ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿಸಣ್ಣ ರೈತರಿಂದ ಗಂಗಾಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 60 ವರ್ಷದೊಳಗಿನ ವಯೋ ಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಾಗಿದ್ದಲ್ಲಿ 98 ಸಾವಿರ ರೂ. ಹಾಗೂ ನಗರ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 20 ಸಾವಿರ ರೂ. ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಪರಿಶಿಷ್ಟ ಜಾತಿಯ…