Tag: CS Puttaraju

ಸಾಲದಿಂದ ಅನ್ನದಾತನನ್ನು ಮುಕ್ತಗೊಳಿಸಲು ಬದ್ಧ: ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ಸಾಲದಿಂದ ಅನ್ನದಾತನನ್ನು ಮುಕ್ತಗೊಳಿಸಲು ಬದ್ಧ: ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು

August 17, 2018

ಜಿಲ್ಲೆಯಾದ್ಯಂತ 72ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮಂಡ್ಯ: ಅನ್ನದಾತನನ್ನು ಸಾಲದ ಶೂಲದಿಂದ ಮುಕ್ತನನ್ನಾಗಿಸಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಆತ್ಮಹತ್ಯೆಯ ಹಾದಿ ಹಿಡಿಯಬೇಡಿ ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಮನವಿ ಮಾಡಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂ ಗಣದಲ್ಲಿ ನಡೆದ 72ನೇ ಸ್ವಾತಂತ್ರೋ ತ್ಸವದ ಸಂದೇಶ ನೀಡಿ ಮಾತನಾಡಿದ ಅವರು, ವರುಣನ ಕೃಪೆಯಿಂದ ಜಿಲ್ಲೆಯಲ್ಲಿ ಬರಗಾಲ ದೂರವಾಗಿದೆ. ಎಲ್ಲ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಂದಲೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ತಗ್ಗು ಪ್ರದೇಶದಲ್ಲಿರುವವರು ಪ್ರವಾಹ…

ಜಿಲ್ಲಾಸ್ಪತ್ರೆ ಅವ್ಯವಸ್ಥೆಗೆ ಸಚಿವರ ತರಾಟೆ
ಮಂಡ್ಯ

ಜಿಲ್ಲಾಸ್ಪತ್ರೆ ಅವ್ಯವಸ್ಥೆಗೆ ಸಚಿವರ ತರಾಟೆ

August 13, 2018

ಮಂಡ್ಯ: ಮಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಕಂಡು ಆಕ್ರೋಶಗೊಂಡ ಮಂಡ್ಯ ಜಿಲ್ಲಾ ಉಸ್ತುವಾರಿ, ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲಾಸ್ಪತ್ರೆ ಆವರಣದಲ್ಲಿಂದು ನಡೆಯಿತು. ಇಂದು ಬೆಳಗ್ಗೆ ವಿ.ಸಿ.ಫಾರಂ ಗೇಟ್ ಬಳಿ ಅಪಘಾತದಲ್ಲಿ ಮೃತಪಟ್ಟವರನ್ನು ನೋಡಲು ಮಿಮ್ಸ್‍ನ ಶವಾಗಾರಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆಯಿತು. ಏನಿದು ಘಟನೆ: ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಹೆರಿಗೆ ವಾರ್ಡ್ ಬಳಿ ಬಾಣಂತಿಯರ ಸಂಬಂಧಿಕರಿಗೆ…

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ
ಮಂಡ್ಯ

ಸೀತಾಪುರ ಗದ್ದೆಯಲ್ಲಿ ನಾಟಿ ಮಾಡಿದ ಸಿಎಂ ಕುಮಾರಸ್ವಾಮಿ ನಾಡಿನ ದೊರೆ ಸಂದೇಶ: ಅನ್ನದಾತರೇ ಧೈರ್ಯಗೆಡದಿರಿ… ನಿಮ್ಮೊಂದಿಗೆ ನಾವಿದ್ದೇವೆ

August 12, 2018

ಮೈಸೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಕೆಸರು ಗದ್ದೆಯಲ್ಲಿ ರೈತ ಮಹಿಳೆ ಯರೊಂದಿಗೆ ಭತ್ತದ ನಾಟಿ ಮಾಡಿದರು. ಸಾಲ ಭೀತಿಯಿಂದ ಹತಾಶರಾಗಿ ಆತ್ಮಹತ್ಯೆ ಹಾದಿ ಹಿಡಿದಿರುವ ಮಣ್ಣಿನ ಮಕ್ಕಳಿಗೆ ಸರ್ಕಾರ ನಿಮ್ಮೊಂದಿಗಿದೆ ಎಂಬ ಸಂದೇಶ ದೊಂದಿಗೆ ಸೀತಾಪುರದ ಕುಳ್ಳಮ್ಮ ಮತ್ತು ಕೆಂಚೇಗೌಡ ಕುಟುಂಬಕ್ಕೆ ಸೇರಿದ 5 ಎಕರೆ ಜಮೀನಿನಲ್ಲಿ ಮುಖ್ಯಮಂತ್ರಿಗಳು ಹೊಸ ಕಾರ್ಯಕ್ರಮಕ್ಕೆ ನಾಂದಿ ಹಾಡಿದ್ದಾರೆ. ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಶಾಸಕರಾದ…

