೋಡೆ ಕುಸಿತ, ಫಸಲು ನಷ್ಟ

May 27, 2018

ಚಾಮರಾಜನಗರ:  ಸಿಡಿಲು ಬಡಿದು ಕೂಲಿ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ತಾಲೂ ಕಿನ ಬಿಸಲವಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ತಮಿಳುನಾಡಿನ ಸೇಲಂ ಮೂಲದ ಸೀತಮ್ಮ (25) ಮೃತಪಟ್ಟ ಮಹಿಳೆ. ಇವರ ಕುಟುಂಬ ಬಿಸಲವಾಡಿ ಕ್ವಾರೆಯಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಸೇಲಂಗೆ ತೆರಳಿದ್ದ ಅವರು ಗುರುವಾರ ರಾತ್ರಿ ಕ್ವಾರೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಮಳೆ ಬಂದ ಕಾರಣ ಬಿಸಲವಾಡಿ ಗ್ರಾಮದ ಬಳಿ ಮರದಡಿ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು…

1 68 69 70 71 72 74
Translate »