Tag: Farmer loan waiver

ಪೂರ್ಣ ಸಾಲ ಮನ್ನಾ ಭರವಸೆ  ಭಗ್ನ: ಇಬ್ಬರು ರೈತರ ಆತ್ಮಹತ್ಯೆ
ಚಾಮರಾಜನಗರ, ಮಂಡ್ಯ

ಪೂರ್ಣ ಸಾಲ ಮನ್ನಾ ಭರವಸೆ  ಭಗ್ನ: ಇಬ್ಬರು ರೈತರ ಆತ್ಮಹತ್ಯೆ

July 7, 2018

ಮಂಡ್ಯ, ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ಪೂರ್ಣ ಸಾಲ ಮನ್ನಾ ಆಗಲಿಲ್ಲ ಎಂದು ಮನ ನೊಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ದೇಮಹಳ್ಳಿ ಹಾಗೂ ಮಂಡ್ಯ ಜಿಲ್ಲೆ ಕಚ್ಚಿಗೆರೆ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ವರದಿ: ಚಾಮರಾಜ ನಗರ ತಾಲೂಕಿನ ದೇಮಹಳ್ಳಿ ಗ್ರಾಮದ ನಂಜುಂಡಪ್ಪನವರ ಮಗ ಚಿಕ್ಕಸ್ವಾಮಿ ಉ. ಬೆಳ್ಳಪ್ಪ (42) ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಸ್ವಾಮಿ ತಮಗಿದ್ದ ಎರಡೂ ವರೆ ಎಕರೆ ಜಮೀನಿನಲ್ಲಿ ಬಾಳೆ ಮತ್ತು ಉದ್ದು…

ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಚಾಮರಾಜನಗರ

ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

July 7, 2018

ಚಾಮರಾಜನಗರ:  2018 ಜುಲೈ 1ರವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ಇತರ ಹಕ್ಕೋತ್ತಾಯಗಳನ್ನು ಈಡೇರಿಸು ವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ನಗರ-ಸಂತೇಮರಹಳ್ಳಿಯ ಜಾಲಹಳ್ಳಿ ಹುಂಡಿ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-209 ನಲ್ಲಿ ರೈತರು ರಸ್ತೆ ತಡೆ ನಡೆಸಿದರು. ತಮ್ಮ ನ್ಯಾಯ ಯುತವಾದ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನಾನು ಮುಖ್ಯಮಂತ್ರಿ ಯಾದ…

ಕಾಫಿ ಬೆಳೆಗಾರರ ಸಾಲಮನ್ನಾಗೆ ಆಗ್ರಹಿಸಿ ಅಮ್ಮತ್ತಿಯಲ್ಲಿ ಪ್ರತಿಭಟನೆ
ಕೊಡಗು

ಕಾಫಿ ಬೆಳೆಗಾರರ ಸಾಲಮನ್ನಾಗೆ ಆಗ್ರಹಿಸಿ ಅಮ್ಮತ್ತಿಯಲ್ಲಿ ಪ್ರತಿಭಟನೆ

July 5, 2018

ಗೋಣಿಕೊಪ್ಪಲು:  ಕೊಡಗಿನ ಕಾಫಿ ಬೆಳೆಗಾರರ ಸಾಲಮನ್ನಾ ಮಾಡು ವಂತೆ ಒತ್ತಾಯಿಸಿ ಅಮ್ಮತ್ತಿಯಲ್ಲಿ ದಕ್ಷಿಣ ಕೊಡಗಿನ ವಿವಿಧ ಭಾಗದ ರೈತರು ಹಾಗೂ ಕಾಫಿ ಬೆಳೆಗಾರರು ರಸ್ತೆ ತಡೆ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಅಮ್ಮತ್ತಿ ರೈತ ಸಂಘದ ಅಧ್ಯಕ್ಷ ಕೆ.ಯು. ಗಣಪತಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10 ಗಂಟೆಗೆ ಜಮಾವಣೆಗೊಂಡ ಪ್ರತಿಭಟನಾ ಕಾರರು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಆರಂಭಿಸಿದರು. ಕೊಡ ಗಿನ ವಾಣಿಜ್ಯ ಬೆಳೆಯಾದ ಕಾಫಿ, ಕರಿ ಮೆಣಸು, ಅಡಿಕೆ ಬೆಳೆಗಳ ಸಾಲ ಮನ್ನಾ ವಿಚಾರದಲ್ಲಿ ಸರ್ಕಾರ…

