ಭಾರತೀನಗರ: ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಬುಧವಾರ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಮದ್ದೂರು-ಮಳವಳ್ಳಿ ಮುಖ್ಯರಸ್ತೆ ಯನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರು ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಬರಗಾಲಕ್ಕೆ ಸಿಲುಕಿ ನಷ್ಟ ಅನುಭವಿಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಹಾಗೂ ಕೃಷಿಗಾಗಿ ಸಾಲ ಸಿಗದಿದ್ದ ಸಂದರ್ಭದಲ್ಲಿ ಚಿನ್ನಾ ಭರಣ…
ಮೈಸೂರು-ತಲಚೇರಿ ರೈಲು ಮಾರ್ಗ ಸರ್ವೇಗೆ ಅನುಮತಿ ನೀಡಿಲ್ಲ
July 12, 2018ಮಡಿಕೇರಿ: ದಕ್ಷಿಣ ಕೊಡಗಿನ ಮೂಲಕ ಹಾದು ಹೋಗಲಿರುವ ಮೈಸೂರು-ತಲಚೇರಿ ಉದ್ದೇಶಿತ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ ಪ್ರಸ್ತುತ ರೈಲು ಮಾರ್ಗದ ಸರ್ವೇ ಕಾರ್ಯ ಉಲ್ಲೇಖಿಸಿ ಸಭಾಪತಿಗಳಿಗೆ ಪತ್ರ ಬರೆದಿದ್ದರು. ಅಲ್ಲದೆ ಶೂನ್ಯ ವೇಳೆಯಲ್ಲಿ ಈ ವಿಚಾರದ ಪ್ರಸ್ತಾಪಕ್ಕೆ ಅವಕಾಶವನ್ನು ಕೋರಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಟಷ್ಟನೆ ನೀಡಿ, ಉದ್ದೇಶಿತ ಮೈಸೂರು-ತಲಚೇರಿ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಸರ್ವೇ ಕಾರ್ಯ…
ತಮಿಳ್ನಾಡಿಗೆ ನೀರು ಬಿಡಲು ಸಿಎಂ ಸೂಚನೆ
July 11, 2018ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾ ಗುತ್ತಿದ್ದು, ಕಾವೇರಿ ಕೊಳ್ಳದ ಜಲಾಶಯ ಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ತಮಿಳು ನಾಡಿಗೆ ನೀರು ಬಿಡು ವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜುಲೈ ತಿಂಗಳಿನಲ್ಲಿ ತಮಿಳು ನಾಡಿಗೆ ಎಷ್ಟು ನೀರು ಬಿಡಬೇಕೋ ಅಷ್ಟು ನೀರನ್ನು ಬಿಡಿ ಎಂದು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದುಹೋಗುತ್ತದೆ. ಇದರ ಜೊತೆಗೆ ಜಲಾಶಯದಿಂದಲೂ…
ಬಜೆಟ್ ಅಸಮತೋಲನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ನಾಂದಿ: ಶ್ರೀರಾಮುಲು
July 10, 2018ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್, ಪ್ರಾದೇಶಿಕ ಅಸಮತೋಲನದಿಂದ ಕೂಡಿದೆ. ಇದನ್ನು ಸರಿಪಡಿಸದಿದ್ದರೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಪುಷ್ಠಿ ನೀಡಿದಂತಾಗುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸೋನಾರ್ ಬೀದಿಯ ಅವಧೂತ ಪೀಠದ ಶ್ರೀ ಅರ್ಜುನ್ ಗುರೂಜಿ ಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಹೆಚ್‍ಡಿಕೆ ಮಂಡಿಸಿರುವ ಬಜೆಟ್, ಕೇವಲ ಹಳೇ ಮೈಸೂರು ಪ್ರಾಂತ್ಯಕ್ಕೆ ಮಾತ್ರ ಸಿಮಿತವಾಗಿದೆ ಎಂಬ ಭಾವನೆ ಉತ್ತರ ಕರ್ನಾಟಕದ ಜನರಲ್ಲಿ ಮೂಡಿದೆ….
