ಮೈಸೂರು: ಮೈಸೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಡಿ. ದೇವರಾಜ ಅರಸು ರಸ್ತೆಯನ್ನು ಅಂತಾರಾಷ್ಟ್ರೀಯ ಮಟ್ಟದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಹಲವು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಮಾನ ಸದಲ್ಲಿ ಅಚ್ಚಳಿಯದೇ ಉಳಿದಿರುವ, ಮೈಸೂರು ಭಾಗದ ಪ್ರಥಮ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಿ. ದೇವರಾಜ ಅರಸು ಅವರ ಹೆಸರಿನ ಈ ರಸ್ತೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸಲು ಮೈಸೂರು ಮಹಾನಗರ ಪಾಲಿಕೆಯು ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ. ಫುಟ್‍ಪಾತ್ ಅಭಿವೃದ್ಧಿ,…