ಮಡಿಕೇರಿ: ಭಾಗಮಂಡಲ ಸಮೀಪದ ಚೇರಂಗಾಲ ಗ್ರಾಮದಲ್ಲಿರುವ ಕಾವೇರಿಯ ಮೂಲ ಸ್ಥಾನದಲ್ಲಿ ಸುಮಾರು 12 ಕೋಟಿ ರೂ.ವೆಚ್ಚದಲ್ಲಿ ದೇವಾಲಯ ನಿರ್ಮಿಸಲು ಶ್ರೀ ಕನ್ನಿಕಾವೇರಿ ಸೇವಾ ಟ್ರಸ್ಟ್ ನಿರ್ಧರಿಸಿದೆ ಎಂದು ಟ್ರಸ್ಟ್‍ನ ಸಂಚಾಲಕ ಮುಲ್ಲೇಂಗಡ ಶಂಕರಿ ಪೊನ್ನಪ್ಪ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಂಕರಿ ಪೊನ್ನಪ್ಪ, ಚೇರಂ ಗಾಲ ಗ್ರಾಮದ ಹೊಸೂರು ಎಂಬಲ್ಲಿ ಕಾವೇರಿಯ ಮೂಲ ಸ್ಥಾನವಿದ್ದು, ಈ ಕ್ಷೇತ್ರದ ಅಭಿವೃದ್ಧಿಗಾಗಿ ಕಳೆದ 7 ದಶಕ ಗಳಿಂದ ಹೊಸೂರು ನಾಣಯ್ಯ ದಂಪತಿ ಪ್ರಯತ್ನಿಸಿದ್ದರೂ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಇದೀಗ ಈ…