ನವದೆಹಲಿ: ಮಾಜಿ ರಕ್ಷಣಾ ಸಚಿವ,ತುರ್ತು ಪರಿಸ್ಥಿತಿ ವಿರೋಧಿ ಹೋರಾಟ ಗಾರ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಆಲ್ಝೈಮರ್ ಎಂಬ ನೆನಪು ಶಕ್ತಿ ಕೊರತೆ ಮತ್ತು ಪಾರ್ಕಿನ್ಸನ್ ಎಂಬ ನರಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇತ್ತೀಚೆಗೆ ಕೆಲ ದಿನಗಳಿಂದ ಅವರಿಗೆ ಹಂದಿ ಜ್ವರ ಕೂಡ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ 1998ರಿಂದ 2004ರವರೆಗೆ ರಕ್ಷಣಾ ಸಚಿವರಾಗಿದ್ದರು. 2010ರವರೆಗೆ ಸಕ್ರಿಯ ರಾಜಕಾರಣದಲ್ಲಿದ್ದ…