ಮಂಡ್ಯ: ಗಗನಚುಕ್ಕಿ ಜಲಪಾತ ಧುಮ್ಮಿಕ್ಕಿ ಭೋರ್ಗರೆಯುತ್ತಾ ರಾಜ್ಯದ ಹಾಗೂ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಅತ್ಯಾವಶ್ಯಕ ಮೂಲ ಸೌಲಭ್ಯಗಳನ್ನು ಗಗನಚುಕ್ಕಿ ಜಲಪಾತ ಪ್ರವಾಸಿ ತಾಣದಲ್ಲಿ ಆದ್ಯತೆ ಮೇಲೆ ಅಭಿವೃದ್ಧಿ ಪಡಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹರೀಶ್ ತಿಳಿಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಸ್ಥಳೀಯ ಗ್ರಾಪಂ ಮೂಲಕ ಉಚಿತ ಕುಡಿಯುವ ನೀರಿನ ವ್ಯವಸ್ಥೆ, ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ಮಹಿಳೆಯರ ಮತ್ತು ಪುರುಷರ ಪ್ರತ್ಯೇಕ ಶೌಚಾಲಯಗಳ ನ್ನೊಳಗೊಂಡ ಶೌಚಾಲಯ ಬ್ಲಾಕ್‍ಗಳ ನಿರ್ಮಾಣ,…