ಮೈಸೂರು: ಕನ್ನಡ ರಂಗಭೂಮಿಯ ದಿಗ್ಗಜ, ಕನ್ನಡದ ಮೊದಲ ವಾಕ್ಚಿತ್ರದ ನಾಯಕ ನಟ ಸುಬ್ಬಯ್ಯ ನಾಯ್ಡು ಅವರ ನಾಟಕ ಸಂಸ್ಥೆಯಾದ `ಶ್ರೀ ಸಾಹಿತ್ಯ ಸಾಮ್ರಾಜ್ಯ’ ನಾಟಕ ಮಂಡಳಿ ವತಿಯಿಂದ ಮೇ 19ರಂದು ಸಂಜೆ 5 ಗಂಟೆಗೆ ಮೈಸೂರಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ `ಲೋಕೇಶ್ ನೆನಪು’ 16ನೇ ವರ್ಷದ ಕಾರ್ಯಕ್ರಮದಲ್ಲಿ ವೃತ್ತಿ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದ ಹಲವು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥೆ ನಟಿ ಗಿರಿಜಾ ಲೋಕೇಶ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ…