Tag: coalition government

ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮತ್ತೊಮ್ಮೆ ವಿಪ್
ಮೈಸೂರು

ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮತ್ತೊಮ್ಮೆ ವಿಪ್

July 18, 2019

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಆರಂಭಕ್ಕೂ ಮುನ್ನ ಸದನದಲ್ಲಿ ಭಾಗವಹಿಸುವಂತೆ ಅತೃಪ್ತ ಶಾಸಕರಿಗೆ ವಿಪ್ ಜಾರಿಯಾಗಿತ್ತು. ಈಗ ವಿಶ್ವಾಸ ಮತ ಯಾಚನೆ ಹಿನ್ನೆಲೆಯಲ್ಲಿ ಗುರುವಾರ ಕಲಾಪದಲ್ಲಿ ಭಾಗಿಯಾಗುವಂತೆ ಮತ್ತೊಮ್ಮೆ ವ್ಹಿಪ್ ಜಾರಿ ಮಾಡಲಾ ಗಿದೆ ಎಂದು ವಿಧಾನಸಭೆ ಆಡಳಿತಪಕ್ಷದ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಹೇಳಿದ್ದಾರೆ. ಪ್ರಕೃತಿ ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಎಲ್ಲಾ ನಾಯಕರ ಜೊತೆ ಚರ್ಚಿಸಿ ಶಾಸಕರಿಗೆ ವ್ಹಿಪ್ ಜಾರಿ ಮಾಡಲಾಗಿದ್ದು, ಶಾಸಕರ ಮನೆಗಳಿಗೆ ವಿಪ್ ತಲುಪಿಸಲಾಗುತ್ತದೆ. ನಾಳೆ ಸದನದಲ್ಲಿ ಏನಾಗಲಿದೆ…

ಸರಕಾರ ಉಳಿಯುವುದಾದರೆ ಸಿಎಂ ಹುದ್ದೆ ತೊರೆಯಲು ಸಿದ್ಧ: ಹೆಚ್‍ಡಿಕೆ
ಮೈಸೂರು

ಸರಕಾರ ಉಳಿಯುವುದಾದರೆ ಸಿಎಂ ಹುದ್ದೆ ತೊರೆಯಲು ಸಿದ್ಧ: ಹೆಚ್‍ಡಿಕೆ

July 18, 2019

ಬೆಂಗಳೂರು: ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಹೊರಬಿದ್ದ ಬಳಿಕವೂ ಸರಕಾರ ಉಳಿಸಿಕೊಳ್ಳುವ ಕಸರತ್ತನ್ನು ದೋಸ್ತಿ ಪಕ್ಷಗಳು ಮುಂದುವರಿಸಿವೆ. ದಿಢೀರ್ ಎಂಬಂತೆ ಮಹತ್ವದ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅನಿವಾರ್ಯ ಎನಿಸಿದರೆ ನಾಯಕತ್ವ ಬದಲಾ ವಣೆ ಮಾಡಬಹುದು ಎಂಬ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ. ದೊಮ್ಮಲೂರು ಬಳಿ ಇರುವ ಸಚಿವ ಕೆ.ಜೆ.ಜಾರ್ಜ್ ಅವರ ನಿವಾಸ ದಲ್ಲಿ ಬುಧವಾರ ತಡರಾತ್ರಿಯವರೆಗೂ ನಡೆದ ದೋಸ್ತಿ ಪಕ್ಷಗಳ ನಾಯಕರ ಸಭೆಯಲ್ಲಿ ಕುಮಾರ ಸ್ವಾಮಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಅವರ ಈ ಮಾತಿಗೆ ಸಮನ್ವಯ ಸಮಿತಿ…

