ಚಾಮರಾಜನಗರ: ಚಾಮರಾಜನಗರದ ಸರ್ಕಾರಿ ನರ್ಸಿಂಗ್ ಶಾಲೆಗೆ ಪ್ರಸ್ತುತ 2018-19ನೇ ಸಾಲಿಗೆ ಪ್ರವೇಶ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ವೈದ್ಯ ಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ‘ಮೈಸೂರು ಮಿತ್ರ’ನಿಗೆ ಲಭ್ಯ ವಾಗಿದ್ದು, ಜಿಲ್ಲಾ ಕೇಂದ್ರವಾದ ಚಾಮ ರಾಜನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಹಿಂಭಾಗದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನರ್ಸಿಂಗ್ ಶಾಲೆಯಲ್ಲಿ ಖಾಯಂ ಬೋಧಕರು ಇಲ್ಲದಿರುವುದು ಹಾಗೂ ಶಾಲೆಯಲ್ಲಿ ಮೂಲ ಭೂತ ಸೌಲಭ್ಯಗಳ ಕೊರತೆ ಇರುವುದು ಕಂಡು…