ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ನಟರಾದ ದೇವರಾಜ್ ಮತ್ತು ಪುತ್ರ ಪ್ರಜ್ವಲ್ ದೇವರಾಜ್ ಅವರು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಸೋಮವಾರ ಮುಂಜಾನೆ ಮೈಸೂರಿನ ಜೆಎಸ್‍ಎಸ್ ಅರ್ಬನ್ ಹಾತ್ ಎದುರಿನ ರಿಂಗ್ ರಸ್ತೆ ತಿರುವಿನಲ್ಲಿ ಆಡಿ ಕ್ಯೂ-7 ಕಾರು ಮೀಡಿಯನ್‍ಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ನಟರಾದ ದರ್ಶನ್, ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಆಂಟನಿ ರಾಯ್ ಗಾಯಗೊಂಡಿದ್ದರು. ಸೋಮವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ…