ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಲೋಕೋ ಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪಾಲ್ಗೊಂಡು ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ವಿಶೇಷ ಪೂಜೆ ಸಲ್ಲಿಸಿದರೆ, ಸಂಸದೆ ಶೋಭ ಕರಂದ್ಲಾಜೆ ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿದರು. ಸಚಿವ ಹೆಚ್.ಡಿ.ರೇವಣ್ಣರಿಂದ ಪೂಜೆ: ಕೆಲ ದಿನಗಳಿಂದ ಟೆಂಪಲ್ ರನ್ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಇಂದು…