ಮೈಸೂರು: ಪ್ರತಿಷ್ಠಿತ ಫೆಡರೇಷನ್ ಆಫ್ ಕರ್ನಾಟಕ ಛೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‍ಕೆಸಿಸಿಐ) ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ಸುಧಾಕರ ಎಸ್.ಶೆಟ್ಟಿ ಹಾಗೂ ಅವರ ಪತ್ನಿ ಸುಖಲತಾ ಶೆಟ್ಟಿ ಅವರನ್ನು ಭಾನುವಾರ ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಹೋಟೆಲ್ ಮಾಲೀಕರ ಸಂಘ ಮತ್ತು ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭವನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಉದ್ಘಾಟಿಸಿದರಲ್ಲದೇ, ಸುಧಾಕರ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ…