Tag: DC N. Manjushri

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ
ಮಂಡ್ಯ

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ

October 10, 2018

ಮಂಡ್ಯ: ಜಿಲ್ಲೆಯ ಜೀವ ನಾಡಿ ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯಕಾರಿ ಯಾಗಿದ್ದ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಡಿಸಿ ಎನ್. ಮಂಜುಶ್ರೀ ಆದೇಶ ಹೊರಡಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣ ರಾಜಸಾಗರ ಜಲಾಶಯದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಮಂಗಳವಾರ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸುವಂತೆ ಪ್ರಕೃತಿ ವಿಕೋಪ ಕೇಂದ್ರ…

ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ: ಕೃಷಿ ಸಂಬಂಧಿಸಿದ ಸಭೆಯಲ್ಲಿ ಡಿಸಿ ಮಂಜುಶ್ರೀ ಸೂಚನೆ
ಮಂಡ್ಯ

ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ: ಕೃಷಿ ಸಂಬಂಧಿಸಿದ ಸಭೆಯಲ್ಲಿ ಡಿಸಿ ಮಂಜುಶ್ರೀ ಸೂಚನೆ

June 28, 2018

ಮಂಡ್ಯ: ‘ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದ ರೀತಿಯಲ್ಲಿ ಮುನ್ನೆಚ್ಚರಿಕೆಯಿಂದ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧ ವಾರ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಜಿಲ್ಲೆಯಲ್ಲಿ ಉತ್ತಮ ಮಳೆ ಹಾಗೂ ನೀರಿನ ಲಭ್ಯತೆ ಇರುವ ಕಾರಣ ಬಿತ್ತನೆ ಕಾರ್ಯವು ಸದ್ಯದಲ್ಲೇ ಆರಂಭಗೊಳ್ಳಲಿದ್ದು, ಜುಲೈ ಮೊದಲ ವಾರದೊಳಗೆ ಜಿಲ್ಲೆಯ ರೈತರಿಗೆ ಅಗತ್ಯವಾದ…

ಪ್ಲಾಸ್ಟಿಕ್ ಕೈ ಚೀಲಗಳ ನಿಷೇಧಕ್ಕೆ ಆಗ್ರಹ
ಮಂಡ್ಯ

ಪ್ಲಾಸ್ಟಿಕ್ ಕೈ ಚೀಲಗಳ ನಿಷೇಧಕ್ಕೆ ಆಗ್ರಹ

June 27, 2018

ಮಂಡ್ಯ:  ಮಹಾರಾಷ್ಟ್ರ ಮಾದರಿ ಯಲ್ಲಿ ಪ್ಲಾಸ್ಟಿಕ್ ಕೈ ಚೀಲಗಳನ್ನು ಸಂಪೂರ್ಣ ನಿಷೇಧಿಸುವಂತೆ ಆಗ್ರಹಿಸಿ ವಕೀಲರು ಜಿಲ್ಲಾಧಿಕಾರಿ ಗಳಿಗೆ ಮಂಗಳವಾರ ಮನವಿ ಸಲ್ಲಿಸಿದರು. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅಖಿಲ ಭಾರತ ವಕೀಲರ ಸಂಘದ ಮಂಡ್ಯ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಟಿ.ವಿಶ್ವನಾಥ್ ಮತ್ತು ಪದಾಧಿಕಾರಿಗಳು ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ಮನವಿ ನೀಡಿ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಳವಾಗಿದ್ದು, ಪರಿಸರ ಮತ್ತು ಜೀವ ಸಂಕುಲಗಳಿಗೆ ಅತ್ಯಂತ ಕೆಟ್ಟ ರೀತಿಯಲ್ಲಿ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಸಂಪೂರ್ಣವಾಗಿ…

ಬೆಳೆ ನಷ್ಟ ಪರಿಹಾರ ನೀಡಿ: ಡಿಸಿ ಸೂಚನೆ
ಮಂಡ್ಯ

ಬೆಳೆ ನಷ್ಟ ಪರಿಹಾರ ನೀಡಿ: ಡಿಸಿ ಸೂಚನೆ

June 1, 2018

ಮಂಡ್ಯ:  ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರವಾಗಿ ವಿಮಾ ಹಣ ನೀಡಲು ವಿಮಾ ಸಂಸ್ಥೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬೆಳೆ ವಿಮಾ ಯೋಜನೆ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ವಿಮಾ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ…

ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಸೂಚನೆ ತಪ್ಪಿದ್ದಲ್ಲಿ ದಾಸ್ತಾನು ಸಕ್ಕರೆ ವಶಕ್ಕೆ: ಡಿಸಿ ಎಚ್ಚರಿಕೆ
ಮಂಡ್ಯ

ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಸೂಚನೆ ತಪ್ಪಿದ್ದಲ್ಲಿ ದಾಸ್ತಾನು ಸಕ್ಕರೆ ವಶಕ್ಕೆ: ಡಿಸಿ ಎಚ್ಚರಿಕೆ

May 31, 2018

ಮಂಡ್ಯ: ಸಕ್ಕರೆ ಕಾರ್ಖಾನೆ ಗಳಿಗೆ ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ಜೂ.5 ರೊಳಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಪ್ಪದೇ ಪಾವತಿಸಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಗಳಲ್ಲಿ ಸಂಗ್ರಹ ವಾಗಿರುವ ಸಕ್ಕರೆಯನ್ನು ವಶಪಡಿಸಿ ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಪತ್ರಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಬಾರಿ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ತಿಳಿಸ…

Translate »