ಮೈಸೂರು: ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಎಸ್.ಪುಟ್ಟರಾಜು ಪುತ್ರ ಶಿವರಾಜ್ ಅವರ ಮೈಸೂರು ನಿವಾಸದ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಯಾದವಗಿರಿಯ ಐಡಿಯಲ್ ಜಾವಾ ರಸ್ತೆಯಲ್ಲಿರುವ ಸಂಕಲ್ಪ ಸೆಂಟ್ರಲ್ ಪಾರ್ಕ್ ಅಪಾರ್ಟ್ ಮೆಂಟ್‍ನಲ್ಲಿರುವ ಶಿವರಾಜ್ ಅವರ ಮನೆ ಮೇಲೆ ಗುರುವಾರ ಮಧ್ಯಾಹ್ನ ದಾಳಿ ನಡೆಸಿರುವ ಐಟಿ ಅಧಿಕಾರಿ ಗಳು, ಸುಮಾರು 2 ಗಂಟೆಗಳ ಕಾಲ ತಪಾಸಣೆ ನಡೆಸಿ, ವಾಪಸ್ಸಾಗಿದ್ದಾರೆ. ದಾಳಿ ಸಂದರ್ಭದಲ್ಲಿ ಅಡುಗೆ ಭಟ್ಟರನ್ನು ಹೊರತು ಪಡಿಸಿ ಬೇರ್ಯಾರು ಇರಲಿಲ್ಲ….
ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಸಿ.ಎಸ್.ಪುಟ್ಟರಾಜು
December 17, 2018ಹನೂರು: ಯಾವುದೇ ಮುಲಾಜಿಲ್ಲದೇ ಆರೋಪಿ ಯಾವುದೇ ಪಕ್ಷದ ಪ್ರಭಾವಿಯಾಗಿದ್ದರೂ ಆತನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ಹನೂರು ಕ್ಷೇತ್ರ ವ್ಯಾಪ್ತಿಯ ಬಿದರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಪರಿಸ್ಥಿತಿ ಅವಲೋಕನ ಮಾಡಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ತಪ್ಪಿಸ್ಥರ ಯಾರೇ ಆಗಿರಲ್ಲಿ ಯಾವುದೇ ಪಕ್ಷದವರು ಆಗಿರಲಿ ಪ್ರಭಾವಿಗಳು ಆಗಿದ್ದರೂ ಸಹ ಕ್ರಮಕೈಗೊಳ್ಳು ವಂತೆ ಪೆÇಲೀಸ್ ಇಲಾಖೆಗೆ ಆದೇಶ ನೀಡಿದ್ದಾರೆ….
ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಸಿಎಸ್‍ಪಿ
October 26, 2018ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿ ಗೆಲ್ಲು ವುದು ಸೂರ್ಯ-ಚಂದ್ರರು ಉದಯಿಸು ವುದು ಎಷ್ಟು ಸತ್ಯವೋ, ಅಷ್ಟೇ ಖಚಿತ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ಮಂಡ್ಯ ಲೋಕಸಭೆಯ ಉಪಚುನಾ ವಣೆಯ ಹಿನ್ನೆಲೆಯಲ್ಲಿ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನ ದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯ ಕರ್ತರು ಹಾಗೂ ಮುಖಂಡರ ಪೂರ್ವ ಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಮುಖ್ಯ…
ಮೂಡಲಕೊಪ್ಪಲು ಗ್ರಾಮವನ್ನು ಶೈಕ್ಷಣಿಕ ಕೇಂದ್ರವನ್ನಾಗಿಸಲು ಕ್ರಮ: ಸಿಎಸ್‍ಪಿ ಭರವಸೆ
October 4, 2018ಪಾಂಡವಪುರ: ‘ಗ್ರಾಮೀಣ ಪ್ರದೇಶದ ರೈತರ ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮೂಡಲಕೊಪ್ಪಲು ಗ್ರಾಮವನ್ನು ಶೈಕ್ಷಣಿಕ ಕೇಂದ್ರವನ್ನಾಗಿ ರೂಪಿಸಲು ಕ್ರಮವಹಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ತಾಲೂಕಿನ ಮೂಡಲಕೊಪ್ಪಲು ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೂಡಲಕೊಪ್ಪಲು ಗ್ರಾಮದ ಸುತ್ತಲಿನ ಗ್ರಾಮಗಳ ರೈತರ ಮಕ್ಕಳು ಶಿಕ್ಷಣ ಪಡೆಯಲು ದೂರ ಪ್ರಯಾಣ ಮಾಡಬೇಕಿತ್ತು. ಇದರಿಂದ ಹಲವು ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿ ದ್ದರು. ಇದನ್ನು ತಪ್ಪಿಸಲು…
ರಂಗ ಕಲೆಗಳಿಂದ ನೆಮ್ಮದಿ ಜೀವನ ಸಾಧ್ಯ
September 30, 2018ಮೈಸೂರು: ಒತ್ತಡ ಬದುಕಿನಿಂದ ದೂರವಾಗಿ ರಂಗಕಲೆಯಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿಯ ಜೀವನ ನಡೆಸಬಹುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಪ್ರಭ ಸಾಂಸ್ಕೃತಿಕ ವೇದಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರತಿಯೊ ಬ್ಬರ ನಿತ್ಯ ಬದುಕಿನಲ್ಲಿ ಒತ್ತಡ, ಜಿಜ್ಞಾಸೆ ಗಳೇ ತುಂಬಿರುವಾಗ, ರಂಗಕಲಾವಿದರಿಂದ ಮಾತ್ರ ನೆಮ್ಮದಿ ಬದುಕು ಕಾಣಲು ಸಾಧ್ಯವಾಗುತ್ತದೆ. ಕಲೆ, ಸಾಹಿತ್ಯ, ಸಾಂಸ್ಕೃತಿಕ ವಾಗಿ ತೊಡಗಿಸಿಕೊಳ್ಳದಿದ್ದರೆ ಮನುಷ್ಯ ಮಾನಸಿಕವಾಗಿ ಸ್ಥಿತಿವಂತನಾಗಿರಲು ಸಾಧ್ಯ ವಿಲ್ಲ. ರಂಗಚಟುವಟಿಕೆಯಲ್ಲಿ ತೊಡಗಿಸಿ…
ದೇಶದ ಅಭಿವೃದ್ಧಿಗೆ ಶಿಕ್ಷಕರೇ ಜೀವಾಳ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಮತ
September 6, 2018ಮಂಡ್ಯ: ‘ದೇಶ ಅಭಿವೃದ್ಧಿ ಹೊಂದ ಬೇಕಾದರೆ ಅದಕ್ಕೆ ಶಿಕ್ಷಕರೇ ಜೀವಾಳ. ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿ ಕೊಡುವಲ್ಲಿ ಗುರುವಿನ ಪಾತ್ರ ಅಪಾರವಾದದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 130ನೇ ಜನ್ಮದಿನವನ್ನು ಇಂದು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೇವೆ. ದೇವರ ರೂಪದ ಮಕ್ಕಳನ್ನು ರಾಷ್ಟ್ರದ ಸತ್ಪ್ರಜೆಯನ್ನಾಗಿಸುವ ನಿಟ್ಟಿನಲ್ಲಿ…
ಮೇಲುಕೋಟೆಯ ಕಲ್ಯಾಣಿ, ಕೊಳಗಳ ಸಮಗ್ರ ಜೀರ್ಣೋದ್ಧಾರಕ್ಕೆ ಸಚಿವರ ಸೂಚನೆ
August 28, 2018ಮೇಲುಕೋಟೆ: ಮೇಲುಕೋಟೆಯಲ್ಲಿರುವ ಐತಿಹಾಸಿಕ ಕಲ್ಯಾಣಿಗಳು ಮತ್ತು ಕೊಳಗಳನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಲು ತಕ್ಷಣ ಮಾಸ್ಟರ್ ಪ್ಲಾನ್ ತಯಾರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸಣ್ಣ ನೀರಾವರಿ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧ ಕೆರೆಗಳು, ಪಿಕಪ್ ಡ್ಯಾಂ ನಿರ್ಮಾಣದ ಸ್ಥಳಗಳನ್ನು ಪರಿಶೀಲಿಸಿದ ಸಚಿವರು, ನಂತರ ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದರು. ತಿರುಪತಿ ಮಾದರಿಯಲ್ಲಿ ಕಲ್ಯಾಣಿ ಮತ್ತು ಕೊಳಗಳಲ್ಲಿ ಸಂಗ್ರಹವಾಗುವ ನೀರನ್ನು ಶುದ್ಧೀಕರಣ…
