ಮೈಸೂರು: ಮೈಸೂರಿನ ಅಶೋಕಪುರಂನ ಅರಣ್ಯ ಭವನದ ಆವರಣದ ದಿ.ವೆಂಕಟಸ್ವಾಮಿ ಉದ್ಯಾನವನದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪುಷ್ಪನಮನ ಸಲ್ಲಿಸುವ ಮೂಲಕ ಕರ್ತವ್ಯದ ವೇಳೆ ಹುತಾತ್ಮರಾದ ಅರಣ್ಯ ಸಿಬ್ಬಂದಿಯ ಆತ್ಮಕ್ಕೆ ಶಾಂತಿ ಕೋರಿ, ಗೌರವ ನಮನ ಸಲ್ಲಿಸಿದರು. ಪ್ರತಿ ವರ್ಷ ಸೆ.11ರಂದು ಅರಣ್ಯ ಇಲಾಖೆ ಹುತಾತ್ಮರ ದಿನ ಆಚರಿಸಿ ರಾಜ್ಯದ ವಿವಿಧ ಅರಣ್ಯಗಳಲ್ಲಿ ಕರ್ತವ್ಯ ನಿರ್ವಹಿಸುವಾಗಲೇ ಹುತಾತ್ಮರಾದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗೌರವ ಸಮರ್ಪಿಸುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಅಶೋಕಪುರಂನ ಅರಣ್ಯ ಭವನದ…
ಅರ್ಥಪೂರ್ಣವಾಗಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ
September 12, 2018ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿ ಯಲ್ಲಿ ಇರುವ ಅರಣ್ಯ ಹುತಾತ್ಮರ ಸ್ಮಾರಕ ಕೇಂದ್ರದಲ್ಲಿ ಮಂಗಳವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿಯೇ ಮುಖ್ಯ ಅತಿಥಿಗಳು ಹಾಗೂ ಆಹ್ವಾನಿತರಿಂದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ನಮಿಸಿದರು. ನಂತರ ಅರಣ್ಯ ಹುತಾತ್ಮರ ಗೌರವಾರ್ಥ ಒಂದು ನಿಮಿಷ ಮೌನ ಆಚ ರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ ಸೂಚಿಸಲಾಯಿತು….
ಅರಣ್ಯ ಹುತಾತ್ಮರ ದಿನಾಚರಣೆ
September 12, 2018ಮಡಿಕೇರಿ: ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನದಲ್ಲಿ ಮಂಗಳವಾರ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ’ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ, ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜ, ಸರ್ಕಾರಿ ಅಭಿಯೋಜಕರಾದ ಶ್ರೀಧರ ನಾಯರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎನ್. ಮಂಜುನಾಥ್, ಮರಿಯ ಕ್ರಿಸ್ತರಾಜು, ಎಂ.ಎಂ.ಜಯ, ಎಂ.ಜೆ.ಗೋವರ್ಧನ್ ಸಿಂಗ್ ಹೀಗೆ ಹಲವರು ಅರಣ್ಯ ಹುತಾತ್ಮರಿಗೆ ಪುಷ್ಪಗುಚ್ಛವಿಟ್ಟು…