ಚನ್ನರಾಯಪಟ್ಟಣ: ಪುರಸಭೆ ಮೇಲೆ ಕಾಂಗ್ರೆಸ್ ಬಾವುಟ ಹಾರಿಸಲು ಪಟ್ಟಣದ ಮತದಾರರು ಸಹಕರಿಸಿದರೆ ವಿಶೇಷ ಪ್ಯಾಕೇಜ್ ಮೂಲಕ ಅನುದಾನ ನೀಡಿ ನಗರವನ್ನು ಅಭಿವೃದ್ಧಿ ಮಾಡಲಾ ಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭರವಸೆ ನೀಡಿದರು. ಸ್ಥಳೀಯ ಚುನಾವಣೆ ಹಿನ್ನೆಲೆ ಪಟ್ಟಣ ದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ಪೌರಾಡಳಿತ ಸಚಿವನಾಗಿದ್ದಾಗ ಇಲ್ಲಿನ ಪುರಸಭೆಗೆ ನಗರೋತ್ಥಾನ ಯೋಜನೆ ಮೂಲಕ 7.50 ಕೋಟಿ ರೂ. ಅನುದಾನ ನೀಡಿದ್ದೆ. ಈಗ ವಾರ್ಡ್‍ನಲ್ಲಿ ರಸ್ತೆ, ಒಳ ಚರಂಡಿ…