ಮೈಸೂರು: ಪ್ರಥಮ ಸ್ವಚ್ಛನಗರಿ ಎಂಬ ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಮೈಸೂರು ಜನತೆಗೆ ನಿರಾಸೆಯಾಗಿದ್ದು, 2018ರ ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾಂಸ್ಕೃತಿಕ ನಗರಿ 8ನೇ ಸ್ಥಾನಕ್ಕೆ ಕುಸಿದಿದೆ. ಆದರೆ 3 ರಿಂದ 10 ಲಕ್ಷ ಜನ ಸಂಖ್ಯೆಹೊಂದಿರುವ ದೇಶದ 220 ನಗರಗಳ ಪೈಕಿ ಪಾರಂಪರಿಕ ನಗರಿ ಮೈಸೂರಿಗೆ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಬಂದಿರುವುದು ಹೆಗ್ಗಳಿಕೆಯಾಗಿದೆ. ಮಧ್ಯಪ್ರದೇಶದ ಇಂದೂರಿನಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛನಗರ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ಮೇಯರ್ ಬಿ.ಭಾಗ್ಯವತಿ, ಪಾಲಿಕೆ ಕಮೀಷ್ನರ್…