ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಮಹಾತ್ಮ ಗಾಂಧೀಜಿ ಅವರ ಬದುಕಿನ ವಿವಿಧ ಸನ್ನಿವೇಶಗಳ ಸಿಮೆಂಟ್ ಕಲಾಕೃತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಂಗಳವಾರ ಲೋಕಾರ್ಪಣೆ ಮಾಡಿದರು. ಗಾಂಧೀಜಿಯ 150ನೇ ಜನ್ಮದಿನಾ ಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ರಂಗಾಯಣ ಮತ್ತು ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರೂಪುಗೊಂಡಿರುವ ಶಿಲ್ಪಕಲಾ ಶಿಬಿರದಲ್ಲಿ 27 ಕಲಾಕೃತಿಗಳನ್ನು ತಯಾರಿಸಲಾಗಿದೆ. ಮಾನಸಗಂಗೋತ್ರಿಯ ಕ್ಯಾಂಪಸ್ ಪ್ರವೇಶ ದ್ವಾರದ ಬಳಿ ನಿರ್ಮಿಸಿರುವ ದಂಡಿ ಯಾತ್ರೆ (ಸದ್ಭಾವನಾ…