Tag: congress-jds alliance

ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು
ಮೈಸೂರು

ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು

March 29, 2019

ಬೆಂಗಳೂರು:ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿ ಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ದಾಳಿ ಮಾಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ದಾಳಿ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ತಿರುಗೇಟು ನೀಡಿದೆ. ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆದಿದೆ ಎಂಬ ಜೆಡಿಎಸ್, ಕಾಂಗ್ರೆಸ್ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆದಾಯ ತೆರಿಗೆ ಇಲಾಖೆ, ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ…

ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…
ಮೈಸೂರು

ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…

March 2, 2019

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್‍ಕುಮಾರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂಬುದು ಇಂದು ಮೈಸೂರಿನಲ್ಲಿ ಬಹಿರಂಗವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸುವಾರಿ ಸಚಿವ ಜಿ.ಟಿ.ದೇವೇಗೌಡರು ಮಾತನಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ನೀವೇ ಸ್ಪರ್ಧಿಸಬೇಕೆಂದು ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರನ್ನು ಮನವಿ ಮಾಡಿಕೊಂಡೆವು. ಅದೇನೇ ಇರಲಿ ಯಾರೇ ಅಭ್ಯರ್ಥಿಯಾದರೂ ದೇವೇಗೌಡರು ಹಾಗೂ ಕುಮಾರಸ್ವಾಮಿ…

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
ಮೈಸೂರು

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ

February 23, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…

ಕಾಂಗ್ರೆಸ್‍ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್‍ಗೆ ನೋಟಿಸ್
ಮೈಸೂರು

ಕಾಂಗ್ರೆಸ್‍ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್‍ಗೆ ನೋಟಿಸ್

February 7, 2019

ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧ ವಾರ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ನಾಲ್ವರು ಅತೃಪ್ತರು ಸೇರಿದಂತೆ ಒಟ್ಟು 7 ಶಾಸಕರು ಗೈರಾಗಿದ್ದರು. ಅತೃಪ್ತ ಶಾಸಕರಾದ ರಮೇಶ್ ಜಾರಕಿ ಹೊಳಿ, ಮಹೇಶ್ ಕುಮಟಹಳ್ಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ ಹಾಗೂ ಶಾಸಕರಾದ ಜಿ.ಎನ್.ಗಣೇಶ್, ಡಾ.ಸುಧಾಕರ್ ಮತ್ತು ಸೌಮ್ಯ ರೆಡ್ಡಿ ಕಲಾಪದಿಂದ ದೂರ ಉಳಿದಿದ್ದರು. ಇನ್ನು ಕಂಪ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೊರ ಬಂದ ಶಾಸಕ ಆನಂದ್ ಸಿಂಗ್ ಅವರು ಇಂದು ಕಲಾಪದಲ್ಲಿ…

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ
ಮೈಸೂರು

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ

February 7, 2019

ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಫೆಬ್ರವರಿ 8ರಂದು ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈಗಾಗಲೇ ಮೈತ್ರಿ ಸರ್ಕಾರದ ಜಂಟಿ ಅಧಿವೇಶನ ಮತ್ತು ಬಜೆಟ್ ಕಲಾಪಕ್ಕೆ ಹಾಜ ರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕರು ವ್ಹಿಪ್ ಜಾರಿ ಗೊಳಿಸಿದ್ದರು. ಆದರೂ ಇಂದು ಕಾಂಗ್ರೆಸ್ ಪಕ್ಷದ 7 ಶಾಸಕರು ಸದನಕ್ಕೆ ಗೈರಾಗುವ ಮೂಲಕ ವ್ಹಿಪ್‍ನ್ನು ಉಲ್ಲಂಘಿಸಿದ್ದಾರೆ. ಈ ನಡುವೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ…

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!
ಮೈಸೂರು

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!

February 5, 2019

ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರಿಗೆ ಛಾನ್ಸೇ ಇಲ್ಲ: ಸಿಎಂ ಕುಮಾರಸ್ವಾಮಿ ನಿಶ್ಚಿಂತೆ ಮಾತು ಬೆಂಗಳೂರು: ಭಾರತೀಯ ಜನತಾ ಪಕ್ಷ ಏನೇ ಪ್ರಯತ್ನ ಮಾಡಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ಅವರ `ಫ್ಯೂಸ್’ ಕಿತ್ತು ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪತ್ರಿಕಾ ಸಂಪಾದಕರ ಜೊತೆ ಅನೌಪಚಾರಿಕವಾಗಿ ಮಾತನಾಡುವ ಸಂದರ್ಭದಲ್ಲಿ ಪ್ರತಿ ಬಾರಿ ಸರ್ಕಾರ ಉರುಳಿಸುವ ಪ್ರಯತ್ನದಲ್ಲಿದ್ದಾಗ ಬಿಜೆಪಿ ಮುಖಂಡರು ಮತ್ತು ಶಾಸಕರೇ ನನ್ನ ನೆರವಿಗೆ ನಿಂತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ…

