ಮೈಸೂರು: ಸ್ಟಾಫ್ ಸೆಲೆಕ್ಷನ್ ಕಮೀಷನ್‍ನ ವತಿಯಿಂದ ನಡೆಸಲಾಗುವ ಕಂಬೈನ್ಡ್ ಗ್ರಾಜ್ಯುಯೇಟ್ ಲೆವೆಲ್-2018 (ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆ ಗಳಿಗೆ) ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಚಿತವಾದ ತರಬೇತಿಯನ್ನು ನುರಿತ ಉಪನ್ಯಾಸಕರಿಂದ ಜೂ. 18 ರಿಂದ ಜೂ. 29 ರವರೆಗೆ ಅಪರಾಹ್ನ 1.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಸ್ಟಡಿ ಸರ್ಕಲ್‍ನಲ್ಲಿ ಆಯೋಜಿಸಲಾಗಿದೆ. ಸದರಿ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಭಾವಚಿತ್ರದೊಂದಿಗೆ ಜೂ.15ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಖುದ್ದಾಗಿ ನೋಂದಾಯಿಸಿಕೊಳ್ಳಬಹುದಾಗಿದೆ….