ಮೈಸೂರು: ವಿಶ್ವಕ್ಕೇ ಮಾದರಿಯಾಗಿದ್ದ ಗುರುಕುಲ ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿ ಮರು ಸ್ಥಾಪಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲೆ, ಸುತ್ತೂರು ಶ್ರೀಕ್ಷೇತ್ರ ದಲ್ಲಿ ಇಂದು ಆಯೋಜಿಸಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇ ಜಯಂತಿ ಮಹೋ ತ್ಸವ ಹಾಗೂ ಶ್ರೀ ಚೆನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ಗುರು ಕುಲ ಮಾದರಿ ಶಿಕ್ಷಣ ಹಾಸುಹೊಕ್ಕಾಗಿತ್ತು….