Tag: Congress

ಸದ್ಯದಲ್ಲೇ ಇಬ್ಬರು ಶಾಸಕರ ಅಮಾನತು, ಇಬ್ಬರು ಸಚಿವರಿಗೂ ಕೊಕ್
ಮೈಸೂರು

ಸದ್ಯದಲ್ಲೇ ಇಬ್ಬರು ಶಾಸಕರ ಅಮಾನತು, ಇಬ್ಬರು ಸಚಿವರಿಗೂ ಕೊಕ್

December 13, 2018

ಬೆಂಗಳೂರು: ಪಕ್ಷ ದಲ್ಲಿದ್ದುಕೊಂಡೇ ಆಪರೇಷನ್ ಕಮಲ ಚಟುವಟಿಕೆಯಲ್ಲಿ ತೊಡಗಿರುವ ಇಬ್ಬರು ಶಾಸಕರನ್ನು ಅಮಾನತು ಮಾಡಲು ನಿರ್ಧರಿಸಿರುವ ಪ್ರದೇಶ ಕಾಂಗ್ರೆಸ್, ಇದೇ ಆರೋಪದ ಹಿನ್ನೆಲೆಯಲ್ಲಿ ಸಂಪುಟದಲ್ಲಿರುವ ಇಬ್ಬರು ಸಚಿವರನ್ನೂ ಕೈಬಿಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಬೆಂಬಲ ನೀಡಿದ ಪಕ್ಷೇತರ ಸದಸ್ಯ ಹಾಗೂ ಅರಣ್ಯ ಸಚಿವ ಆರ್.ಶಂಕರ್ ಮತ್ತು ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿಮಂಡಲದಿಂದ ಕೈಬಿಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂತ್ರಿಮಂಡಲ ವನ್ನು ಡಿಸೆಂಬರ್ 22ರಂದು ವಿಸ್ತರಿಸಲು ತೀರ್ಮಾನಿಸಿದ್ದು,…

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅರಸು,  ರಾಜೀವ್ ಗಾಂಧಿ ಜನ್ಮ ದಿನಾಚರಣೆ
ಮೈಸೂರು

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅರಸು, ರಾಜೀವ್ ಗಾಂಧಿ ಜನ್ಮ ದಿನಾಚರಣೆ

December 11, 2018

ಮೈಸೂರು:  ಮೈಸೂ ರಿನ ಜೆಎಲ್‍ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಸಂಸದ ಆರ್.ಧ್ರುವನಾರಾಯಣ್ ಉದ್ಘಾಟಿಸಿದರು. ಮೈಸೂರು ಜಿಲ್ಲಾ ಮತ್ತು ನಗರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಜನ್ಮ ದಿನಾ ಚರಣೆ ಹಾಗೂ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಸಂಸದ ಆರ್.ಧ್ರುವ ನಾರಾಯಣ್, ಡಿ.ದೇವರಾಜ ಅರಸು ಅವರು ನಮ್ಮ ಮೈಸೂರು ಜಿಲ್ಲೆಯವರಾಗಿ…

ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರ ಅಭಿಪ್ರಾಯ ಸಂಗ್ರಹ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರ ಅಭಿಪ್ರಾಯ ಸಂಗ್ರಹ

December 10, 2018

ಮೈಸೂರು:  ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡುವ ಪ್ರಣಾಳಿಕೆಯಲ್ಲಿ ಮಹಿಳಾಪರ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಟ ಅಮರನಾಥ್ ಮಹಿಳೆಯರ ಅಭಿಪ್ರಾಯ ಸಂಗ್ರಹಿಸಿದರು. ಮಹಿಳೆಯರಿಗೆ ಉನ್ನತ ಶಿಕ್ಷಣ, ಉದ್ಯೋಗ ಸೃಷ್ಟಿ, ಮಹಿಳೆಯರ ಸಬಲೀಕರಣ, ಸಮಾನ ರಾಜಕೀಯ ಸ್ಥಾನಮಾನ, ಸಮಾನ ಕೆಲಸಕ್ಕೆ ಸಮಾನ ವೇತನ, ಹೆರಿಗೆ ರಜೆಯ ಅವಧಿ ವಿಸ್ತರಣೆ, ಪಠ್ಯದಲ್ಲಿ ಲೈಂಗಿಕ ಶಿಕ್ಷಣ ಅಳವಡಿಕೆ, ಕಾನೂನು ಅರಿವು ಕಾರ್ಯಕ್ರಮ ಸೇರಿದಂತೆ ಹಲವು ಅಭಿಪ್ರಾಯಗಳು ಸಭೆಯಲ್ಲಿ…

ಬಿಜೆಪಿಯಿಂದ ಆಮಿಷ: ಬೆಂಗಳೂರು ಪೊಲೀಸ್ ಕಮೀಷ್ನರ್‍ಗೆ ಕಾಂಗ್ರೆಸ್ ದೂರು
ಮೈಸೂರು

ಬಿಜೆಪಿಯಿಂದ ಆಮಿಷ: ಬೆಂಗಳೂರು ಪೊಲೀಸ್ ಕಮೀಷ್ನರ್‍ಗೆ ಕಾಂಗ್ರೆಸ್ ದೂರು

December 5, 2018

ಬೆಂಗಳೂರು, ಡಿ.4-ಆಪರೇಷನ್ ಕಮಲಕ್ಕೆ ಮತ್ತೆ ಮುಂದಾಗಿದ್ದಾರೆ ಎಂದು ಆರೋಪಿಸಿ ಗಣಿಧಣಿ ಜನಾರ್ಧನ ರೆಡ್ಡಿ, ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ ಯೂರಪ್ಪ ಹಾಗೂ ಶಾಸಕ ಶ್ರೀ ರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ಮುಖಂಡರು ಬೆಂಗಳೂರು ನಗರ ಪೊಲೀಸ್ ಕಮೀಷ್ನರ್‍ಗೆ ದೂರು ನೀಡಿದ್ದಾರೆ. ಇತ್ತೀಚೆಗೆ ಬಯಲಾಗಿರುವ ಆಡಿಯೋ ದಲ್ಲಿ ಆಪರೇಷನ್ ಕಮಲ ಸಂಬಂಧ ಶಾಸಕ ಶ್ರೀರಾಮುಲು ಆಪ್ತ ಸಹಾಯಕ ಮಂಜು ಎಂಬುವರು ದುಬೈ ಉದ್ಯಮಿ ಯೊಂದಿಗೆ ದೂರವಾಣಿ ಸಂಭಾಷಣೆ ನಡೆಸಿರುವುದನ್ನು ಗಂಭೀರವಾಗಿ…

ಅಜ್ಜು ಸಹೋದರರ ಕಾಂಗ್ರೆಸ್ ಸೇರ್ಪಡೆಗೆ ವಿರೋಧ
ಮೈಸೂರು

ಅಜ್ಜು ಸಹೋದರರ ಕಾಂಗ್ರೆಸ್ ಸೇರ್ಪಡೆಗೆ ವಿರೋಧ

November 17, 2018

ಮೈಸೂರು: ಕಾಂಗ್ರೆಸ್ ವಿರೋಧಿ ಚಟುವಟಿಕೆ ನಡೆಸಿದ ಅಜ್ಜು ಸಹೋದರರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದಕ್ಕೆ ಮೈಸೂರಿನ ಸ್ಥಳೀಯ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಇರ್ಫಾನ್ ಪಾಷಾ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ತಮ್ಮ ಅಸಮಾಧಾನ ವನ್ನು ಹೊರ ಹಾಕಿದರು. ಅಜ್ಜು ಸಹೋದರರು ಜೆಡಿಎಸ್, ಬಿಎಸ್ಪಿ, ಎಸ್‍ಡಿಪಿಐ ಪಕ್ಷದೊಂದಿಗೆ ಗುರುತಿಸಿಕೊಂಡು ಕಾಂಗ್ರೆಸ್ ವಿರೋಧಿ ಚಟುವಟಿಕೆ ನಡೆಸಿದ್ದರು. ಕಳೆದ ಚುನಾವಣೆ ಯಲ್ಲಿ ಈ ಸಹೋದರರು ಶಾಸಕ ತನ್ವೀರ್‍ಸೇಠ್…

ಮೈಸೂರಿಗೆ ಅಷ್ಟೊಂದು ಕೊಡುಗೆ ಕೊಟ್ಟರೂ ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಬಹುಮತ ಬರದಿದ್ದಕ್ಕೆ ನೋವಾಗಿದೆ
ಮೈಸೂರು

ಮೈಸೂರಿಗೆ ಅಷ್ಟೊಂದು ಕೊಡುಗೆ ಕೊಟ್ಟರೂ ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಬಹುಮತ ಬರದಿದ್ದಕ್ಕೆ ನೋವಾಗಿದೆ

November 11, 2018

ಮೈಸೂರು: ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ದ್ದಾಗ ಮೈಸೂರಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದೆ. ಆದರೂ ಮೈಸೂ ರಿನ ಜನತೆ ನಗರ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡದಿರು ವುದು ವೈಯಕ್ತಿಕವಾಗಿ ನನಗೆ ನೋವು ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿಷಾದಿಸಿದರು. ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಪಕ್ಷ ದಿಂದ ನೂತನವಾಗಿ ಆಯ್ಕೆಯಾಗಿರುವ ಪಾಲಿಕೆ ಸದಸ್ಯರೊಂದಿಗೆ ಆಯೋಜಿಸಿದ್ದ ಔಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು,…

ನೋಟು ಅಮಾನ್ಯೀಕರಣಕ್ಕೆ 2 ವರ್ಷ; ಕಾಂಗ್ರೆಸ್‍ನಿಂದ ಮೈಸೂರಲ್ಲಿ ಪ್ರತಿಭಟನೆ
ಮೈಸೂರು

ನೋಟು ಅಮಾನ್ಯೀಕರಣಕ್ಕೆ 2 ವರ್ಷ; ಕಾಂಗ್ರೆಸ್‍ನಿಂದ ಮೈಸೂರಲ್ಲಿ ಪ್ರತಿಭಟನೆ

November 10, 2018

ಮೈಸೂರು:  ಕೇಂದ್ರ ಸರ್ಕಾರ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳ ಅಮಾನ್ಯೀಕರಣ ಮಾಡಿ ಎರಡು ವರ್ಷವಾದರೂ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ರೂಪಿಸಲು ವಿಫಲವಾಗಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರೊ.ಬಿ.ಕೆ.ಚಂದ್ರಶೇಖರ್ ಅವರ ನೇತೃತ್ವ ದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯ ಕರ್ತರು,…

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?
ಮೈಸೂರು

ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?

November 5, 2018

ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಜಯಗಳಿಸಲಿದ್ದಾರೆ ಎಂದು ಗುಪ್ತಚರ ಇಲಾಖೆಯು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಅದೇ ರೀತಿ ಬಳ್ಳಾರಿ ಲೋಕಸಭೆ ಮತ್ತು ಜಮ ಖಂಡಿ ವಿಧಾನಸಭಾ ಕ್ಷೇತ್ರಗಳಲ್ಲಿ…

ಅದೃಷ್ಟದಾಟದಲ್ಲಿ ‘ಕೈ’ಗೊಲಿದ ಮೈಸೂರು ಎಪಿಎಂಸಿ ಅಧ್ಯಕ್ಷ ಸ್ಥಾನ
ಮೈಸೂರು

ಅದೃಷ್ಟದಾಟದಲ್ಲಿ ‘ಕೈ’ಗೊಲಿದ ಮೈಸೂರು ಎಪಿಎಂಸಿ ಅಧ್ಯಕ್ಷ ಸ್ಥಾನ

October 28, 2018

ಮೈಸೂರು: ದೋಸ್ತಿ ಪಕ್ಷಗಳಿಗೆ ಪ್ರತಿಷ್ಟೆಯಾಗಿ, ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾ ವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಡುವಂತಾಗಿದೆ. ಮೈಸೂರು-ನಂಜನಗೂಡು ಮುಖ್ಯರಸ್ತೆಯ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಕಚೇರಿಯಲ್ಲಿ ತಹಶೀಲ್ದಾರ್ ಟಿ.ರಮೇಶ್ ಬಾಬು ಸಮ್ಮುಖದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಪ್ರಭುಸ್ವಾಮಿ ಎಪಿಎಂಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರೆ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜವರಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ…

ಮೈಸೂರು ಕಾಂಗ್ರೆಸ್‍ನಿಂದ ದಸರಾ ಬಹಿಷ್ಕಾರ
ಮೈಸೂರು

ಮೈಸೂರು ಕಾಂಗ್ರೆಸ್‍ನಿಂದ ದಸರಾ ಬಹಿಷ್ಕಾರ

October 15, 2018

ಮೈಸೂರು: ಈ ಬಾರಿ ದಸರಾ ಮಹೋತ್ಸವವನ್ನು ನಾವು ಬಹಿಷ್ಕರಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೇಳಿದರು. ಮೈಸೂರು ದಸರಾ ಸಾಂಸ್ಕೃತಿಕ ಮೆರವಣಿಗೆ ಉದ್ಘಾಟಿಸಲು ನಗರಕ್ಕೆ ಆಗಮಿಸಿದ್ದ ಡಾ.ಜಿ.ಪರಮೇಶ್ವರ್ ಇಂದು ಮಧ್ಯಾಹ್ನ 1.30ರ ವೇಳೆಯಲ್ಲಿ ಸರ್ಕಾರಿ ಅತಿಥಿ ಗೃಹ ದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಈ ಬಾರಿ ದಸರಾದಲ್ಲಿ ನಮ್ಮನ್ನು (ಕಾಂಗ್ರೆ ಸ್ಸಿಗರು) ಕಡೆಗಣಿಸಲಾಗಿದೆ….

1 4 5 6 7 8 13
Translate »