ಮೈಸೂರು: ಭಾರತದ ಆರ್ಥಿಕ ಸ್ಥಿತಿಗತಿ ವಿಶ್ಲೇಷಿಸಿ ಅರ್ಥೈಸಿಕೊಳ್ಳಲು ಅನ್ಯ ದೇಶೀಯ ಆರ್ಥಿಕ ಸಿದ್ಧಾಂತಗಳು ಹೆಚ್ಚು ಪ್ರಯೋಜನಕ್ಕೆ ಬಾರದು. ಈ ಹಿನ್ನೆಲೆಯಲ್ಲಿ ದೇಶದ ಅರ್ಥ ವ್ಯವಸ್ಥೆಗೆ ಅನುಗುಣವಾಗಿ ನಮ್ಮದೇ ಆರ್ಥಿಕ ಸಿದ್ಧಾಂತಗಳನ್ನು ಸಿದ್ಧಪಡಿಸಬೇಕಿದೆ ಎಂದು ಆರ್ಥಿಕ ಚಿಂತಕರೂ ಆದ ಮಹಾಜನ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಸಿ.ಕೆ.ರೇಣುಕಾರ್ಯ ಅಭಿಪ್ರಾಯಪಟ್ಟರು. ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪನಿರ್ದೇಶಕರ ಕಚೇರಿ ಜಂಟಿ ಆಶ್ರಯದಲ್ಲಿ ಮೈಸೂರು ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಉಪನ್ಯಾಸಕರಿಗೆ…