ಮೈಸೂರು: ಜೆಎಸ್‍ಎಸ್ ಫಾರ್ಮಸಿ ಕಾಲೇಜು ವತಿಯಿಂದ ನ.13ರಿಂದ `ಡ್ರಗ್ ಕೆಮಿಸ್ಟ್ರಿ’ ಕುರಿತ 1 ತಿಂಗಳ ಅವಧಿಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯ ಕ್ರಮದ ಸಂಚಾಲಕ ಹಾಗೂ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ವಿ. ಪೂಜಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ನಡೆ ಯುವ ಈ 1 ತಿಂಗಳ ತರಬೇತಿ ಕಾರ್ಯಕ್ರಮಕ್ಕೆ ಕಾಲೇಜಿನ ಆರ್‍ಎ ಸೆಮಿನಾರ್ ಹಾಲ್‍ನಲ್ಲಿ ನ.13ರಂದು ಬೆಳಿಗ್ಗೆ 10.30ಕ್ಕೆ ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಕುಲಸಚಿವ ಡಾ.ಬಿ.ಮಂಜುನಾಥ್…