ಮೈಸೂರು: ಲೆಕ್ಕ ಪರಿಶೋಧಕರ ಪರಿಶ್ರಮದಿಂದ ಸರ್ಕಾರದ ತೆರಿಗೆ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ ಎಂದು ದಿ ಇನ್ಸ್‍ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತದ ಪ್ರಾದೇಶಿಕ ಕೌನ್ಸಿಲ್‍ನ ಮಾಜಿ ಅಧ್ಯಕ್ಷರೂ ಆದ ಹಿರಿಯ ಲೆಕ್ಕಪರಿಶೋಧಕ ಕೋತ ಎಸ್.ಶ್ರೀನಿವಾಸ್ ಹೇಳಿದರು. ಐಸಿಎಐ ದಕ್ಷಿಣ ಭಾರತದ ಪ್ರಾದೇಶಿಕ ಕೌನ್ಸಿಲ್‍ನ ಮೈಸೂರು ಶಾಖೆ ವತಿಯಿಂದ ಮೈಸೂರಿನ ಬೋಗಾದಿಯ ಬ್ಯಾಂಕ್ ಎಂಪ್ಲಾಯೀಸ್ ಕಾಲೋನಿಯಲ್ಲಿರುವ ಐಸಿಎಐ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಿಎ (ಚಾರ್ಟರ್ಡ್ ಅಕೌಂಟೆಂಟ್) ದಿನಾಚರಣೆ ಹಾಗೂ ಐಸಿಎಐ…