ಅಧಿಕಾರಿಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಲಹೆ ಮೈಸೂರು, ಮಂಡ್ಯ, ಚಾ.ನಗರ ಜಿಲ್ಲೆಯ ಮಳೆ ಬೆಳೆ ಪರಿಸ್ಥಿತಿ ಅವಲೋಕನ ಮೈಸೂರು: ರೈತರಿಗೆ ಬೆಳೆ ಪರಿಹಾರ ನೀಡುವ ವಿಷಯದಲ್ಲಿ ಅಧಿಕಾರಿಗಳು ಜಿಗುಟುತನ ತೋರಬೇಡಿ. ಬದಲಾಗಿ ಸ್ವಲ್ಪ ಉದಾರತೆ, ಮಾನವೀಯತೆ ಇಟ್ಟುಕೊಂಡು ಕೆಲಸ ಮಾಡುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಮತ್ತು ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ `ಮಳೆ-ಬೆಳೆ ಪರಿಸ್ಥಿತಿ, ಮಳೆ ಹಾನಿ ಹಾಗೂ ಕೈಗೊಂಡ…