ನಾವು ಸದನಕ್ಕೆ ಬರುವುದಿಲ್ಲ
ಮೈಸೂರು

ನಾವು ಸದನಕ್ಕೆ ಬರುವುದಿಲ್ಲ

July 18, 2019

ಮುಂಬೈ; ಗುರುವಾರ ನಡೆಯುವ ವಿಧಾನಸಭೆ ಕಲಾಪದಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಅತೃಪ್ತ ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ದವರ ಜತೆಗೆ ಮಾತನಾಡಿದ ಅವರು, ಇತರೆ ಯಾವ ಅತೃಪ್ತ ಶಾಸಕರು ಸಹ ಸದನದಲ್ಲಿ ಭಾಗವಹಿಸುವುದಿಲ್ಲ ಎಂದರು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಂವಿಧಾನದ ಆಶಯ ಎತ್ತಿ ಹಿಡಿದಂತಾಗಿದೆ. ಇದು ಮಧ್ಯಂತರ ತೀರ್ಪು ಆಗಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಬಗ್ಗೆ ಪುನರ್ ವ್ಯಾಖ್ಯಾನ ಆಗಬೇಕಿದೆ ಎಂದರು. ಇದರ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕು ಎಂದು…

ವಿಶ್ವಾಸ ಮತ ಯಾಚನೆ: ಸದನದಲ್ಲಿ ಹಾಜರಿರುವುದು ಶಾಸಕರ ವಿವೇಚನೆಗೆ ಬಿಟ್ಟದ್ದು
ಮೈಸೂರು

ವಿಶ್ವಾಸ ಮತ ಯಾಚನೆ: ಸದನದಲ್ಲಿ ಹಾಜರಿರುವುದು ಶಾಸಕರ ವಿವೇಚನೆಗೆ ಬಿಟ್ಟದ್ದು

July 18, 2019

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ರಾಜೀನಾಮೆ ಅಂಗೀಕಾರ ವಿಚಾರ ಸ್ಪೀಕರ್‍ಗೆ ಸೇರಿದ್ದು ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ಪೀಠ ಇಂದು ಮಧ್ಯಂತರ ತೀರ್ಪು ನೀಡಿದ್ದು, ಸಂವಿಧಾನವನ್ನು ಎಲ್ಲರೂ ಕಾಪಾಡಬೇಕು. ನಿರ್ದಿಷ್ಟ ಸಮಯದಲ್ಲಿ ವಿಧಾನಸಭಾಧ್ಯಕ್ಷರು ಶಾಸಕರ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದಿದೆ. ಶಾಸಕರ ರಾಜೀನಾಮೆ ಕುರಿತು ನಿರ್ಧಾರ ಮಾಡುವುದು ವಿಧಾನಸಭಾಧ್ಯಕ್ಷರ ವಿವೇಚನೆಗೊಳಪಟ್ಟಿದ್ದು. ಆದ್ದರಿಂದ ಕೋರ್ಟ್ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದ್ದು, ವಿಧಾನಸಭಾಧ್ಯಕ್ಷರು ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ…

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ
ಮೈಸೂರು

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ

July 13, 2019

ಚುನಾವಣೆಗೆ ಹೋಗಲು ಸಂಘ ಪರಿವಾರ ಸೂಚನೆ ಬೆಂಗಳೂರು: ಮುಖ್ಯಮಂತಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಳಗಿಸಿ, ಅಧಿಕಾರ ಹಿಡಿಯುವ ವಿಷಯದಲ್ಲಿ ರಾಜ್ಯ ಬಿಜೆಪಿ ಯಲ್ಲೇ ಗೊಂದಲ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ. ಸಂಘ ಪರಿವಾರಕ್ಕಂತೂ ವಲಸಿಗರನ್ನು ಕಟ್ಟಿಕೊಂಡು ಸರ್ಕಾರ ಮಾಡುವ ಬದಲು ಮಧ್ಯಂತರ ಚುನಾವಣೆಗೆ ತೆರಳಿ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ…