ಮೈಸೂರು-ಬೆಂಗಳೂರು ನೈಸ್ ರಸ್ತೆ ಯೋಜನೆ ರದ್ದು ಸಂಭವ: ಹೆಚ್‍ಡಿಕೆ
July 10, 2018ಬೆಂಗಳೂರು: ಮೈಸೂರು-ಬೆಂಗಳೂರು ನಡುವಣ ನೈಸ್ ರಸ್ತೆ ಯೋಜನೆಯ ಒಪ್ಪಂದ ರದ್ದುಗೊಳಿಸುವ ಇಂಗಿತವನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡುವಾಗ ಬಿಜೆಪಿ ಸದಸ್ಯರ ಕುಹಕ ಮಾತಿಗೆ ನಾನು ಅಧಿಕಾರಕ್ಕೆ ಬಂದು 40 ದಿನಗಳು ಕಳೆದಿದೆ ಯಷ್ಟೆ. ರಾಜ್ಯದ ಜನತೆಗೆ ನೀಡಿರುವ ಆಶ್ವಾಸನೆಗಳ ಜೊತೆಗೆ ಹಿಂದೆ ಸರ್ಕಾರದ ಕಡತದಲ್ಲಿ ಉಳಿದಿರುವ ಕೆಲವು ಪ್ರಮುಖ ವಿಷಯಗಳಿಗೂ ಮೋಕ್ಷ ನೀಡುತ್ತೇನೆ. ಇಂತಹ ವಿಚಾರಗಳನ್ನು ಕೈಗೆತ್ತಿಕೊಳ್ಳುವುದಕ್ಕೂ ಮುನ್ನ ನನ್ನ ಹಿರಿಯ ಸಚಿವ ಸಹೋದ್ಯೋಗಿಗಳು,…
ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ
July 10, 2018ಹಾಸನ: ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಸು ವಂತೆ ಘೋಷಣೆ ಕೂಗಿದರು. ನಾಲ್ಕೈದು ವರ್ಷದಿಂದ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ಬಾರಿ ಪೂರ್ವ ಮುಂಗಾರಿನಿಂದ ಹರ್ಷಗೊಂಡ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಆರಂಭವಾಗಿ ನಿಂದಲೂ…
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
July 10, 2018ಕುಮಾರಸ್ವಾಮಿ, ಪರಮೇಶ್ವರ ಅವರ ಪ್ರತಿಕೃತಿ ದಹನ ಚಾ.ನಗರ- ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ ಗುಂಡ್ಲುಪೇಟೆ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದ ಮುಂಭಾಗ ಸಮಾವೇಶಗೊಂಡ ರೈತರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ…
ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಜಂಗಿ ಕುಸ್ತಿ
July 9, 2018ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಮಿತ್ರ ಪಕ್ಷಗಳ ಕಾಂಗ್ರೆಸ್ ಮತ್ತು ಜೆಡಿಎಸ್ ಬಗ್ಗೆ ಜಂಗಿ ಕುಸ್ತಿ ಆರಂಭವಾಗಿದೆ. ಪರಿಷತ್‍ನಲ್ಲಿ ಹಾಲಿ ಹಂಗಾಮಿ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರನ್ನೇ ಖಾಯಂ ಸಭಾಪತಿ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಟ್ಟು ಹಿಡಿದಿದ್ದರೆ, ತಮ್ಮ ಆಪ್ತರಾದ ಎಸ್.ಆರ್.ಪಾಟೀಲ್ ಅವರಿಗೆ ಆ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗಿ ಪಟ್ಟು ಹಿಡಿದಿದ್ದಾರೆ. ಪರಿಷತ್‍ನಲ್ಲಿ ಸಂಖ್ಯಾ ಬಲದ ಮೇಲೆ ಸಭಾಪತಿ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ವಾದಿಸುತ್ತಿದೆ. 75 ಸ್ಥಾನಗಳ ಪೈಕಿ 35 ಸ್ಥಾನ…
ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ
July 9, 2018ಮೈಸೂರು: ರಾಜ್ಯ ರೈತರ ಬೆಳೆಸಾಲದ ಒಟ್ಟು 53 ಸಾವಿರ ಕೋಟಿ ರೂ. ಅನ್ನು ಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಸ್ತಿ ಉಳಿಸಿಕೊಂಡ ರೈತರ 2 ಲಕ್ಷ ರೂ.ವರೆಗಿನ ಬೆಳೆಸಾಲ ಮನ್ನಾ ಮಾಡುವ ಘೋಷಣೆ ಮೂಲಕ ಮಾತಿಗೆ ತಪ್ಪಿ ರೈತ ಸಮುದಾಯವನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಿಡಿಕಾರಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ…
ಹೆಚ್‍ಡಿಕೆಯಿಂದ ರೈತರ ಬೇಡಿಕೆ ಈಡೇರಿಕೆ
July 9, 2018ಮದ್ದೂರು: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಆತಂಕ ಬೇಡ. ಆದರೆ ಕಾಲಾವಕಾಶ ಬೇಕು ಎಂದು ಶಾಸಕ ಸುರೇಶ್‍ಗೌಡ ತಿಳಿಸಿದರು. ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದ ತೋಪಿನ ತಿಮ್ಮಪ್ಪ ದೇವರ ಹರಿಸೇವೆ ಯಲ್ಲಿ ಮಾತನಾಡಿದ ಅವರು, ಸಿಎಂ ಅವರು ಸಿದ್ದರಾಮಯ್ಯರ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಜೊತೆಗೆ ರೈತರ ಸಾಲ ಮನ್ನಾ ಮಾಡಿ ದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ರೈತರಿಗೆ ಹಾಗೂ ಎಲ್ಲ ಸಮುದಾಯಗಳಿಗೆ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ ಎಂದು…