Tag: congress-jds alliance

ರಾಜ್ಯದಲ್ಲಿ ಬಿಜೆಪಿ ಮೇಲುಗೈ
ಮೈಸೂರು

ರಾಜ್ಯದಲ್ಲಿ ಬಿಜೆಪಿ ಮೇಲುಗೈ

ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ…

ಕಾಂಗ್ರೆಸ್-ಜೆಡಿಎಸ್‍ನ ಪ್ರಮುಖ ನಾಯಕರ ಸೋಲು: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ
ಮೈಸೂರು

ಕಾಂಗ್ರೆಸ್-ಜೆಡಿಎಸ್‍ನ ಪ್ರಮುಖ ನಾಯಕರ ಸೋಲು: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ದೋಸ್ತಿ ಪಕ್ಷಗಳ ಘಟಾನುಘಟಿ ನಾಯಕರು ಸೋತು ಮನೆಗೆ ಹೋಗ ಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ನಮ್ಮ ನಿರೀಕ್ಷೆಗೆ ತಕ್ಕಂತೆ ಬಂದಿವೆ. ದೇಶದ ಜನರು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಅಧಿಕಾರಕ್ಕೆ ತರಲು ಕಾತುರರಾಗಿದ್ದಾರೆ ಎಂದರು. 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ…

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ
ಮೈಸೂರು

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿದರೆ, ಏನು ಮಾಡಕ್ಕಾಗುತ್ತೆ ಎಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡ ಗೂರು ಎಚ್. ವಿಶ್ವನಾಥ್, ಹಗಲುಗನಸು ಕಾಣುತ್ತಿರುವ ಸಿದ್ದರಾಮಯ್ಯ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮಾನ ಮನಸ್ಕರು ಸೇರಿದರೂ ಕಾಂಗ್ರೆಸ್ 113ರ ಮ್ಯಾಜಿಕ್ ಸಂಖ್ಯೆ ಮುಟ್ಟಲ್ಲ ಎಂದರು. ಹಾಗಾಗಿ ತಕ್ಷಣಕ್ಕೆ ಸಿದ್ದ ರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ, ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟವರು ಇದನ್ನು ಅರ್ಥ ಮಾಡಿಕೊಳ್ಳಬೇಕು…

ಮೈತ್ರಿ ಸರ್ಕಾರಕ್ಕೆ ಮತ್ತೆ ಗಂಡಾಂತರ: ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ನಿರ್ಧಾರ
ಮೈಸೂರು

ಮೈತ್ರಿ ಸರ್ಕಾರಕ್ಕೆ ಮತ್ತೆ ಗಂಡಾಂತರ: ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ನಿರ್ಧಾರ

ಬೆಂಗಳೂರು: ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ. ವಿಧಾನಸಭಾ ಸದಸ್ಯತ್ವ ಹಾಗೂ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಬಂಡಾಯ ನಾಯಕರಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಆ ಪಕ್ಷದ ನಾಯಕರ ಜೊತೆ ಗೂಡಿ ಆಪರೇಷನ್ ಕಮಲದ ಉಸ್ತುವಾರಿ ವಹಿಸಿಕೊಂಡಿದ್ದ ರಮೇಶ್, ಹತ್ತು ಹಲವು ಬಾರಿ ಆಪರೇಷನ್ ಕಮಲ ಮಾಡಿದ್ದರೂ, ಯಶಸ್ವಿ ಕಂಡಿರಲಿಲ್ಲ. ಇದೀಗ…

ನಮ್ಮ ಶಾಸಕರು ನಮ್ಮ ವಿಶ್ವಾಸದಲ್ಲಿದ್ದಾರೆ
ಮೈಸೂರು

ನಮ್ಮ ಶಾಸಕರು ನಮ್ಮ ವಿಶ್ವಾಸದಲ್ಲಿದ್ದಾರೆ

ಹಾಸನ: ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ಗೆ ಗುಡ್ ಬೈ ಹೇಳುವ ವಿಚಾರ ಹೊಸದೇನಲ್ಲ. ನಮ್ಮ ಪಕ್ಷದ ಎಲ್ಲಾ ಶಾಸಕರ ವಿಶ್ವಾಸ ಪಡೆಯುವ ಕೆಲಸ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡ್ತಾರೇ, ಬಿಡ್ತಾರೆ ಎನ್ನುವ ಸುದ್ದಿ ಹೊಸದೇನು ಅಲ್ಲ. ಸರ್ಕಾರ ಬೀಳಿಸಲು ಬಿಜೆಪಿಯ ಎಲ್ಲಾ ನಾಯಕರು ಕಾಯುತ್ತಿದ್ದಾರೆ. ನಮ್ಮ ಶಾಸಕರನ್ನು ಉಳಿಸಿ ಕೊಳ್ಳೋ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿ ದರು. ನಾನು ಡ್ರಾಮಾ ಮಾಡುವವರನ್ನು ಹಿಡಿದುಕೊಳ್ಳಲು ಆಗುವುದಿಲ್ಲ…

ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ನೀಡಿದ ಐಟಿ
ಮೈಸೂರು

ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ನೀಡಿದ ಐಟಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಆಪ್ತರ ಮನೆ ಮೇಲೆ ನಡೆಸಿದ್ದ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಉಭಯ ಪಕ್ಷಗಳ ನಾಯಕರ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಸಾ.ರಾ.ಮಹೇಶ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮತ್ತಿತರರ ವಿರುದ್ಧ ಆದಾಯ…

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ
ಮೈಸೂರು

5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ

ಬೆಂಗಳೂರು: 2014ರ ಚುನಾವಣೆ ಮುನ್ನ ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದರೆ ಕಾಂಗ್ರೆಸ್ ನ್ಯಾಯ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ…

ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ
ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ

ಮೈಸೂರು: ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದವರ ಪೈಕಿ ಮೂವರು ಪಕ್ಷೇತರರು ಇಂದು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಪಿ.ಎಸ್.ಯಡೂರಪ್ಪ, ಎಂ.ಖಲೀಲ್ ಹಾಗೂ ಎಂ. ಶ್ರೀನಿವಾಸ್, ಶುಕ್ರವಾರ ಮಧ್ಯಾಹ್ನ ಮೈಸೂರು ಜಿಲ್ಲಾ ಚುನಾವಣಾ ಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಅರ್ಜಿ ಸಲ್ಲಿಸಿ, ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡರು. ಇದರಿಂದಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಲ್ಲಿ ಬಿಜೆಪಿಯ ಪ್ರತಾಪ್‍ಸಿಂಹ, ಕಾಂಗ್ರೆಸ್‍ನ ಸಿ.ಹೆಚ್. ವಿಜಯ ಶಂಕರ್, ಬಿಎಸ್‍ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು…

‘ದೋಸ್ತಿ’ ನಾಯಕರ ಪ್ರತಿಭಟನೆ
ಮೈಸೂರು

‘ದೋಸ್ತಿ’ ನಾಯಕರ ಪ್ರತಿಭಟನೆ

ಬೆಂಗಳೂರು: ವಿರೋಧಪಕ್ಷಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಮತ್ತು ಸಚಿವರು ಐಟಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಐತಿಹಾಸಿಕ ಘಟನೆ ನಡೆಯಿತು. ಮುಖ್ಯಮಂತ್ರಿಗಳೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲಾಗಿದೆ. ಸಿಬಿಐ ತನಿಖೆ ವಿರೋಧಿಸಿ, ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿಯವರು ಇತ್ತೀಚೆಗಷ್ಟೇ ಕೊಲ್ಕತ್ತಾದಲ್ಲಿ ಕೇಂದ್ರದ ವಿರುದ್ಧ ಸರಣಿ ಧರಣಿ ನಡೆಸಿದ್ದರು. ಇದು ಮಾಸುವ ಮುನ್ನವೇ…

ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು
ಮೈಸೂರು

ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು

ಬೆಂಗಳೂರು:ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿ ಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ದಾಳಿ ಮಾಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ದಾಳಿ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ತಿರುಗೇಟು ನೀಡಿದೆ. ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆದಿದೆ ಎಂಬ ಜೆಡಿಎಸ್, ಕಾಂಗ್ರೆಸ್ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆದಾಯ ತೆರಿಗೆ ಇಲಾಖೆ, ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ…

1 2 3 10