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಮೈಸೂರು

ಪ್ರಧಾನಿ ಮೋದಿ ಪಾತ್ರವಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

February 5, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹತಾಶರಾಗಿ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಇದರಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪಾತ್ರವೇನೂ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಫಲಿತಾಂಶ ಬಂದ ನಂತರ ಯಡಿಯೂ ರಪ್ಪ ಅವರು ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿದ್ದಾರೆ. ಸಹಜವಾಗಿಯೇ ಇದು ಅವರಿಗೆ ನೋವು ತಂದಿದೆ ಎಂದರು. ಹೀಗಾಗಿ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿ ಸುತ್ತಿದ್ದಾರೆ. ಆದರೆ ಅದು ವಿಫಲ ಯತ್ನವಾಗಲಿದೆ.ಹಾಗೆಯೇ…

ಮಾರ್ಚ್ 5ರೊಳಗೆ ಮೈತ್ರಿ ಸರ್ಕಾರ ಪತನ: ಜ್ಯೋತಿಷಿ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ
ಮೈಸೂರು

ಮಾರ್ಚ್ 5ರೊಳಗೆ ಮೈತ್ರಿ ಸರ್ಕಾರ ಪತನ: ಜ್ಯೋತಿಷಿ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ

February 5, 2019

ಹುಬ್ಬಳ್ಳಿ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ವಿದೆ. ಮೈತ್ರಿ ಸರ್ಕಾರದ ಮಿತ್ರರು ಶತ್ರುಗಳಾಗಿ ಸರ್ಕಾರಕ್ಕೆ ಗಂಡಾಂತರ ತರುವ ಸಾಧ್ಯತೆ ಇದೆ. 2019ರ ಮಾರ್ಚ್ 5ರ ಒಳಗಾಗಿ ಸರ್ಕಾರ ಪತನವಾಗಲಿದೆ ಎಂದು ಅಖಿಲ ಕರ್ನಾಟಕ ಜೋತಿರ್ವಿಜ್ಞಾನ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಗಣೇಶ ಹೆಗಡೆ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜಾತಕದಲ್ಲಿ ರಾಶಾಧಿಪತಿ ಬುಧ ಅಷ್ಟಮದಲ್ಲಿ ಬಂದಿದ್ದು, ಸಪ್ತಮದಲ್ಲಿ ಶನಿ ಇರುವುದರಿಂದ ಮಿತ್ರರೇ ಶತ್ರುಗಳಾಗಿ ಮೈತ್ರಿ ಸರ್ಕಾರಕ್ಕೆ ಕಂಟಕ ತರಲಿದ್ದಾರೆ ಎಂದರು. ಸಿದ್ದರಾಮಯ್ಯ ನವರ…

ಕುಮಾರಸ್ವಾಮಿ ಜನಮನ್ನಣೆಗಳಿಸಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ
ಮೈಸೂರು

ಕುಮಾರಸ್ವಾಮಿ ಜನಮನ್ನಣೆಗಳಿಸಬಾರದು ಎಂಬುದು ಸಿದ್ದರಾಮಯ್ಯ ಉದ್ದೇಶ

February 1, 2019

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಜನ ಮನ್ನಣೆ ಗಳಿಸಬಾರದೆಂಬ ಏಕೈಕ ಉದ್ದೇಶ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದಾಗಿದೆ ಎಂಬ ವಿಷಯವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಾಂಗ್ರೆಸ್ ರಾಯಭಾರಿಯ ಕಿವಿಗೆ ಹಾಕಿದ್ದಾರೆ. ದೆಹಲಿಯಲ್ಲಿ ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರೊಂದಿಗೆ ನಡೆಸಿದ ಮಾತುಕತೆ ವಿವರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೆಡಿಎಸ್ ವರಿಷ್ಠರಿಗೆ ನೀಡುತ್ತಿದ್ದ ವೇಳೆ ಈ ವಿಚಾರ ಪ್ರಸ್ತಾಪ ವಾಗಿದೆ. ರಾಷ್ಟ್ರಮಟ್ಟದಲ್ಲಿ…

ಆಪರೇಷನ್ ಕಮಲ ಮುಂದುವರೆದಿದೆ
ಮೈಸೂರು

ಆಪರೇಷನ್ ಕಮಲ ಮುಂದುವರೆದಿದೆ

January 26, 2019

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವನ್ನು ಉರುಳಿಸುವ ಸಲುವಾಗಿ ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಬಿಜೆಪಿ ಮುಂದು ವರೆಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಕಾಂಗ್ರೆಸ್‍ನ ಶಾಸಕರೊಬ್ಬರಿಗೆ ಗಿಫ್ಟ್ ಎಲ್ಲಿಗೆ ಕಳುಹಿಸಬೇಕು ಎಂದು ಕರೆ ಮಾಡಿದ್ದರು. ಇದು ಅಂತಿಂತಹ ಗಿಫ್ಟ್ ಅಲ್ಲ, ಕಳೆದ ಬಾರಿಗಿಂತ ದೊಡ್ಡ ಮೊತ್ತದ್ದಾ ಗಿದೆ. ಅದನ್ನು ನೀವು ಕೇಳಿದರೆ…

1 3 4 5 6 7 13
Translate »