ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶೇ.15 ರಷ್ಟು ಬಸ್ ಪ್ರಯಾಣದರ ಹೆಚ್ಚಿಸಲು ಮುಂದಾಗಿದೆ. ನಿಗಮದ ಪ್ರಸ್ತಾವವನ್ನು ತಿರಸ್ಕರಿಸಿರುವ ರಾಜ್ಯ ಸರ್ಕಾರ ಇದರಿಂದ ಹೊರೆಯಾಗುವ 400ರಿಂದ 500 ಕೋಟಿ ರೂ.ಗಳನ್ನು ಬೇರೆ ಮೂಲಗಳಿಂದ ತುಂಬಿ ಕೊಡುವ ಭರವಸೆ ನೀಡಿದೆ. ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಈಗಷ್ಟೇ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸ ಸರ್ಕಾರ ಪ್ರಯಾಣಿಕರ ದರ ಹೆಚ್ಚಿಸಲು ಸದ್ಯಕ್ಕೆ ಅವಕಾಶ…
ಉಚಿತ ಬಸ್ ಪಾಸ್ಗಾಗಿ ಜೂ.19ರಂದು ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ
June 15, 2018ಮೈಸೂರು: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಜೂ.19ರಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದು, ಅಂದು ರಾಜ್ಯ, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಐಡಿಎಸ್ಓ ಜಿಲ್ಲಾಧ್ಯಕ್ಷ ಬಸವರಾಜು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಡಿಎಸ್ಓ, ಎಐಡಿವೈಓ ಹಾಗೂ ಎಐಎಂಎಸ್ಎಸ್ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಗಳು ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ….
ಉಚಿತ ಬಸ್ಪಾಸ್ಗಾಗಿ ಎಸ್ಎಫ್ಐ ಪ್ರತಿಭಟನೆ
June 14, 2018ಹಾಸನ: ರಾಜ್ಯದಲ್ಲಿ ಉನ್ನತ ಶಿಕ್ಷಣದವರೆಗೂ ಸಾರ್ವತ್ರಿಕವಾಗಿ ಉಚಿತ ಬಸ್ಪಾಸ್ ನೀಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ ನೇತೃತ್ವ ದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ವಿದ್ಯಾರ್ಥಿಗಳು, ಘೋಷಣೆ ಗಳನ್ನು ಕೂಗುವ ಮೂಲಕ ಬೇಡಿಕೆ ಈಡೇ ರಿಕೆಗೆ ಆಗ್ರಹಿಸಿದರು. ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡ ಬೇಕೆಂದು ಹಿಂದಿನಿಂದಲೂ ಎಸ್ಎಫ್ಐ ಸಂಘಟನೆ ಹೋರಾಡುತ್ತಾ ಬಂದಿದೆ. ರಾಜ್ಯ ಕಳೆದ ಮೂರು ವರ್ಷಗಳಿಂದ ತೀವ್ರ ಬರ ಎದುರಿಸುತ್ತಿದೆ. ಇದರಿಂದ ಪೋಷಕರು ಶಾಲಾ…