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ
ಮೈಸೂರು

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ

July 8, 2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಕಂಟಕದಿಂದ ಪಾರಾಗುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಉಭಯ ಪಕ್ಷ ಗಳ ಮುಖಂಡರು ಇಂದು ರಾತ್ರಿ ಸುಮಾರು 4 ಗಂಟೆ ಗಳ ಕಾಲ ಚರ್ಚೆ ನಡೆಸಿದರಾದರೂ, ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೇ, ನಾಳೆಗೆ (ಜು.8) ಚರ್ಚೆಯನ್ನು ಮುಂದೂಡಿದ್ದಾರೆ. ವಿದೇಶ ಪ್ರವಾಸದಿಂದ ಇಂದು ಸಂಜೆ ಬೆಂಗಳೂ ರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ ನಂತರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸರ್ಕಾರ ಉಳಿಸಿಕೊಳ್ಳುವ ಕುರಿತು…

ಡಿಸೆಂಬರ್ ಗೆ ದೋಸ್ತಿ ಖತಂ?
ಮೈಸೂರು

ಡಿಸೆಂಬರ್ ಗೆ ದೋಸ್ತಿ ಖತಂ?

June 27, 2019

ಬೆಂಗಳೂರು, ಜೂ. 26 (ಕೆಎಂಶಿ)-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಡಿಸೆಂಬರ್‍ನಲ್ಲಿ ಅಂತ್ಯಗೊಳಿಸಿ, ಮಧ್ಯಂತರ ಚುನಾವಣೆಗೆ ತೆರಳಲು ರಾಜ್ಯ ಪ್ರದೇಶ ಕಾಂಗ್ರೆಸ್ ಮುಂದಾಗಿದೆ. ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ.ವೇಣುಗೋಪಾಲ್, ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನಾಯಕತ್ವದಲ್ಲಿ ಪಕ್ಷದ ಹಿರಿಯ ನಾಯಕರ ಜೊತೆ ಪಕ್ಷ ಸಂಘಟನೆ ಕುರಿತಂತೆ ಇಂದು ನಡೆದ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಪೂರ್ಣ ಅಧಿಕಾರಾವಧಿ ನೀಡಿದರೆ, ರಾಜ್ಯದಲ್ಲಿ ಕಾಂಗ್ರೆಸ್…

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ
ಮೈಸೂರು

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ

June 25, 2019

ಮೈಸೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಮೈತ್ರಿ ಸರ್ಕಾರವೇ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದಿಲ್ಲಿ ಪ್ರತ್ಯೇಕವಾಗಿ ತಿಳಿಸಿದರು. ಮಧ್ಯಂತರ ಚುನಾವಣೆ ನಡೆಯುವ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಮುಂದಿನ ನಾಲ್ಕು ವರ್ಷ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸುತ್ತೂರಿನಲ್ಲಿಂದು ತಿಳಿಸಿದರು. ಮಾಧ್ಯಮ ದವರಿಗೆ…

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ
ಮೈಸೂರು

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ

June 12, 2019

ಬೆಂಗಳೂರು: ರಾಜ್ಯದ ಆಡಳಿತಾರೂಢ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮೌನಕ್ಕೆ ಶರಣಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕಳೆದ ಭಾನುವಾರ ರಾತ್ರಿ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ…

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ
ಮೈಸೂರು

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ

June 12, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಅಡ ಗೂರು ಎಚ್.ವಿಶ್ವನಾಥ್ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅವರ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ಅವರದೇ ಸಮುದಾಯದ ಸಹಕಾರಿ ಸಚಿವರಾಗಿ ರುವ ಬಂಡೆಪ್ಪ ಕಾಶೆಂಪೂರ್ ಅವರನ್ನು ತರುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಲೋಚನೆ ಇದ್ದಂತಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಈ ಬೆಳವಣಿಗೆ ನಂತರ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸಹ ಸಮನ್ವಯ ಸಮಿತಿ…

1 2 3 4
Translate »