ಚಾಮರಾಜನಗರ: ಜನರನ್ನು ಕಾಡುವ ಡೆಂಗ್ಯೂ ಜ್ವರ ಹಾಗೂ ಇದರ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಮುಂಜಾ ಗರೂಕತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ನಗರದಲ್ಲಿ ನಡೆಸಿದ ಜಾಥಾ ಜನರ ಗಮನ ಸೆಳೆಯಿತು. ನಗರದ ಜಿಲ್ಲಾಡಳಿತ ಭವನದ ಆವರ ಣದಲ್ಲಿ ಮೊದಲಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಡೆಂಗ್ಯೂ ವಿರೋಧಿ ಮಾಸಾಚರಣೆ ಹಿನ್ನೆಲೆಯಲ್ಲಿ ನಡೆದ ಜನಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿ ಚಾಲನೆ ಕೊಟ್ಟರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ಚಾಮರಾಜನಗರ
ನಾಳೆ ಡೆಂಗ್ಯೂ ಅರಿವು ಕಾರ್ಯಾಗಾರ
May 30, 2018ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಮೇ 31ರಂದು ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.