ಮೈಸೂರು: ಹಿರಿಯರು, ಅನುಭವಸ್ಥರ ಮಾರ್ಗದರ್ಶನ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸುವ ಮೂಲಕ ಬಿಜೆಪಿಗೆ ಗೌರವ ತರುವಂತೆ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಮಾದೇಗೌಡರು ಕಿವಿಮಾತು ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಸಪ್ತಪಧಿ ಕಲ್ಯಾಣ ಮಂಟಪದಲ್ಲಿ ಇಂದು ಏರ್ಪಡಿಸಿದ್ಧ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಮರ್ಪಣಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಚಾಮರಾಜ…