ಮೈಸೂರು: ಮೈಸೂರು ಸಂಸ್ಥಾನದ ಅಶ್ವದಳ ಸೈನಿಕರು ಭಾಗಿಯಾಗಿದ್ದ ಇಸ್ರೇಲ್‍ನ `ಹೈಫಾ ಯುದ್ಧ’ದ ಶತಮಾನೋತ್ಸವ ಸಮಾರಂಭವನ್ನು ಸೆ.23ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಅಂದು ಸಂಜೆ 6ಕ್ಕೆ ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ‘ಹೈಫಾ ಯುದ್ಧ’ ಶತಮಾನೋತ್ಸವ ಸಂಭ್ರಮಾಚರಣೆ ಸಮಾರಂಭ ನಡೆಯ ಲಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದರಾದ ಆರ್.ಧ್ರುವನಾರಾಯಣ್, ಪ್ರತಾಪ್‍ಸಿಂಹ ಪಾಲ್ಗೊಳ್ಳಲಿದ್ದಾರೆ. ಹೈಫಾ ಯುದ್ಧದಲ್ಲಿ ಪಾಲ್ಗೊಂಡಿದ್ದ…