ಚಾಮರಾಜನಗರ: ‘ರಂಗಭೂಮಿಯ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸಿ ಮಕ್ಕಳ ರಂಗಭೂಮಿ ಚಟುವಟಿಕೆಯನ್ನು ರಾಜ್ಯವ್ಯಾಪ್ತಿ ವಿಸ್ತರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ನಾಟಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಮೈಸೂರಿನ ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ದನ್ (ಜನ್ನಿ) ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಅಭಿರುಚಿ ಸಾಹಿತ್ಯ ಸಾಂಸ್ಕೃತಿಕಯುವ ಸಂಘಟನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏರ್ಪಡಿಸಿದ್ದ ‘ಪರಿವರ್ತನ’ ಮಕ್ಕಳ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ…