Tag: Congress

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ
ಮೈಸೂರು

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ

October 5, 2018

ಬೆಂಗಳೂರು:  ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿಯುವ ತೀರ್ಮಾನಕ್ಕೆ ಕಾಂಗ್ರೆಸ್ ಮಂತ್ರಿಗಳ ಸಭೆ ಸಮ್ಮತಿಸಿದೆ. ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಪಕ್ಷದ ಸಚಿವರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ನಡೆದ ಚರ್ಚೆ ಸಂದರ್ಭದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಕೆಲವು ನಾಯಕರ ಹೇಳಿಕೆಗಳು ಏನೇ ಇರಲಿ, ನಾವು ಒಗ್ಗಟ್ಟಿನಿಂದ ಪಕ್ಷದ ಆಣತಿಯಂತೆ…

ಮೋದಿ ವಿರುದ್ಧ ಜನ ಜಾಗೃತಿಗಾಗಿ ಅ.2ರಿಂದ ಕಾಂಗ್ರೆಸ್ `ಲೋಕ ಸಂಪರ್ಕ ಅಭಿಯಾನ’
ಮೈಸೂರು

ಮೋದಿ ವಿರುದ್ಧ ಜನ ಜಾಗೃತಿಗಾಗಿ ಅ.2ರಿಂದ ಕಾಂಗ್ರೆಸ್ `ಲೋಕ ಸಂಪರ್ಕ ಅಭಿಯಾನ’

September 26, 2018

ಮೈಸೂರು:  ಅ.2ರ ಗಾಂಧಿ ಜಯಂತಿ ದಿನದಿಂದ ನ.19ರವರೆಗೆ ಕಾಂಗ್ರೆಸ್‍ನಿಂದ `ಲೋಕ ಸಂಪರ್ಕ ಅಭಿಯಾನ’ ಹಮ್ಮಿಕೊಂಡಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದರು. ರಫೇಲ್ ಯುದ್ಧ ವಿಮಾನ ಖರೀದಿ ಸೇರಿದಂತೆ ಅನೇಕ ಭ್ರಷ್ಟಾಚಾರದಲ್ಲಿ ನರೇಂದ್ರ ಮೋದಿ ತೊಡಗಿದ್ದಾರೆ. ಜನರನ್ನು ಮರಳು ಮಾಡುತ್ತಿರುವ ಮೋದಿ, ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಯಾವ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಈ ಬಗ್ಗೆ…

ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗಲ್ಲ… ಶಿಸ್ತು ಉಲ್ಲಂಘನೆ ಸಹಿಸಲ್ಲ
ಮೈಸೂರು

ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗಲ್ಲ… ಶಿಸ್ತು ಉಲ್ಲಂಘನೆ ಸಹಿಸಲ್ಲ

September 24, 2018

ಬೆಂಗಳೂರು: ಬ್ಲಾಕ್‍ಮೇಲ್ ತಂತ್ರಕ್ಕೆ ಬಗ್ಗುವುದಿಲ್ಲ. ಪಕ್ಷದ ಸಿಸ್ಟಂ ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್‍ನ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅತೃಪ್ತ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿದ್ದುಕೊಂಡೇ ಶಿಸ್ತನ್ನು ಉಲ್ಲಂಘನೆ ಮಾಡಿದರೆ ಸಹಿಸಲು ಸಾಧ್ಯವಿಲ್ಲ. ಯಾರೇ ಆಗಲೀ ಒತ್ತಡ ಹೇರುವ ಮೂಲಕ ಬ್ಲಾಕ್ ಮೇಲ್ ತಂತ್ರ ಉಪಯೋಗಿಸಿದರೆ ಅದಕ್ಕೆ ಪಕ್ಷ ಎಂದಿಗೂ ಮಣಿಯುವುದಿಲ್ಲ ಎಂದರು. ಬಿಜೆಪಿಯವರು ಅತ್ಯಂತ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ಯಡಿಯೂರಪ್ಪನವರು ಹಣದ ಆಮಿಷ…

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್
ಮೈಸೂರು

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ.ಸಿ.ವೇಣುಗೋಪಾಲ್, ನಾಸಿರ್ ಅಹಮದ್

September 24, 2018

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿ ಸಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‍ನ 3 ಸ್ಥಾನಗಳಿಗೆ ಅ. 4ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಸಿರ್ ಅಹಮದ್ ಮತ್ತು ಎಂ.ಸಿ.ವೇಣುಗೋಪಾಲ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಸಮ ನ್ವಯ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮೂರು ಸ್ಥಾನಗಳ ಪೈಕಿ 2 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಉಳಿದ 1 ಸ್ಥಾನಕ್ಕೆ ಜೆಡಿಎಸ್ ಸ್ಪರ್ಧಿಸಲಿದೆ. ಅದೇ ವೇಳೆ ಮೂರೂ ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು…

ಕಾಂಗ್ರೆಸ್ ಅತೃಪ್ತ ಶಾಸಕರು ಚೆನ್ನೈಗೆ, ಮತ್ತೆ ಕೆಲವರು ಮುಂಬೈಗೆ ಹೋದರಂತೆ!
ಮೈಸೂರು

ಕಾಂಗ್ರೆಸ್ ಅತೃಪ್ತ ಶಾಸಕರು ಚೆನ್ನೈಗೆ, ಮತ್ತೆ ಕೆಲವರು ಮುಂಬೈಗೆ ಹೋದರಂತೆ!

September 23, 2018

ಬೆಂಗಳೂರು: ಕಾಂಗ್ರೆಸ್‍ನ 8 ಅತೃಪ್ತ ಶಾಸಕರು ಮುಂಬೈಗೆ ತೆರಳಿ ದ್ದಾರೆ…ಮೂವರು ಶಾಸಕರು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದು, ಅವರು ಅಲ್ಲಿಂದ ಮುಂಬೈಗೆ ತೆರಳಲಿದ್ದಾರೆ… ಕಾಂಗ್ರೆಸ್ ಶಾಸಕರ ಬಂಡಾಯದ ಬಗ್ಗೆ ಶೃಂಗೇರಿ ಯಲ್ಲಿ ಮುಖ್ಯಮಂತ್ರಿಗಳಿಗೆ ಗುಪ್ತಚರ ಇಲಾಖೆಯಿಂದ ಕ್ಷಣಕ್ಷಣದ ಮಾಹಿತಿ… ಇವೆಲ್ಲವೂ ಇಂದು ದಿನವಿಡೀ ಖಾಸಗಿ ವಾಹಿನಿಗಳಲ್ಲಿ ಹರಿದಾಡಿದ ಸುದ್ದಿಗಳ ಮಹಾಪೂರ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಇಂದು ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಮೃತ್ಯುಂಜಯ ಹಾಗೂ ಗಣಪತಿ ಹೋಮ ಏರ್ಪಡಿಸಿತ್ತು. ಅದರಲ್ಲಿ ಗೌಡರ ಕುಟುಂಬವರ್ಗದವರು ಭಾಗವಹಿಸಿದ್ದರು. ಆದರೆ ಆಪರೇಷನ್…

ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ, ಇಡಿ ದುರ್ಬಳಕೆ: ಬಿಜೆಪಿ ವಿರುದ್ಧ ಹೋರಾಟದ ಎಚ್ಚರಿಕೆ
ಮೈಸೂರು

ಡಿ.ಕೆ.ಶಿವಕುಮಾರ್ ವಿರುದ್ಧ ಐಟಿ, ಇಡಿ ದುರ್ಬಳಕೆ: ಬಿಜೆಪಿ ವಿರುದ್ಧ ಹೋರಾಟದ ಎಚ್ಚರಿಕೆ

September 22, 2018

ಮೈಸೂರು,: ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಹಾಗೂ ಇಡಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಮೈಸೂರಿನ ಅಜೀಜ್‍ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ ರಾಜೇಶ್ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ ಈ ಇಲಾಖೆಗಳ ಮೇಲೆ ಒತ್ತಡ ಹೇರುವ ಮೂಲಕ ಕಾಂಗ್ರೆಸ್‍ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ವ್ಯವಸ್ಥಿತವಾಗಿ ಹಣಿಯಲು ಮುಂದಾಗಿದ್ದಾರೆ. ಹಾಗೇನಾದರೂ ಬಿಜೆಪಿ ನಾಯಕರು ತಮ್ಮ ನಡೆ ಬದಲಿಸಿಕೊಳ್ಳದಿದ್ದರೆ…

ರಾಜಕೀಯ ದ್ವೇಷ: ಕಾಂಗ್ರೆಸ್-ಬಿಎಸ್‍ಪಿ ಕಾರ್ಯಕರ್ತರ ನಡುವೆ ಘರ್ಷಣೆ
ಚಾಮರಾಜನಗರ

ರಾಜಕೀಯ ದ್ವೇಷ: ಕಾಂಗ್ರೆಸ್-ಬಿಎಸ್‍ಪಿ ಕಾರ್ಯಕರ್ತರ ನಡುವೆ ಘರ್ಷಣೆ

September 17, 2018

ಚಾಮರಾಜನಗರ: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಎಸ್‍ಪಿ ಪಕ್ಷದ ಕಾರ್ಯಕರ್ತರ ನಡುವೆ ಕಲ್ಲು ತೂರಾಟ ಹಾಗೂ ಮಾರಾಮಾರಿ ನಡೆದು, 8 ಮಂದಿ ಗಾಯಗೊಂಡಿರುವ ಘಟನೆ ಸಮೀಪದ ರಾಮಸಮುದ್ರ ಬಡಾವಣೆಯಲ್ಲಿ ಭಾನುವಾರ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತರೆನ್ನಲಾದ ನಾಗರಾಜು, ಚಂದ್ರಶೇಖರ್, ನಟರಾಜು, ಮಹದೇವಸ್ವಾಮಿ, ಆಂಜನೇಯ ಹಾಗೂ ಬಿಎಸ್‍ಪಿ ಕಾರ್ಯಕರ್ತರೆನ್ನಲಾದ ಚಿನ್ನಸ್ವಾಮಿ, ಮಂಜು, ಮಹದೇವಸ್ವಾಮಿ ಗಾಯ ಗೊಂಡಿದ್ದು, ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವಿವಿರ: ನಗರಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದ ಸೆಪ್ಟೆಂಬರ್ 3ರಂದು…

ಆಪರೇಷನ್ ಕಮಲ ಎಸಿಬಿಗೆ ಕಾಂಗ್ರೆಸ್ ದೂರು
ಮೈಸೂರು

ಆಪರೇಷನ್ ಕಮಲ ಎಸಿಬಿಗೆ ಕಾಂಗ್ರೆಸ್ ದೂರು

September 15, 2018

ಬೆಂಗಳೂರು: ಆಪರೇಷನ್ ಕಮಲ ಮೂಲಕ ಕಾಂಗ್ರೆಸ್ ಶಾಸಕ ರನ್ನು ಸೆಳೆದು ಮೈತ್ರಿ ಸರ್ಕಾರ ಪತನ ಗೊಳಿಸುವ ಬಿಜೆಪಿ ಪ್ರಯತ್ನಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಎಸಿಬಿ ಅಸ್ತ್ರಕ್ಕೆ ಮೊರೆ ಹೋಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಇಂದು ಈ ಸಂಬಂಧ ಎಸಿಬಿಗೆ ದೂರು ಸಲ್ಲಿಸಿ ದ್ದಾರೆ. ಕಾಂಗ್ರೆಸ್‍ನ 12 ಶಾಸಕರಿಗೆ ಬಿಜೆಪಿ 20ರಿಂದ 30 ಕೋಟಿ ಹಣದ ಆಮಿಷ ಒಡ್ಡಿದೆ ಎಂದು ಸುದ್ದಿವಾಹಿನಿಗಳಲ್ಲಿ ಬಿತ್ತರವಾದ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ವಿರುದ್ಧ ಈ ದೂರನ್ನು ಸಲ್ಲಿಸಲಾಗಿದೆ. ಎಸಿಬಿಗೆ ಈಶ್ವರ…

ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ
ಕೊಡಗು

ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ

August 20, 2018

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನ ವನ್ನು ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಭಾನುವಾರ ಹೇಳಿದ್ದಾರೆ. ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿ ಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು 1 ತಿಂಗಳ ವೇತನ ನೀಡುವ ತೀರ್ಮಾನ ತೆಗೆದು ಕೊಳ್ಳಲಾಗಿದೆ. ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ…

ಎ.ಎಸ್.ಪ್ರದೀಪ್ ನೇಮಕ
ಚಾಮರಾಜನಗರ

ಎ.ಎಸ್.ಪ್ರದೀಪ್ ನೇಮಕ

August 18, 2018

ಚಾಮರಾಜನಗರ: ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿಯಾಗಿ ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಎ.ಎಸ್. ಪ್ರದೀಪ್ ಅವರನ್ನು ನೇಮಕ ಮಾಡಿ ಸಮಿ ತಿಯ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಸಂಘಟಿತ ಕಾರ್ಮಿ ಕರನ್ನು ಒಗ್ಗೂಡಿಸಿ, ಸಂಘಟಿಸಿ ಸದಸ್ಯರನ್ನಾಗಿ ಮಾಡಿ ಅವರ ಕಲ್ಯಾಣಕ್ಕೆ ಶ್ರಮಿಸುವಂತೆ ಆದೇಶದಲ್ಲಿ ರಾಜ್ಯಾಧ್ಯಕ್ಷ ಡಾ.ಶಾಂತ ವೀರನಾಯ್ಕ ತಿಳಿಸಿದ್ದಾರೆ. ಸಮಿತಿಯ ರಾಜ್ಯ ಕಾರ್ಯದರ್ಶಿ ಹುದ್ದೆಯ ಜೊತೆಗೆ ಅಸಂಘಟಿತ ಕಾರ್ಮಿಕರ ವಿಭಾಗದ ಮೈಸೂರು ಜಿಲ್ಲೆಯ ಸಂಘಟನೆಯ ಉಸ್ತುವಾರಿಯನ್ನು ಎ.ಎಸ್. ಪ್ರದೀಪ್ ಅವರಿಗೆ…

1 5 6 7 8 9 13
Translate »