ರೈತರ ಸಾಲ ಮನ್ನಾಕ್ಕೆ ಖಜಾನೆ ತುಂಬಿಸಲು ಸಂದು ಗೊಂದಿಗೆ ಕೈ ಹಾಕಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮೈಸೂರು

ರೈತರ ಸಾಲ ಮನ್ನಾಕ್ಕೆ ಖಜಾನೆ ತುಂಬಿಸಲು ಸಂದು ಗೊಂದಿಗೆ ಕೈ ಹಾಕಿದ ಮುಖ್ಯಮಂತ್ರಿ ಕುಮಾರಸ್ವಾಮಿ

July 4, 2018

ಬೆಂಗಳೂರು: ರೈತರ ಕೃಷಿ ಸಾಲ ಮನ್ನಾ ಮಾಡಲು ಹೊರಟಿ ರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಯೋಜನೆಗಳಿಗೆ ಮೀಸಲಿರಿಸಿದ ಹಣ ವೆಚ್ಚ ಮಾಡದೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಇಟ್ಟಿರುವ ಸಾವಿರಾರು ಕೋಟಿ ರೂ. ಗಳನ್ನು ಹಿಂದಕ್ಕೆ ಪಡೆಯಲು ಹಣಕಾಸು ಇಲಾಖೆಗೆ ಆದೇಶ ನೀಡಿದ್ದಾರೆ. ಗ್ರಾಮೀಣ ಅಭಿವೃದ್ಧಿ, ನಗರಾಭಿವೃದ್ಧಿ, ಮುಜರಾಯಿ, ವಸತಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಳೆದ ಕೆಲವಾರು ವರ್ಷಗಳಿಂದ ಮೀಸಲಿಟ್ಟಿದ್ದ ಹಣವನ್ನು ಅಧಿಕಾರಿಗಳು ವೆಚ್ಚ ಮಾಡಿಲ್ಲ. ಇಲಾಖೆಯ ಗಮನಕ್ಕೂ ತಾರದೆ, ಕೆಲವು ಅಧಿಕಾರಿಗಳು ನೂರಾರು ಕೋಟಿ…

ಖಾಸಗಿ ಸಾಲ ಮನ್ನಾ ಸಂಬಂಧ ಹಾಲಿ, ಮಾಜಿ ಸಿಎಂಗಳ ಜಟಾಪಟಿ
ಮೈಸೂರು

ಖಾಸಗಿ ಸಾಲ ಮನ್ನಾ ಸಂಬಂಧ ಹಾಲಿ, ಮಾಜಿ ಸಿಎಂಗಳ ಜಟಾಪಟಿ

July 4, 2018

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜು.5ರಂದು ಮಂಡಿಸಲಿರುವ ಬಜೆಟ್‍ನಲ್ಲಿ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಪ್ರಕಟಿಸಲಿದ್ದಾರೆ ಎಂಬ ನಿರೀಕ್ಷೆ ಬೆನ್ನಲ್ಲೇ ರೈತರ ಖಾಸಗಿ ಸಾಲ ಮನ್ನಾ ಬಗ್ಗೆ ವಿಧಾನಸಭೆಯಲ್ಲಿ ಇಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಡುವೆ ಕಾವೇರಿದ ಚರ್ಚೆ ನಡೆಯಿತು. ಮುಖ್ಯಮಂತ್ರಿಗಳು ಚುನಾವಣೆಗೂ ಮುನ್ನ ರೈತರು ಖಾಸಗಿ ವ್ಯಕ್ತಿಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಧ್ಯ…

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು
ಮೈಸೂರು

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು

July 2, 2018

5 ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ, ನಿರ್ಗತಿಕರಿಗೆ 20 ಲಕ್ಷ ಮನೆ ನಿರ್ಮಾಣ ನೀರಾವರಿಗೆ ಹೆಚ್ಚು ಅನುದಾನ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಬಜೆಟ್‍ನಲ್ಲಿ ರೈತರ ಸಾಲ ಮನ್ನಾಗೆ ಸಮ್ಮತಿ ಸೂಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿದ್ದ ಸಮನ್ವಯ ಸಮಿತಿ ಸಭೆ ಇಂದು ಮಧ್ಯಾಹ್ನ…

ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ
ಮೈಸೂರು

ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ

June 30, 2018

ಬೆಂಗಳೂರು: ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ರಾಜ್ಯ ಬಜೆಟ್‍ಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ಅಂತಿಮಗೊಳಿಸಿದೆ ಎಂದು ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. 2018ರ ಮೇ 31ಕ್ಕೆ ಅನ್ವಯವಾಗುವಂತೆ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಸೇರಿದಂತೆ ಹಲವಾರು ವಿಷಯಗಳನ್ನು ಸರ್ವಾನುಮತದಿಂದ ಅಂತಿಮಗೊಳಿಸಿ ವರದಿ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮಗಳಿಗೆ ಹಣಕಾಸು ಹೊಂದಾಣಿಕೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಮಾಡಿಕೊಳ್ಳಬೇಕಾಗುತ್ತದೆ. ಸಮಿತಿಯ ವರದಿಯನ್ನು ನಾಳೆ ಮೈತ್ರಿ ಸರ್ಕಾರದ…

ಬೆಳೆ ಸಾಲ ಮನ್ನಾದಿಂದ ನನಗೆ ಕಮಿಷನ್ ಸಿಗಲ್ಲ…!?
ಮೈಸೂರು

ಬೆಳೆ ಸಾಲ ಮನ್ನಾದಿಂದ ನನಗೆ ಕಮಿಷನ್ ಸಿಗಲ್ಲ…!?

June 26, 2018

ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪಕ್ಕೆ ಸಿಎಂ ಕುಮಾರಸ್ವಾಮಿ ತಿರುಗೇಟು ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ನೂರಕ್ಕೂ ಹೆಚ್ಚು ಶಾಸಕರು ಸೋತಿದ್ದಾರೆ. ಅವರು, ಅನುಮೋದನೆ ನೀಡಿದ ಬಜೆಟ್ ಮುಂದುವರೆಸಬೇಕೇ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯ ಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ. ಹಳೆಯ ಬಜೆಟ್‍ನ್ನೇ ಮುಂದುವರೆಸಿದರೆ, ಈಗ ಆಯ್ಕೆಯಾಗಿ ಬಂದವರಿಗೆ ಹಕ್ಕುಚ್ಯುತಿಯಾಗಲ್ಲವೆ? ಯಾರಾದರೂ ಹಕ್ಕುಚ್ಯುತಿ ಮಂಡನೆ ಮಾಡಿ ದರೆ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ…

ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ
ಮಂಡ್ಯ

ಬಜೆಟ್‍ನಲ್ಲಿ ಸಾಲಮನ್ನಾ ಘೋಷಣೆ ಸಾಧ್ಯತೆ: ಸಿಎಸ್‍ಪಿ

June 26, 2018

ಪಾಂಡವಪುರ: ಚುನಾವಣೆಗೂ ಮುನ್ನಾ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಭರ ವಸೆಯಂತೆ ರೈತರ ಸಾಲಮನ್ನಾ ಮಾಡುವ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಸಣ್ಣ ನೀರಾ ವರಿ ಸಚಿವ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತ ಪಡಿಸಿದರು. ಪಟ್ಟಣದ ಕೃಷ್ಣಾ ನಗರದ ತಮ್ಮ ನಿವಾಸದ ಎದುರು ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ನಂತರ ಮಾತನಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿದ್ದು, ರೈತರಿಗೆ ಅನುಕೂಲವಾಗುವ ಹೊಸ…

ಬಜೆಟ್‍ನಲ್ಲಿ ಸಾಲ ಮನ್ನಾ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಎಸ್‍ವೈ
ಮೈಸೂರು

ಬಜೆಟ್‍ನಲ್ಲಿ ಸಾಲ ಮನ್ನಾ ಪ್ರಕಟಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಎಸ್‍ವೈ

June 19, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುಂಗಡ ಪತ್ರದಲ್ಲಿ ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ, ತಾವು ಮುಖ್ಯಮಂತ್ರಿ ಯಾಗಿ 24 ಗಂಟೆಯೊಳಗಾಗಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಾಗಿದ್ದು, ಎಲ್ಲಾ ನಿರ್ಧಾರಕ್ಕೂ ಕಾಂಗ್ರೆಸ್ ಅನುಮತಿ ಅಗತ್ಯ ಎಂದು ಅಪ್ಪ-ಮಕ್ಕಳು ಕಾರಣ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೆಂಬಲ ಪಡೆಯು ವುದಕ್ಕೂ ಮುನ್ನ ಜೆಡಿಎಸ್ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು…

1 2 3 4 5 6
Translate »