Tag: Dinesh Gundurao

ಕೆಪಿಸಿಸಿ ಅಧ್ಯಕ್ಷರ ನೇಮಕ ಮುಂದಿನ ವಾರ ನಿರ್ಧಾರ
ಮೈಸೂರು

ಕೆಪಿಸಿಸಿ ಅಧ್ಯಕ್ಷರ ನೇಮಕ ಮುಂದಿನ ವಾರ ನಿರ್ಧಾರ

January 25, 2020

ಮೈಸೂರು: ದೆಹಲಿ ಚುನಾ ವಣೆಯ ಒತ್ತಡದಿಂದಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕಾತಿ ಮುಂದಕ್ಕೆ ಹೋಗಿದ್ದು, ಮುಂದಿನ ವಾರ ಎಲ್ಲವೂ ತೀರ್ಮಾನವಾಗುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುತ್ತೂರು ಮಹಾ ಜಾತ್ರೆಗೆ ತೆರಳುವ ಮುನ್ನ ಮೈಸೂ ರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಇತ್ಯರ್ಥವಾಗಬೇಕಿದೆ. ಈ ಕುರಿತು ವರಿಷ್ಠರೊಂದಿಗೆ ಮಾತನಾಡಿದ್ದೇನೆ. ಬಹುಶಃ ಮುಂದಿನ ವಾರದಲ್ಲಿ ನೇಮಕವಾಗುವ ಸಾಧ್ಯತೆಗಳಿವೆ ಎಂದರು. ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದು ಹೈಕ…

ಬ್ಲಾಕ್‍ಮೇಲ್ ತಂತ್ರಗಳಿಗೆ ಮಣಿಯಲ್ಲ
ಮೈಸೂರು

ಬ್ಲಾಕ್‍ಮೇಲ್ ತಂತ್ರಗಳಿಗೆ ಮಣಿಯಲ್ಲ

December 25, 2018

ಬೆಂಗಳೂರು: ಸಚಿವ ಸ್ಥಾನ ದಕ್ಕದವರು ಮತ್ತು ಕಳೆದುಕೊಂಡವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದರೆ ಅಂತಹ ವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ಬ್ಲಾಕ್ ಮೇಲ್ ತಂತ್ರಗಳಿಗೆ ಪಕ್ಷ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂಪುಟಕ್ಕೆ ಕಾಂಗ್ರೆಸ್‍ನಿಂದ ಯಾರನ್ನು ತೆಗೆದುಕೊಳ್ಳಬೇಕು ಮತ್ತು ಕೈಬಿಡಬೇಕು ಎಂಬ ನಿರ್ಧಾರ ವರಿಷ್ಠರದ್ದಾಗಿದೆ. ಕಾಂಗ್ರೆಸ್‍ನಲ್ಲಿ ಹೈಕಮಾಂಡೇ ಫೈನಲ್, ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಯಾರೂ ಪ್ರಶ್ನಿಸುವಂತಿಲ್ಲ, ಒಂದು ವೇಳೆ…

ಸರ್ಕಾರ ಇರುವುದು ಯಾರನ್ನೋ ಮಂತ್ರಿ ಮಾಡುವುದಕ್ಕಲ್ಲ… ರಾಮಲಿಂಗಾ ರೆಡ್ಡಿಗೆ ದಿನೇಶ್ ಗುಂಡೂರಾವ್ ಟಾಂಗ್
ಮೈಸೂರು

ಸರ್ಕಾರ ಇರುವುದು ಯಾರನ್ನೋ ಮಂತ್ರಿ ಮಾಡುವುದಕ್ಕಲ್ಲ… ರಾಮಲಿಂಗಾ ರೆಡ್ಡಿಗೆ ದಿನೇಶ್ ಗುಂಡೂರಾವ್ ಟಾಂಗ್

December 24, 2018

ಜಮಖಂಡಿ: ಸರ್ಕಾರ ಇರುವುದು ಪಕ್ಷದ ಕಾರ್ಯ ಕ್ರಮಗಳನ್ನು ಅನುಷ್ಠಾನ ತರುವುದಕ್ಕೇ ಹೊರತು, ಯಾರನ್ನೋ ಮಂತ್ರಿ ಮಾಡುವುದಕ್ಕಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಟಾಂಗ್ ನೀಡಿದ್ದಾರೆ. ಜಮಖಂಡಿಯಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ನಮಗೆ ಪಕ್ಷ ಮುಖ್ಯವೇ ಹೊರತು, ವ್ಯಕ್ತಿ ಮುಖ್ಯವಲ್ಲ. ನಮ್ಮ ಸರ್ಕಾರ ಇರುವುದು ಯಾರನ್ನೋ ಮಂತ್ರಿ ಮಾಡುವುದಕ್ಕಲ್ಲ. ನಾನೂ ಸಹ ಸಚಿವ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಹೇಳಿದರು. ಪಕ್ಷದ ಪರವಾಗಿರುವವರಿಗೆ ಗೌರವ ಹೆಚ್ಚುತ್ತದೆ….

ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ
ಮೈಸೂರು

ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ

August 27, 2018

ಮಂಗಳೂರು: ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ವೈಫಲ್ಯತೆಗಳನ್ನು ವಿವರಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ಜನರನ್ನು ಕಾಂಗ್ರೆಸ್ ಪಕ್ಷ ಎದುರು ನೋಡುತ್ತಿರುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ದೇಶವನ್ನು ಅಪಾಯದ ಸ್ಥಿತಿಗೆ ತಳ್ಳುತ್ತಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಉದ್ಯೋಗ ಇಲ್ಲದೆ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ ಎಂದು ಆರೋಪಿಸಿದರು….

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ
ಮೈಸೂರು

ಸಿದ್ದರಾಮಯ್ಯರಿಗೆ ಅಧಿಕಾರದ ಆಸೆ ಇಲ್ಲ

August 26, 2018

ಬೆಂಗಳೂರು: ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಯನ್ನು ಯಾವ ಕಾರಣಕ್ಕೆ ನೀಡಿದ್ದಾರೋಗೊತ್ತಿಲ್ಲ, ಅವರಿಗೆ ಅಧಿಕಾರದ ಆಸೆ ಇಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾರ್ಮಿಕವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ರಾಜಕೀಯದಾರಿ ಹೇಗಿರುತ್ತದೆಯೋ ಗೊತ್ತಿಲ್ಲ, ಸದ್ಯಕ್ಕೆ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕಾಂಗ್ರೆಸ್‍ನಿಂದ ಯಾವುದೇ ಸಂದರ್ಭದಲ್ಲೂ ಸರ್ಕಾರಕ್ಕೆ ಧಕ್ಕೆ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಸರ್ಕಾರದ ಬೆನ್ನಿಗಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ…

ಮೈಸೂರು ನಗರಪಾಲಿಕೆ ಚುನಾವಣೆ; ಕನಿಷ್ಟ 33 ಸ್ಥಾನ ಗೆಲ್ಲಲೇಬೇಕು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ
ಮೈಸೂರು

ಮೈಸೂರು ನಗರಪಾಲಿಕೆ ಚುನಾವಣೆ; ಕನಿಷ್ಟ 33 ಸ್ಥಾನ ಗೆಲ್ಲಲೇಬೇಕು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ

August 25, 2018

ಮೈಸೂರು: ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ 65 ವಾರ್ಡ್‍ಗಳ ಪೈಕಿ ಕನಿಷ್ಟ 33 ಸ್ಥಾನಗಳನ್ನು ಗೆಲ್ಲಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಗುರಿ ನಿಗದಿ ಮಾಡಿದರು. ಮೈಸೂರಿನ ರೈಲು ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಮೈಸೂರು ನಗರಪಾಲಿಕೆ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಪಕ್ಷದ ಅಭ್ಯರ್ಥಿಗಳ ಸಭೆಯಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಿಗದಿತ ಗುರಿಯನ್ನು ಸಾಧಿಸಲು ಎಲ್ಲರೂ ಕಂಕಣಬದ್ಧರಾಗಿ ಕೆಲಸ ನಿರ್ವಹಿಸಬೇಕು. ಟಿಕೆಟ್ ಸಿಗದೆ ಅನ್ಯಾಯಕ್ಕೆ…

ಸ್ಥಳೀಯ ಸಂಸ್ಥೆ ಚುನಾವಣೆ  ಕಾಂಗ್ರೆಸ್ ಪಾಲಿಗೆ ಮಹತ್ವದ್ದು
ಮಂಡ್ಯ

ಸ್ಥಳೀಯ ಸಂಸ್ಥೆ ಚುನಾವಣೆ  ಕಾಂಗ್ರೆಸ್ ಪಾಲಿಗೆ ಮಹತ್ವದ್ದು

August 25, 2018

ಮಂಡ್ಯ:  ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಎ.ಸಿ. ಮಾದೇಗೌಡ ಕಲ್ಯಾಣ ಮಂಟಪದಲ್ಲಿಂದು ಕಾಂಗ್ರೆಸ್ ಅಭ್ಯರ್ಥಿಗಳ ಪರ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗದವರಿಗೂ ನ್ಯಾಯ ನೀಡುವ ಮೂಲಕ ಗಮನ ಸೆಳೆದಿತ್ತು. ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿತ್ತು. ಆದರೂ ಸಹ ಚುನಾವಣೆಯಲ್ಲಿ ಸೋಲು ಅನುಭವಿಸ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ

August 4, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡು ಕಣಕ್ಕಿಳಿಯುವುದು ಬೇಡ, ಅಗತ್ಯ ಬಿದ್ದ ಕಡೆಗಳಲ್ಲಿ ಸ್ಥಳೀಯವಾಗಿ ಹೊಂದಾಣಿಕೆಗೆ ಅಲ್ಲಿನ ನಾಯಕರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆ ಹಾಗೂ ಮೈತ್ರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಕೆಪಿಸಿಸಿ ಕಚೇರಿಯಲ್ಲಿಂದು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ರಾಜ್ಯ ಘಟಕದ ನಿರ್ಧಾರವನ್ನು ಕೇಂದ್ರ ವರಿಷ್ಠರಿಗೆ ತಿಳಿಸಲಾಗುವುದು. ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಲೋಕಸಭೆ…

ಎಚ್‍ಡಿಕೆಯ ವಿಷಕಂಠ ಹೇಳಿಕೆ ಕಾಂಗ್ರೆಸ್‍ಗೆ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್
ಮಂಡ್ಯ

ಎಚ್‍ಡಿಕೆಯ ವಿಷಕಂಠ ಹೇಳಿಕೆ ಕಾಂಗ್ರೆಸ್‍ಗೆ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

July 16, 2018

ಮಂಡ್ಯ:  ಜೆಡಿಎಸ್ ಅಭಿನಂದನಾ ವೇದಿಕೆಯಲ್ಲಿ ಸಿಎಂ ಕಣ್ಣೀರಿಟ್ಟು, ವಿಷ ಕಂಠನಾಗಿದ್ದೇನೆ ಎಂದಿರುವ ಎಚ್‍ಡಿಕೆಯ ಹೇಳಿಕೆಗೂ ಕಾಂಗ್ರೆಸ್‍ಗೂ ಸಂಬಂಧವಿಲ್ಲ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಠಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರ ಪಕ್ಷದ ವೇದಿಕೆಯಲ್ಲಿ ತಮ್ಮ ಅಭಿ ಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಏನೇ ಪಕ್ಷದ ವೇದಿಕೆಯಲ್ಲಿ ಹೇಳಿದ್ದ ಮಾತುಗಳು ಕಾಂಗ್ರೆಸ್‍ಗೆ ಅನ್ವಯಿಸಲ್ಲ. ನಾವು ಜೆಡಿಎಸ್‍ಗೆ ನಮ್ಮ ಪೂರ್ಣ ಸಹಕಾರ ನೀಡುತ್ತಿದ್ದೇವೆ. ಸಿಎಂ ಯಾವ ಕಾರಣಕ್ಕೆ ಕಣ್ಣೀರಿಟ್ಟಿದಾರೋ ಗೊತ್ತಿಲ್ಲ. ಈ ಬಗ್ಗೆ ಸಿಎಂ ಅವರನ್ನೇ ಕೇಳಬೇಕು ಎಂದು…

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
ಮೈಸೂರು

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ

July 10, 2018

ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…

1 2
Translate »