ಮೈಸೂರು: ಹಲವು ವರ್ಷಗಳ ನಂತರ ನಾಡಿನ ಎಲ್ಲಾ ಅಣೆಕಟ್ಟುಗಳು ಭರ್ತಿಯಾಗಿದ್ದು, ನಾಡು ಸಮೃದ್ಧಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮೈಸೂರಿನ ಜನತೆ ಮನೆ ಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ದಸರಾ ಆಚರಿಸುವುದಕ್ಕೆ ಸಹಕಾರ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮನವಿ ಮಾಡಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಭಾನುವಾರ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ, ನೂತನ ಶಾಸಕರಿಗೆ ಸನ್ಮಾನ ಹಾಗೂ ಪ್ರತಿಭಾನ್ವಿತ…
ಮೈಸೂರು
ಪಂಜಿನ ಕವಾಯತಿನಲ್ಲಿ ವಿದ್ಯುನ್ಮಾನ ಬಾಣ-ಬಿರುಸು ಪ್ರದರ್ಶನಕ್ಕೆ ಚಿಂತನೆ
July 23, 2018ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ಹೆಚ್ಚು ಆಕರ್ಷಕವಾಗಿ ಆಚರಿಸುವುದಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಬನ್ನಿಮಂಟಪದ ಕವಾಯತ್ ಮೈದಾನದಲ್ಲಿ ನಡೆಯಲಿರುವ ಪಂಜಿನ ಕವಾಯತು ಪ್ರದರ್ಶನದಲ್ಲಿ ಜೂಡೋ, ಮಾರ್ಷಲ್ ಆಟ್ರ್ಸ್ ನೊಂದಿಗೆ ಹೊಗೆ ರಹಿತ ಪರಿಸರ ಸ್ನೇಹಿ ವಿದ್ಯುನ್ಮಾನ ಬಾಣ-ಬಿರುಸು ಪ್ರದರ್ಶಿಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಲೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ದಸರಾ ಮಹೋತ್ಸವದ ಆಕರ್ಷಣೆಗೆ ಹೊಸ ಆಲೋಚನೆಗಳೊಂದಿಗೆ ಅಗತ್ಯ ಸಿದ್ಧತೆ…