ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನ ಸಭಾಂ ಗಣದಲ್ಲಿ ಶನಿವಾರ ನಡೆದ ‘ಅನಂತ ಸ್ಮರಣೆ’ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ 30ಕ್ಕೂ ಹೆಚ್ಚು ಗ್ರಾಮೀಣ ಪ್ರದೇಶದ ಶಾಲೆಗಳ ನೂರಾರು ವಿದ್ಯಾರ್ಥಿ ಗಳು ಪಾಲ್ಗೊಂಡು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತ ಮೂರ್ತಿ ಅವರ ಜೀವನ ಹಾಗೂ ಸಾಧನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಡಾ.ಯು.ಆರ್.ಅನಂತಮೂರ್ತಿ ಸಾಹಿ ತ್ಯಾಸಕ್ತರ ಬಳಗ ಆಯೋಜಿಸಿದ್ದ ‘ಅನಂತ ಸ್ಮರಣೆ’ ವಿಶೇಷ ಉಪನ್ಯಾಸ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಡಾ.ಯು.ಆರ್. ಅನಂತಮೂರ್ತಿ ಅವರ…