ಮೈಸೂರು: ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಮೈಸೂರು ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನೆಗೆ ಸೆ.10ರವರೆಗೆ ತಾತ್ಕಾಲಿಕ ವಿರಾಮ ನೀಡಿದ್ದಾರೆ. ಸುಸಜ್ಜಿತ ಬೋಧನ ಕೊಠಡಿ ಒದಗಿಸಬೇಕು. ವಿದ್ಯಾರ್ಥಿನಿಯರು ಮತ್ತು ಮಹಿಳಾ ಬೋಧಕ ಸಿಬ್ಬಂದಿಗೆ ಪ್ರತ್ಯೇಕ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿ ಒದಗಿಸಬೇಕು. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪುರುಷ/ಮಹಿಳಾ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಸಮಯಕ್ಕೆ ಸರಿಯಾಗಿ ಫಲಿತಾಂಶ, ಅಂಕಪಟ್ಟಿ ನೀಡಬೇಕು. ಇದು ಪ್ರದರ್ಶಕ ಕಲೆಗಳ ವಿವಿ ಆಗಿದ್ದು, ಯಾವುದೇ ಕಾರ್ಯಕ್ರಮಗಳನ್ನು…