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ
ಮಂಡ್ಯ

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

August 8, 2018

ಪಾಂಡವಪುರ:  ಭತ್ತದ ನಾಟಿ ಹಾಕುವ ಕಾರ್ಯಕ್ಕೆ ಚಾಲನೆ ನೀಡಲು ಆ.11ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಾಲೂಕಿನ ಸೀತಾಪುರ ಗ್ರಾಮದ ಹೊರವಲಯದ ಜಮೀನಿಗೆ ತೆರಳಿ ಪರಿಶೀಲಿಸಿದರು. ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮಂಜುಶ್ರೀ, ಎಸಿ ಆರ್.ಯಶೋಧ, ತಹಶೀಲ್ದಾರ್ ಡಿ.ಹನುಮಂತ ರಾಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಸಚಿವ ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭ ರೈತರೊಂದಿಗೆ ಭತ್ತ…

ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 24, 2018

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ಬಜೆಟ್‍ನಲ್ಲಿ 110 ಕೋಟಿ ಅನುದಾನ ಮೀಸಲಿರಿಸಿದ್ದು, ಸಣ್ಣ ನೀರಾ ವರಿ ಇಲಾಖೆ ವತಿಯಿಂದ ಈ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು. ಸೋಮವಾರ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋ ಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯ ಸರ್ಕಾರ ರೈತರ ಸರ್ವತೋಮುಖ ಅಭಿವೃದ್ಧಿಗೆ ಪೂರಕ ವಾದ ಕಾರ್ಯಕ್ರಮಗಳನ್ನು…

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ
ಮೈಸೂರು

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ

July 22, 2018

ಮೈಸೂರು:  ನಮ್ಮಲ್ಲಿ ಒಡಕಿಲ್ಲ, ಒಂದೇ ಮನಸ್ಸಿನಿಂದ ಜನರ ಸೇವೆಯನ್ನು ಮಾಡುತ್ತಿದ್ದೇವೆ. ನಾನು ಕರ್ನಾ ಟಕವನ್ನೆಲ್ಲಾ ಸುತ್ತಿದರೂ ಕ್ಷೇತ್ರದ ಜನರ ಸೇವೆಗೆ ಆದ್ಯತೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ವಿಜಯನಗರ 3ನೇಹಂತದಲ್ಲಿರುವ ಸಂಗಮ ವೃತ್ತದಲ್ಲಿ ವಿಜಯಗರ ಒಕ್ಕಲಿಗರ ವೇದಿಕೆ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ, ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜಯನಗರ ಮೂರನೇ ಹಂತದ ಸಮಸ್ಯೆಗಳು ಗೊತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು,…

ಕೆವಿಎಸ್ ಸಾಧನೆ ಅವಿಸ್ಮರಣೀಯ: ಜಿಟಿಡಿ
ಮಂಡ್ಯ

ಕೆವಿಎಸ್ ಸಾಧನೆ ಅವಿಸ್ಮರಣೀಯ: ಜಿಟಿಡಿ

July 22, 2018

ಮಂಡ್ಯ: ನಿತ್ಯ ಸಚಿವರೆಂದು ಬಿರುದು ಪಡೆದುಕೊಂಡಿರುವ ಕೆ.ವಿ. ಶಂಕರೇಗೌಡರ ಸಾಧನೆ ಅವಿಸ್ಮರಣೀಯ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು. ನಗರದ ಕರ್ನಾಟಕ ಸಂಘದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ವಿ.ಶಂಕರೇಗೌಡ ಶತಮಾನೋತ್ಸವ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕೆ.ವಿ.ಶಂಕರ ಗೌಡರ ಆದರ್ಶ, ಹೆಸರನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕೆಲಸ ಮಾಡ ಲಿದೆ ಎಂಬ ನಂಬಿಕೆ ನನಗಿದೆ. ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಿ ರುವುದು ಶ್ಲಾಘನೀಯ. ಕರ್ನಾಟಕ ಸಂಘದ ವತಿಯಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಇಡಲಾಗಿರುವ…

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾಳಜಿ ವಹಿಸಿ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾಳಜಿ ವಹಿಸಿ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 22, 2018

ಮೇಲುಕೋಟೆ: ಹೆಣ್ಣು ಮಕ್ಕಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಹೇಳಿದರು. ಮಾಣಿಕ್ಯನಹಳ್ಳಿ ಗ್ರಾಮದ ಬಾಲಭೈರ ವೇಶ್ವರ ಸಮುದಾಯ ಭವನದಲ್ಲಿ ಬೆಂಗ ಳೂರಿನ ವಲ್ರ್ಡ್ ಆಫ್ ವುಮೆನ್ ಹದಿ ಹರೆಯದ ಶಾಲಾ ಕಾಲೇಜು ಹೆಣ್ಣು ಮಕ್ಕಳಿಗೆ ಶನಿವಾರ ಹಮ್ಮಿಕೊಂಡಿದ್ದ ನೈರ್ಮಲ್ಯೀ ಕರಣದ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಣ್ಣುಮಕ್ಕಳ ಆರೋಗ್ಯದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ…

ಮೂಗುಮಾರಮ್ಮನ ಹೆಬ್ಬಾಗಿಲು, ದೇವರ ಕೊಳ ಲೋಕಾರ್ಪಣೆ
ಮಂಡ್ಯ

ಮೂಗುಮಾರಮ್ಮನ ಹೆಬ್ಬಾಗಿಲು, ದೇವರ ಕೊಳ ಲೋಕಾರ್ಪಣೆ

July 18, 2018

ಪಾಂಡವಪುರ: ತಾಲೂಕಿನ ಶಿಂಡಬೋಗನಹಳ್ಳಿ ಗ್ರಾಮದೇವತೆ ಮೂಗುಮಾರಮ್ಮನ ಹೆಬ್ಬಾಗಿಲು ಮತ್ತು ಗ್ರಾಮದ ಹೊರವಲಯದಲ್ಲಿ ಜೀರ್ಣೋದ್ಧಾರಗೊಂಡಿರುವ ದೇವರ ಕೊಳವನ್ನು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ನಂತರ ಮಾತನಾಡಿದ ಸಚಿವರು, ಗ್ರಾಮ ದೇವತೆ ಮೂಗುಮಾರಮ್ಮನ ಹಬ್ಬದ ಅಂಗವಾಗಿ ಗ್ರಾಮದಲ್ಲಿ ನಿರ್ಮಿಸಲಾಗಿದ್ದ ಮೂಗುಮಾರಮ್ಮನ ಹೆಬ್ಬಾಗಿಲು ಉದ್ಘಾಟಿಸಿ, ಗ್ರಾಮದ ಹೊರವಲಯದಲ್ಲಿ ಶಿಥಿಲ ಗೊಂಡಿದ್ದ ದೇವರಕೊಳ (ಮಗುಕೊಳ) ವನ್ನು ದುರಸ್ಥಿಗೊಳಿಸಿ ಜೀರ್ಣೋದ್ಧಾರ ಗೊಳಿಸಿದ್ದೇವೆ ಎಂದರು. ಗ್ರಾಮದೇವತೆ ಹಬ್ಬ ಆಚರಣೆಯಿಂದ ಗ್ರಾಮದಲ್ಲಿ ಶಾಂತಿ, ನೆಮ್ಮದಿ ನೆಲೆಸಲಿದ್ದು, ಗ್ರಾಮದ ಜನತೆ ಸಹಬಾಳ್ವೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಅದೇ…

ರಾಜ್ಯದ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ
ಮೈಸೂರು

ರಾಜ್ಯದ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ

July 17, 2018

ಇಲವಾಲ ಹೋಬಳಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಚಾಲನೆ ನೀಡಿದ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಪ್ರತಿಕ್ರಿಯೆ ಮೈಸೂರು: ರಾಜ್ಯದಲ್ಲಿರುವ ಎಲ್ಲಾ ಕೆರೆಗಳನ್ನು ಅಭಿ ವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಮೈಸೂರು ತಾಲೂಕು ಇಲವಾಲ ಕೆರೆ ಅಭಿವೃದ್ಧಿ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲವಾಲ ಕೆರೆ ಹೂಳು ತೆಗೆಯು ವುದು,…

1 2 3 4 5
Translate »