Tag: DK Shivakumar

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಾಲಿನ ಎಟಿಎಂ
ಮೈಸೂರು

ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಾಲಿನ ಎಟಿಎಂ

September 20, 2018

ನವದೆಹಲಿ:  ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಎಐಸಿಸಿಯ ಎಟಿಎಂ ಆಗಿದ್ದು, ಅವರು ಕಾಂಗ್ರೆಸ್ ಹೈಕಮಾಂಡ್‍ಗೆ ಹವಾಲಾ ಮೂಲಕ ಕೆ.ಜಿ.ಗಟ್ಟಲೆ ಹಣ ರವಾನಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಆರೋಪಿಸಿದರು. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಡಿ.ಕೆ. ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡೈರಿ ಬಿಡುಗಡೆ ಮಾಡಿದರು. ದೆಹಲಿಯ ಅಪಾರ್ಟ್‍ಮೆಂಟ್‍ವೊಂದರಲ್ಲಿ 8 ಕೋಟಿ ರೂ. ದೊರೆತ ಪ್ರಕರಣಕ್ಕೆ ಸಂಬಂಧಿಸಿದರಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಎಫ್‍ಐಆರ್ ದಾಖಲಿಸಿದ್ದನ್ನು ಉಲ್ಲೇಖಿಸಿದ…

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ
ಮೈಸೂರು

ಡಿಕೆಶಿ ಕುಟುಂಬದ ಭ್ರಷ್ಟಾಚಾರ ತನಿಖೆ ನಡೆಸುವಂತೆ ಇಡಿಗೆ ಬಿಎಸ್‍ವೈ ಪತ್ರ

September 9, 2018

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕುಟುಂಬ ನಡೆಸಿರುವ ಭ್ರಷ್ಟಾಚಾರ ಕುರಿತು ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೆದಿದ್ದಾರೆ ಎನ್ನಲಾದ ಪತ್ರ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಉಂಟು ಮಾಡಿದೆ. ಶಿವಕುಮಾರ್ ಅಷ್ಟೇ ಅಲ್ಲದೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಎಂ.ಬಿ. ಪಾಟೀಲ್ ಹಾಗೂ ಗೋವಿಂದರಾಜ್ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳು ತನಿಖೆ ನಡೆಸಿ ಮೈತ್ರಿ ಸರ್ಕಾರ ಉರುಳಿಸಲು…

ಮೈತ್ರಿ ಸರ್ಕಾರ ಉಳಿಸಲು ಜಾರಕಿಹೊಳಿ ಕುಟುಂಬದೊಂದಿಗೆ ಡಿಕೆಶಿ ರಾಜೀಯತ್ನ
ಮೈಸೂರು

ಮೈತ್ರಿ ಸರ್ಕಾರ ಉಳಿಸಲು ಜಾರಕಿಹೊಳಿ ಕುಟುಂಬದೊಂದಿಗೆ ಡಿಕೆಶಿ ರಾಜೀಯತ್ನ

September 6, 2018

ಬೆಂಗಳೂರು:  ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉಳಿಸುವ ಉದ್ದೇಶದಿಂದ ಸಚಿವ ಡಿ.ಕೆ. ಶಿವಕುಮಾರ್, ಜಾರಕಿಹೊಳಿ ಕುಟುಂಬದೊಟ್ಟಿಗಿದ್ದ ಮನಸ್ತಾಪ ಬಗೆಹರಿಸಿ ಕೊಳ್ಳಲು ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಶಿವಕುಮಾರ್ ಹಸ್ತ ಕ್ಷೇಪ ಮಾಡುತ್ತಿದ್ದಾರೆ ಎಂಬ ಏಕೈಕ ಉದ್ದೇಶ ದಿಂದ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿ ಹೊಳಿ ಮತ್ತು ಅವರ ಸಹೋದರರು ಬಿಜೆಪಿ ಜೊತೆ ಕೈಜೋಡಿಸಿ ಕುಮಾರಸ್ವಾಮಿ ಸರ್ಕಾರವನ್ನೇ ಉರುಳಿಸಲು ಕಾರ್ಯತಂತ್ರ ರೂಪಿಸಿದ್ದರು. ಎಷ್ಟರ ಮಟ್ಟಿಗೆ ಎಂದರೆ ತಮ್ಮ ಬೇಡ ಸಮುದಾಯದಿಂದ ಪಕ್ಷದಲ್ಲೇ ಆಯ್ಕೆಗೊಂಡಿರುವ ಎಲ್ಲಾ…

ನಾಡದೇವಿ ಕೃಪೆಯಿಂದ ಎಲ್ಲಾ ಜಲಾಶಯಗಳೂ ಭರ್ತಿ: ಡಿಕೆಶಿ
ಮೈಸೂರು

ನಾಡದೇವಿ ಕೃಪೆಯಿಂದ ಎಲ್ಲಾ ಜಲಾಶಯಗಳೂ ಭರ್ತಿ: ಡಿಕೆಶಿ

August 11, 2018

ಮೈಸೂರು: ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಕಬಿನಿಯಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡುತ್ತಿರುವುದರಿಂದ ನದಿ ಪಾತ್ರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಚಾಮುಂಡಿಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಷಾಡ ಮಾಸದ ಕೊನೆ ಶುಕ್ರವಾರವಾದ ಇಂದು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದಿದ್ದೇನೆ. ದೇವಿಯ ಕೃಪೆ ರಾಜ್ಯದ ಮೇಲಿದೆ. ಚಾಮುಂಡೇಶ್ವರಿ ತಾಯಿ…

ನೀರು ಸಂಗ್ರಹ ಸಾಮಥ್ರ್ಯ ವೃದ್ಧಿಗೆ 527 ಕೆರೆ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ
ಮೈಸೂರು

ನೀರು ಸಂಗ್ರಹ ಸಾಮಥ್ರ್ಯ ವೃದ್ಧಿಗೆ 527 ಕೆರೆ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ

August 7, 2018

ಬೆಂಗಳೂರು:  ಎತ್ತಿನಹೊಳೆ ಯೋಜನೆಯಡಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿನ 527 ಕೆರೆಗಳ ನೀರು ಸಂಗ್ರಹಣಾ ಸಾಮಥ್ರ್ಯ ಹೆಚ್ಚಿಸಲು ಈ ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಹರಿದು ಅರಬ್ಬಿ ಸಮುದ್ರ ಸೇರುವ ಎತ್ತಿನಹೊಳೆ ಮತ್ತು ಅದರ ಉಪನದಿಗಳ ನೀರನ್ನು ಪೂರ್ವಾಭಿಮುಖವಾಗಿ ಹರಿಸಿ, ಬರ ಪೀಡಿತ ಜಿಲ್ಲೆಗಳಾದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು…

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು
ಮೈಸೂರು

ಆದಾಯ ತೆರಿಗೆ ವಂಚನೆ ಆರೋಪ: ಸಚಿವ ಡಿಕೆಶಿಗೆ ಷರತ್ತುಬದ್ಧ ಜಾಮೀನು

August 3, 2018

ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಆದಾಯ ತೆರಿಗೆ ವಂಚನೆ, ಹವಾಲಾ ಹಣ ಸಾಗಾಣೆ ಸೇರಿದಂತೆ ಹಲವು ಪ್ರಕರಣಗಳ ಆರೋಪ ಹೊತ್ತಿದ್ದ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4ನೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ನ್ಯಾಯಾಲಯಕ್ಕೆ…

ಮೇಕೆದಾಟು ಅಣೆಕಟ್ಟು ನಿರ್ಮಾಣ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ
ಮಂಡ್ಯ

ಮೇಕೆದಾಟು ಅಣೆಕಟ್ಟು ನಿರ್ಮಾಣ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ

July 25, 2018

ಮಂಡ್ಯ:  ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾರ್ಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದಲ್ಲಿಂದು ದಿವಂಗತ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎನ್.ನಾಗರಾಜು ಅವರ 11ನೇ ದಿನದ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನೀರಿನ ಅಭಾವದ ಸಂದರ್ಭದಲ್ಲಿ ಅನುಕೂಲವಾಗುತ್ತದೆ. ಕಳೆದ ಸರ್ಕಾರದ ಅವಧಿ ಯಲ್ಲಿ ಅಣೆಕಟ್ಟು ಕಟ್ಟುವ ಬಗ್ಗೆ ನಿರ್ಧಾರವಾಗಿತ್ತು. ನಮಗೆ ಅಣೆಕಟ್ಟು ನಿರ್ಮಾಣದಿಂದ ಕುಡಿಯುವ ನೀರಿಗಷ್ಟೆ…

ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಕುಮಾರಸ್ವಾಮಿ ಬಾಗಿನ ಸಮರ್ಪಣೆ
ಮಂಡ್ಯ, ಮೈಸೂರು

ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಕುಮಾರಸ್ವಾಮಿ ಬಾಗಿನ ಸಮರ್ಪಣೆ

July 21, 2018

ಮೈಸೂರು: ನಾಲ್ಕು ವರ್ಷಗಳ ನಂತರ ತುಂಬಿ ತುಳುಕುತ್ತಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ತಮ್ಮ ಸಚಿವ ಸಹೊದ್ಯೋಗಿಗಳು ಹಾಗೂ ಶಾಸಕರೊಂದಿಗೆ ಸಾಂಪ್ರದಾಯಿಕವಾಗಿ ಬಾಗಿನ ಸಮರ್ಪಣೆ ಮಾಡಿದರು. ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಸಂಜೆ 4 ಗಂಟೆಗೆ ಹೆಲಿಕಾಪ್ಟರ್‍ನಲ್ಲಿ ಕೆಆರ್‌ಎಸ್‌ ಹೆಲಿಪ್ಯಾಡ್‍ಗೆ ಬಂದಿಳಿದ ಕುಮಾರಸ್ವಾಮಿ ಅವರು, ಸಂಜೆ 4.30 ಗಂಟೆಗೆ ಗೋಧೂಳಿ ಶುಭಲಗ್ನದಲ್ಲಿ ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಕೆಆರ್‌ಎಸ್‌ನ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದರು. ಶ್ರೀರಂಗಪಟ್ಟಣದ ಖ್ಯಾತ…

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ
ಮೈಸೂರು

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ

July 21, 2018

ಹೆಚ್.ಡಿ.ಕೋಟೆ: ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಕಬಿನಿಗೆ ನಿಗಧಿತ ಸಮಯಕ್ಕಿಂತ ತಡವಾಗಿ ಬಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತುಂತುರು ಮಳೆ ನಡುವೆ ತುಂಬಿದ ಕಪಿಲಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಸುಮಾರು ಎರಡೂವರೆ ಗಂಟೆ ತಡವಾಗಿ ಬಂದ ಮುಖ್ಯಮಂತ್ರಿಗಳು, ಬಾಗಿನ ಅರ್ಪಿಸಿದ ನಂತರ ಜಲಾಶಯದಲ್ಲಿ ಕೆಲಸ ಮಾಡುವ ನೌಕರರಿಗೆ ಸಮವಸ್ತ್ರಗಳನ್ನು ನೀಡಿದರು. ಪತ್ರಕರ್ತರು ಮಾತನಾಡಿಸಲು ಮುಂದಾದಾಗ ಕೈಸನ್ನೆಯಲ್ಲಿ “ಏನೂ ಇಲ್ಲ” ಎಂದು ಹೇಳಿ ಸ್ವಲ್ಪ ಹೊತ್ತಿನಲ್ಲೇ ನಿರ್ಗಮಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡ,…

ಸಂಸದರಿಗೆ ಐಫೋನ್, ಬ್ಯಾಗ್ ಗಿಫ್ಟ್!
ಮೈಸೂರು

ಸಂಸದರಿಗೆ ಐಫೋನ್, ಬ್ಯಾಗ್ ಗಿಫ್ಟ್!

July 18, 2018

ಬೆಂಗಳೂರು:  ರೈತರ ಸಾಲ ಮನ್ನಾಗೆ ಹಣ ಹೊಂದಿಸಲು ಪರದಾಡು ತ್ತಿರುವ ಕರ್ನಾಟಕದ ಮೈತ್ರಿ ಸರ್ಕಾರ ರಾಜ್ಯದ ಸಂಸದರಿಗೆ ದುಬಾರಿ ಐಫೋನ್ ಮತ್ತು ಮೂಚಿ ಲೆದರ್ ಬ್ಯಾಗ್‍ನ್ನು ಉಡುಗೊರೆಯನ್ನಾಗಿ ನೀಡಿದೆ. ಕಾವೇರಿ ಸಮಸ್ಯೆ ಕುರಿತು ಕರೆದಿರುವ ರಾಜ್ಯದ ಸಂಸದರ ಸಭೆಯ ಆಮಂತ್ರಣದ ಜೊತೆಗೆ ದುಬಾರಿ ಬೆಲೆಯ ಐಫೋನ್ ಹಾಗೂ ಲೆದರ್ ಬ್ಯಾಗ್‍ನ್ನು ನೀಡಲಾಗಿರುವುದು ರಾಜೀವ್ ಚಂದ್ರ ಶೇಖರ್ ಅವರ ಪತ್ರದ ಮೂಲಕ ಬಹಿರಂಗಗೊಂಡಿದೆ. Dear @CMofKarnataka @hd_kumaraswamy – Thnk u 4 convng all MPs tmrw…

1 2 3 4 5 6
Translate »