ಮೈಸೂರು, ಏ.11(ಆರ್‍ಕೆಬಿ)- ಸುಶಿಕ್ಷಿತರಾದ ಮೇಲೂ ಡಾ.ಬಿ.ಆರ್. ಅಂಬೇಡ್ಕರ್ ಅವರು ಎದುರಿಸಿದ ಸಮಸ್ಯೆಗಳ ಕುರಿತು ತಾವು ಬರೆದಿರುವ ‘ಅವಿತಿಟ್ಟ ಅಂಬೇಡ್ಕರ್’ ನಾಟಕದ ಕೃತಿ ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಎಂದು ಲೇಖಕ ಡಾ.ಸುಧಾಕರ ಹೊಸಳ್ಳಿ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಚಿಂತನೆ ಬಹುಪಾಲು ಯುವಜನರಿಗೆ ಆದರ್ಶಪ್ರಾಯವಾಗಿವೆ. ಆದರೆ, ಇಂದು ಅಂಬೇಡ್ಕರ್ ಅವರ ಸಂವಿಧಾನವನ್ನಷ್ಟೇ ನೋಡು ತ್ತಿದ್ದು, ಆದರೆ ರಚನೆ ವೇಳೆ ಅವರು ಎದುರಿಸಿದ ಸವಾಲುಗಳು ಬಹಳಷ್ಟು ಜನರಿಗೆ ತಿಳಿಯದಾಗಿದೆ. ದೇಶ ಪ್ರೇಮಿಯೂ ಆಗಿದ್ದ…
ಡಾ.ಬಿ.ಆರ್.ಅಂಬೇಡ್ಕರ್ ಇಡೀ ಪ್ರಪಂಚದಲ್ಲೇ `ಮಹಾನಾಯಕ’
April 1, 2021ಮೈಸೂರು ಜಿಲ್ಲಾ ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಪ್ರಕಾಶ್ ವರ್ಣನೆ ಮೈಸೂರು,ಮಾ.31(ಎಂಟಿವೈ)-ಡಾ.ಅಂಬೇಡ್ಕರ್ ಅವರು ಭಾರತಕ್ಕೆ ಸುಭದ್ರ ಸಂವಿಧಾನ ರಚಿಸಿ ತಳ ಸಮುದಾಯದ ಜನರ ಏಳಿಗೆಗೆ ಮತ್ತು ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಅವಕಾಶ ಮಾಡಿಕೊಡುವ ಮೂಲಕ `ಮಹಾನಾಯಕ’ರಾಗಿದ್ದಾರೆ ಎಂದು ಜಿಲ್ಲಾ ಸಮಗ್ರ ಗಿರಿಜನ ಯೋಜನಾ ಸಮನ್ವಯಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಮೆಟ್ರಿಕ್ ನಂತರದ ಬಾಲಕಿಯರ ಸರ್ಕಾರಿ ವಿದ್ಯಾರ್ಥಿನಿಲಯ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ `ಡಾ.ಬಿ.ಆರ್.ಅಂಬೇಡ್ಕರ್-130ನೇ ಜನ್ಮದಿನಾ ಚರಣೆ’…
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಏ.14ರಂದು ಮ್ಯಾರಥಾನ್
March 30, 2021ಮೈಸೂರು, ಮಾ.29(ಆರ್‍ಕೆಬಿ)- ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮ ದಿನಾಚರಣೆ ಅಂಗವಾಗಿ ವಿಶ್ವಜ್ಞಾನಿ ಚಾರಿಟಬಲ್ ಟ್ರಸ್ಟ್, ಭಾರತೀಯ ಪರಿವರ್ತನಾ ಸಂಘ, ಭಾರತೀಯ ವಿದ್ಯಾರ್ಥಿ ಸಂಘ, ದಲಿತ ಸಂಘಟನೆಗಳ ಒಕ್ಕೂಟ, ಸಂಶೋಧಕರ ಸಂಘದ ಜಂಟಿ ಆಶ್ರಯದಲ್ಲಿ ಏ.14ರಂದು ಬೆಳಿಗ್ಗೆ 6.30 ಗಂಟೆಗೆ ಮೈಸೂರಿನಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ಪರಿ ವರ್ತನಾ ಸಂಘದ ಸಂಚಾಲಕ ಸೋಸಲೆ ಸಿದ್ದರಾಜು ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಭವನದಿಂದ ಆರಂಭವಾಗುವ ಮ್ಯಾರ ಥಾನ್, ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)ದ ಮೂಲಕ…
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಪ್ರತಿಜ್ಞೆ ಸ್ವೀಕಾರ, ಉಪನ್ಯಾಸ
December 7, 2018ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಪರಿನಿರ್ವಾಣ ದಿನದ ಅಂಗವಾಗಿ ಮೈಸೂರಿನಲ್ಲಿ ಗುರುವಾರ ಜಿಲ್ಲಾಡಳಿತ ಸೇರಿ ದಂತೆ ವಿವಿಧ ಸಂಘಟನೆಗಳು ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ, ಅವರ ಬದುಕು ಮತ್ತು ಹೋರಾಟವನ್ನು ಸ್ಮರಿಸಿದರು. ಸಚಿವ ಜಿ.ಟಿ.ದೇವೇಗೌಡರಿಂದ ಮಾಲಾರ್ಪಣೆ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಮೈಸೂರು ಪುರ ಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ದಲ್ಲಿ ಮೇಯರ್ ಪುಷ್ಪಲತಾ ಜಗನ್ನಾಥ್, ಸಂಸದ ಆರ್.ಧ್ರುವನಾರಾಯಣ್,…
ಚಾಮರಾಜನಗರದಲ್ಲಿ ಡಾ.ಅಂಬೇಡ್ಕರ್ 127ನೇ ಜನ್ಮದಿನಾಚರಣೆ
October 22, 2018ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಜನರಲ್ಲಿರುವ ದೃಷ್ಠಿಕೋನ ಬದಲಾಯಿಸಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 127ನೇ ಜನ್ಮ ದಿನಾಚರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರನ್ನು (ಗಾಂಧೀಜಿ) ಯಾವ ಜಾತಿ ಎಂದು…
ಡಾ.ಅಂಬೇಡ್ಕರ್ ವಿಚಾರಧಾರೆ ಅನುಸರಿಸಲು ಕರೆ
July 2, 2018ಮಡಿಕೇರಿ: ಸಂವಿಧಾನವನ್ನು ರಚಿಸುವ ಮೂಲಕ ಸಮಾನತೆಯ ಆದರ್ಶಗಳನ್ನು ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಸರಿಸುವ ಮನೋಸ್ಥಿತಿಯನ್ನು ಪ್ರತಿ ಯೊಬ್ಬರು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಕರೆ ನೀಡಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ಜನ್ಮದಿನಾಚರಣೆ, ವೃದ್ಧಾಶ್ರಮದ ಬಂಧು ಗಳಿಗೆ ವಸ್ತ್ರ ವಿತರಣೆ ಹಾಗೂ ದಲಿತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಮಡಿ ಕೇರಿಯಲ್ಲಿ ನಡೆಯಿತು. ಡಾ.ಅಂಬೇಡ್ಕರ್ ಅವರು ಸಂವಿಧಾನ…
ಡಾ.ಅಂಬೇಡ್ಕರ್ ಚಿಂತನೆ ಸರ್ವಕಾಲಿಕ ಅನ್ವಯ
June 26, 2018ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆಗಳು ಎಲ್ಲಾ ಕಾಲಕ್ಕೂ ಸಲ್ಲುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹನ್ನೂರು ಚೆನ್ನಪ್ಪ ಅಭಿಪ್ರಾಯಪಟ್ಟರು. ಪುರಭವನದಲ್ಲಿ ಅಖಿಲ ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ 127ನೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು, ದಲಿತರು, ಶೋಷಿತರು, ಮಹಿಳೆಯರಿಗೆ ಸಮಾನತೆ ನೀಡಲು ಸಾಕಷ್ಟು ಶ್ರಮಿಸಿದ್ದಾರೆ. ಸಂವಿಧಾನ ರಚನೆ ಮೂಲಕ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ…