Tag: congress-jds alliance

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್
ಮೈಸೂರು

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್

September 22, 2018

ಬೆಂಗಳೂರು:  ಆಪರೇ ಷನ್ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸಲು ಅಗತ್ಯ ಕಂಡು ಬಂದರೆ ಆಪರೇಷನ್ ಕಾಂಗ್ರೆಸ್-ಜೆಡಿಎಸ್ ಮೂಲಕ ಆ ಪಕ್ಷದ ಶಾಸಕರನ್ನು ಸೆಳೆಯಲು ಉಭಯ ಪಕ್ಷಗಳ ನಾಯಕರು ಇಂದಿಲ್ಲಿ ತೀರ್ಮಾನಿಸಿದ್ದಾರೆ. ದಿನದಿಂದ ದಿನಕ್ಕೆ ಸರ್ಕಾರ ಉರುಳಿಸಲು ಸಂಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಕಾಂಗ್ರೆಸ್ ವರಿಷ್ಠರೇ ಮಧ್ಯಪ್ರವೇಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಲಹೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ…

ಇಂದು 18 ಶಾಸಕರ ರಾಜೀನಾಮೆ?
ಮೈಸೂರು

ಇಂದು 18 ಶಾಸಕರ ರಾಜೀನಾಮೆ?

September 18, 2018

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್‍ನಲ್ಲಿನ ಭಿನ್ನಮತೀಯ ಚಟುವಟಿಕೆ ತಾರಕಕ್ಕೇರಿದ್ದು, ಅದು ನಾಳೆ ನಿರ್ಣಾಯಕ ಹಂತ ತಲುಪಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‍ನಲ್ಲಿ ತೀವ್ರ ಅಸಮಾಧಾನಗೊಂಡಿರುವ 18 ಶಾಸಕರು ರಾಜ್ಯಪಾಲರು ಇಲ್ಲವೇ ಸ್ಪೀಕರ್ ಭೇಟಿ ಯಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀ ನಾಮೆ ನೀಡಲಿದ್ದಾರೆ ಎಂದು ಹೇಳಲಾ ಗುತ್ತಿದೆ. ಈಗಾಗಲೇ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಸಂಬಂಧ ರೊಚ್ಚಿಗೆದ್ದಿ ರುವ ಸಚಿವ ರಮೇಶ್ ಜಾರಕಿಹೊಳಿ ಉತ್ತರ ಕರ್ನಾ ಟಕದ ತಮ್ಮ ಬೆಂಬಲಿತ ಶಾಸಕ ರೊಂದಿಗೆ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ…

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ
ಮೈಸೂರು

ಸೆಪ್ಟೆಂಬರ್ ಮೂರನೇವಾರ ಸಂಪುಟ ವಿಸ್ತರಣೆ

September 1, 2018

ಸಮನ್ವಯ ಸಮಿತಿ ಸಭೆ ನಂತರ ಸಿದ್ದರಾಮಯ್ಯ ವಿವರಣೆ ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಸಿದ್ದು ತೀವ್ರ ಅಸಮಾಧಾನ ಏಕಕಾಲದಲ್ಲಿ 30 ನಿಗಮ ಮಂಡಳಿಗೆ ನೇಮಕ ಬೆಂಗಳೂರು: ಸೆಪ್ಟೆಂಬರ್ 3ನೇ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂದು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಇಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ…

ಸ್ಥಳೀಯ ಸಂಸ್ಥೆ ಚುನಾವಣೆ: ಮೈಸೂರು, ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆ: ಮೈಸೂರು, ಕೊಡಗು ಸೇರಿ ಕೆಲ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ

August 10, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಚಳ್ಳೆಹಣ್ಣು ತಿನ್ನಿಸಲು ಮೈಸೂರು, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು, ಕಣಕ್ಕಿಳಿಯಲಿವೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೀಮಿತ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿ ಯುವ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್-ಜೆಡಿಎಸ್ ಪ್ರಾಯೋಗಿಕ ಪ್ರಯತ್ನ ನಡೆಸಲಿವೆ. ಮೈಸೂರು, ಕೊಡಗು ಅಲ್ಲದೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸೀಮಿತವಾಗಿ ಈ ಚುನಾವಣಾ ಮೈತ್ರಿ ಆಗಲಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

ಆ. 13ಕ್ಕೆ ಸಂಪುಟ ವಿಸ್ತರಣೆ
ಮೈಸೂರು

ಆ. 13ಕ್ಕೆ ಸಂಪುಟ ವಿಸ್ತರಣೆ

August 7, 2018

ಕಾಂಗ್ರೆಸ್ ವರಿಷ್ಠರ ಸಲಹೆಯಂತೆ ಸಿಎಂ ಕುಮಾರಸ್ವಾಮಿ ನಿರ್ಧಾರ ಕಾಂಗ್ರೆಸ್‍ನ ಐದು, ಜೆಡಿಎಸ್‍ನ ಒಂದು ಸ್ಥಾನ ಭರ್ತಿಗೆ ತೀರ್ಮಾನ ಇದೇ ವೇಳೆ 30 ನಿಗಮ-ಮಂಡಳಿಗೂ ನೇಮಕ ಬೆಂಗಳೂರು:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವಿಸ್ತರಿಸಲಿದ್ದಾರೆ. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಆಗಸ್ಟ್ 13 ರಂದು ಮಂತ್ರಿಮಂಡಲ ವಿಸ್ತರಣೆ ಜರುಗಲಿದೆ. ಮಂತ್ರಿಮಂಡಲ ವಿಸ್ತರಣೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂಬ ರಾಜ್ಯ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

August 6, 2018

ಬೆಂಗಳೂರು: ಮೈತ್ರಿ ಸರ್ಕಾರದ ದೋಸ್ತಿ ರಾಜ್ಯ ಮಟ್ಟದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಘೋಷಿಸಿದ್ದು, ಮಿನಿ ಸಮರದ ಮೈತ್ರಿ ವದಂತಿಗೆ ತೆರೆ ಎಳೆದಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯ ಮಟ್ಟದಲ್ಲಿ ಮಾತ್ರ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಕೆಯಾಗಲಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ

August 4, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡು ಕಣಕ್ಕಿಳಿಯುವುದು ಬೇಡ, ಅಗತ್ಯ ಬಿದ್ದ ಕಡೆಗಳಲ್ಲಿ ಸ್ಥಳೀಯವಾಗಿ ಹೊಂದಾಣಿಕೆಗೆ ಅಲ್ಲಿನ ನಾಯಕರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆ ಹಾಗೂ ಮೈತ್ರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಕೆಪಿಸಿಸಿ ಕಚೇರಿಯಲ್ಲಿಂದು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ರಾಜ್ಯ ಘಟಕದ ನಿರ್ಧಾರವನ್ನು ಕೇಂದ್ರ ವರಿಷ್ಠರಿಗೆ ತಿಳಿಸಲಾಗುವುದು. ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಲೋಕಸಭೆ…

ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ
ಚಾಮರಾಜನಗರ

ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ

August 2, 2018

ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಮುಂಬ ರುವ ಚುನಾವಣೆಯಲ್ಲಿ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಮುಖಂಡರೂ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರೂ ಆದ ಕೆ.ಶಿವರಾಮು ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಾರ್ಟಿ ವರಿಷ್ಠರಿಗೆ ಚಾ.ನಗರ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದೇನೆ. ಪಕ್ಷವು ನನಗೆ ಅವಕಾಶ ನೀಡಿ ಟಿಕೆಟ್ ನೀಡಿದಲ್ಲಿ ನಾನು ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಹೇಳಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಆಹಾರ ಮಂತ್ರಿ…

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

August 1, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಸಚಿವರುಗಳಿಗೆ ತಲಾ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ನಿರೀಕ್ಷೆಯಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಮೈಸೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಾಸನ ಜಿಲ್ಲೆಗೆ ಹೆಚ್.ಡಿ.ರೇವಣ್ಣ, ಮಂಡ್ಯಕ್ಕೆ ಸಿ.ಎಸ್.ಪುಟ್ಟರಾಜು, ಚಾಮರಾಜನಗರಕ್ಕೆ ಸಿ.ಪುಟ್ಟರಂಗಶೆಟ್ಟಿ, ಕೊಡಗಿಗೆ ಸಾ.ರಾ.ಮಹೇಶ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಬೆಂಗಳೂರು ನಗರ ಮತ್ತು ತುಮಕೂರು, ಆರ್.ವಿ.ದೇಶಪಾಂಡೆ ಅವರಿಗೆ ಉತ್ತರ ಕನ್ನಡ…

ಲೋಕಸಭಾ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮೈಸೂರು

ಲೋಕಸಭಾ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ

July 27, 2018

ಬೆಂಗಳೂರು: ಮುಂಬರುವ ಲೋಕ ಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಖಚಿತಗೊಂಡಿದ್ದು, ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಇಳಿಯಲಿವೆ. ಒಪ್ಪಂದದಂತೆ ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರ ಗಳ ಪೈಕಿ ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 10 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡಲಿದ್ದು, ಜೆಡಿಎಸ್ ಇದರಲ್ಲಿ ಒಂದು ಕ್ಷೇತ್ರವನ್ನು ತನ್ನ ಮೈತ್ರಿ ಪಕ್ಷವಾದ ಬಿಎಸ್‍ಪಿಗೆ ನೀಡಲಿದೆ. ಜೆಡಿಎಸ್ ತನ್ನ ಪ್ರಭಾವ ಇರುವ ಹಳೇ ಮೈಸೂರು ಭಾಗದಲ್ಲೇ ಹೆಚ್ಚಿನ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ….

1 6 7 8 9 10 13
Translate »