ಬೆಂಗಳೂರು,ಫೆ.15(ಕೆಎಂಶಿ)-ರೈತರ ಹಿತಕ್ಕಾಗಿ ರಾಜ್ಯ ಕೃಷಿ ಇಲಾಖೆ ಕೈಗೊಂಡಿ ರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಚಿತ್ರನಟ ದರ್ಶನ್ ಅವ ರನ್ನು ಕೃಷಿ ಇಲಾಖೆಯ ಪ್ರಚಾರ ರಾಯಭಾರಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆಯ ಪ್ರಚಾರ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ನಟ ದರ್ಶನ್ ಒಪ್ಪಿಕೊಂಡಿದ್ದಾರೆ. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ, ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಇಲಾಖೆಯ…
ಅರಣ್ಯ ಸಿಬ್ಬಂದಿಗೆ ದರ್ಶನ್ 12 ಲಕ್ಷ ಧನ ಸಹಾಯ
December 13, 2018ಹನೂರು: ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಅರಣ್ಯ ರಕ್ಷಣೆಗೆ ಕರ್ತವ್ಯ ನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೂ ಕಾಳಜಿ ವಹಿಸಬೇಕಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದರು. ಸಮೀಪದ ಮಲೆ ಮಹದೇಶ್ವರ ವನ್ಯ ಜೀವಿಧಾಮಕ್ಕೆ ಬುಧವಾರ ಭೇಟಿ ನೀಡಿದ ಅವರು, ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂ ದಿಗೆ 12 ಲಕ್ಷ ಧನಸಹಾಯ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಟುಂಬದವರನ್ನು ಹಾಗೂ ಜೀವದ ಹಂಗು ತೊರೆದು ಅರಣ್ಯ ಮತ್ತು ವನ್ಯ ಜೀವಿ ಸಂರಕ್ಷಣೆಯಲ್ಲಿ ತೊಡಗಿರುವ ಇಲ್ಲಿನ ಸಿಬ್ಬಂದಿಯ ಸೇವೆ…
ದರ್ಶನ್ ಕಾರು ಅಪಘಾತ ಪ್ರಕರಣ: ಮೈಸೂರು ವಿವಿ ಪುರಂ ಸಂಚಾರಿ ಪೊಲೀಸರಿಂದ ಕೋರ್ಟ್‍ಗೆ ಚಾರ್ಜ್ ಶೀಟ್ ಸಲ್ಲಿಕೆ
November 4, 2018ಮೈಸೂರು: ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣ ಸಂಬಂಧ ಮೈಸೂರಿನ ವಿವಿ ಪುರಂ ಸಂಚಾರ ಠಾಣೆ ಪೊಲೀಸರು ತನಿಖೆ ಪೂರ್ಣಗೊಳಿಸಿ, ಮೈಸೂರಿನ 3ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮೈಸೂರಿನ ರಿಂಗ್ ರಸ್ತೆ, ಜೆಎಸ್‍ಎಸ್ ಅರ್ಬನ್ ಹಾತ್ ಸಮೀಪ, ಕಳೆದ ಸೆ.23ರಂದು ಬೆಳಗಿನ ಜಾವ, ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ದರ್ಶನ್ ಸೇರಿ ದಂತೆ ಕಾರಿನಲ್ಲಿದ್ದ ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್, ದರ್ಶನ್ ಸ್ನೇಹಿತರಾದ ಪ್ರಕಾಶ್ ಹಾಗೂ ಅಂಟೋನಿ…
ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ
September 26, 2018ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಇಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯ ವಿಚಾರಿಸಿದರು. ಸುಮಾರು 15 ನಿಮಿಷಗಳ ಕಾಲ ಆಸ್ಪತ್ರೆ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ನಂತರ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಆರೋಗ್ಯವಾಗಿದ್ದಾರೆ. ಈಗಾಗಲೇ ಬಲಗೈಗೆ ಶಸ್ತ್ರ ಚಿಕಿತ್ಸೆ ಆಗಿದ್ದು, ಈಗ ಆರೋಗ್ಯವಾಗಿದ್ದಾರೆ. ಶೀಘ್ರ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವರು ಎಂದರು. ನಿನ್ನೆಯಷ್ಟೇ ಸಂಭವಿಸಿದ್ದ ಕಾರು ಅಪಘಾತದಲ್ಲಿ…
ಕಾರು ಅಪಘಾತದಲ್ಲಿ ನಟರಾದ ದರ್ಶನ್, ದೇವರಾಜ್, ಪ್ರಜ್ವಲ್‍ಗೆ ಗಾಯ
September 25, 2018ಮೈಸೂರು: ಮೈಸೂರಿನ ಹೆಬ್ಬಾಳು ಬಳಿ ರಿಂಗ್ ರಸ್ತೆಯಲ್ಲಿ ಇಂದು ಮುಂಜಾನೆ ನಡೆದ ಕಾರು ಅಪಘಾತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಸೇರಿದಂತೆ ನಾಲ್ವರು ಕನ್ನಡ ಚಲನಚಿತ್ರ ನಟರು ತೀವ್ರವಾಗಿ ಗಾಯಗೊಂಡಿದ್ದಾರೆ. ದರ್ಶನ್ ತೂಗುದೀಪ, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಆಂಟನಿ ಅಪಘಾತದಲ್ಲಿ ಗಾಯಗೊಂಡವರಾಗಿದ್ದು, ಅವರನ್ನು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಲ್ಲರಿಗೂ ಶಸ್ತ್ರಚಿಕಿತ್ಸೆ ನೆರವೇರಿಸ ಲಾಗಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ತೋಳಿಗೂ ಗಾಯವಾಗಿದೆ. ದೇವರಾಜ್ ಅವರ ಎಡಗೈ ಬೆರಳಿನ ತುದಿ…