ಯಾದಗಿರಿ: ಹೆಚ್.ಡಿ.ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ಕ್ಷೇತ್ರದ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ ವಾಸ್ತವ್ಯವನ್ನು ಆರಂಭಿಸಿದರು. ಮುಖ್ಯಮಂತ್ರಿಗಳು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಿದರು. ಮುಖ್ಯ ಮಂತ್ರಿಗಳ ವಾಸ್ತವ್ಯಕ್ಕಾಗಿ ಚಂಡರಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಣ್ಣ ಬಳಿದು ಸಿಂಗರಿಸಲಾಗಿತ್ತು. ಕಳೆದ 1 ವರ್ಷದ ವಿವಿಧ ಇಲಾಖೆಗಳ ಸಾಧನೆಗಳನ್ನು ಬಿಂಬಿಸುವ ಮಳಿಗೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸ್ಥಾಪಿಸಲಾಗಿತ್ತು. ಈ ಮಳಿಗೆಯನ್ನು…