ಪುತ್ರನ ಬೀಗರ ಔತಣ ರದ್ದುಪಡಿಸಿ ಕೊಡಗು ಸಂತ್ರಸ್ತರಿಗೆ
August 23, 2018ಮಂಡ್ಯ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಮ್ಮ ಪುತ್ರನ ಬೀಗರ ಔತಣಕೂಟ ರದ್ದುಪಡಿಸಿದ್ದಾರೆ. ಬುಧವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. ಭೀಕರ ಮಳೆಯಿಂದಾಗಿ `ಕೊಡವರು’ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ನನ್ನ ಮಗನ ಬೀಗರ ಔತಣ ಕೂಟವನ್ನು ರದ್ದುಪಡಿಸಿದ್ದೇನೆ. ಈ ಔತಣಕ್ಕೆ ಖರ್ಚು ಮಾಡಲು ಉದ್ದೇಶಿಸಲಾಗಿದ್ದ ಸುಮಾರು 10 ಲಕ್ಷ ರೂ. ಗಳನ್ನು ಕೊಡಗು ನೆರೆ ಸಂತ್ರಸ್ತರ ನೆರವಿಗೆ ನೀಡುವುದಾಗಿ ಹೇಳಿ ದರು. ನೆರೆಯಿಂದಾಗಿ ಕೊಡಗು ಜನ…
ಕೊಡಗಿನ ಜೊತೆ ಮಂಡ್ಯಗೆ ಅವಿನಾಭಾವ ಸಂಬಂಧ; ಸಚಿವ ಸಿ.ಎಸ್.ಪುಟ್ಟರಾಜು
August 21, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿವೆ ಎಂದು ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಕೃತಿ ವಿಕೋಪದಿಂದ ರಸ್ತೆಗಳು ಹಾನಿಯಾಗಿದ್ದು, ಸದ್ಯ ಮಳೆ ಹಾನಿಯಿಂದ ತೊಂದರೆಯಾಗಿ ರುವ ಎರಡು ಜಿ.ಪಂ.ವ್ಯಾಪ್ತಿಯಲ್ಲಿ ತ್ವರಿತವಾಗಿ ಗ್ರಾಮೀಣ ರಸ್ತೆಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಿದೆ. ರಸ್ತೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ತಕ್ಷಣವೇ 50 ಲಕ್ಷ ರೂ.ವನ್ನು ಜಿ.ಪಂ.ಗೆ…
ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ
August 17, 2018ಮಂಡ್ಯ: ಕಾವೇರಿ ನದಿ ಪ್ರವಾಹ ದಿಂದ ಸಂಕಷ್ಟಕ್ಕೆ ಸಿಲುಕಿರುವ ಶ್ರೀರಂಗಪಟ್ಟಣ, ಪಾಂಡವಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವ ಕಾರಣ, ಜಲಾಶಯದಿಂದ 1.25 ಲಕ್ಷ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಿ ರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನ ಪ್ರವಾಹ ಭೀತಿ ಎದುರಿಸುತ್ತಿರುವ ಗ್ರಾಮಗಳಲ್ಲಿ ಒಂದಾದ ಎಣ್ಣೆಹೊಳೆಕೊಪ್ಪಲಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ…